ಕಡು ಬಡವರ ಮನೆ ಬಾಗಿಲಿಗೆ ಉಚಿತ ವೈದ್ಯಕೀಯ ಸೇವೆ

KannadaprabhaNewsNetwork |  
Published : Nov 17, 2024, 01:21 AM IST
ಚಿತ್ರದುರ್ಗ ಪೋಟೋ ಸುದ್ದಿ111  | Kannada Prabha

ಸಾರಾಂಶ

Free medical service at the doorstep of the poorest of the poor

-ಗುಡ್ಡದ ರಂಗವ್ವನಹಳ್ಳಿ ಗ್ರಾಮದಲ್ಲಿ ಆರೋಗ್ಯ ತಪಾಸಣೆಯಲ್ಲಿ ಡಾ.ರವೀಂದ್ರ

-----

ಕನ್ನಡಪ್ರಭವಾರ್ತೆ, ಚಿತ್ರದುರ್ಗ

ಉಚಿತ ಆರೋಗ್ಯ ತಪಾಸಣೆ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲಾಗುವುದು ಎಂದು ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ರವೀಂದ್ರ ತಿಳಿಸಿದರು.

ನಿಸರ್ಗ ಚಾರಿಟಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಗುಡ್ಡದರಂಗವ್ವನಹಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು ಬದಲಾದ ಆಹಾರ ಪದ್ಧತಿ ಹಾಗೂ ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರು ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುವುದು ಸಹಜ. ಎಲ್ಲರೂ ಜಿಲ್ಲಾಸ್ಪತ್ರೆ ಹಾಗೂ ಹೈಟೆಕ್ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುವುದು ಕಷ್ಟ. ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದು ಹಳ್ಳಿಗಾಡಿನ ಜನ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕೆಂದು ಮನವಿ ಮಾಡಿದರು.

ತಾಲೂಕು ವೈದ್ಯಾಧಿಕಾರಿ ಗಿರೀಶ್ ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಭೇಟಿಯಾಗಿ ಚಿಕಿತ್ಸೆ ಪಡೆಯುವುದು ಗ್ರಾಮೀಣ ಪ್ರದೇಶದ ಜನರಿಗೆ ಕಷ್ಟ. ಅದಕ್ಕಾಗಿ ಹಳ್ಳಿಗಾಡಿನಲ್ಲಿ ಆಯೋಜಿಸಲಾಗಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಪ್ರಯೋಜನ ಪಡೆದು ಕಾಯಿಲೆಗಳಿಗೆ ಚಿಕಿತ್ಸೆ ಹಾಗೂ ವೈದ್ಯರ ಸಲಹೆ ಪಡೆದುಕೊಳ್ಳಬಹುದು ಎಂದು ಹೇಳಿದರು.

ನಿಸರ್ಗ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ದುರುಗೇಶ್, ಕಾರ್ಯದರ್ಶಿ ನಾಗರಾಜ್, ಪದಾಧಿಕಾರಿಗಳಾದ ಶ್ರೀನಾಥ್, ಶಶಿಕುಮಾರ್, ರಾಘವೇಂದ್ರ, ಮನು, ತಜ್ಞ ವೈದ್ಯರಾದ ಗೀತಾಂಜಲಿ, ವಾಣಿ, ಪ್ರಜ್ವಲ್, ಗ್ರಾ.ಪಂ ಕಾರ್ಯದರ್ಶಿ ತುರುವೇಶ್, ಸದಸ್ಯರು ಹಾಗೂ ಲ್ಯಾಬ್ ಟೆಕ್ನಿಷಿಯನ್, ಆಶಾ ಕಾರ್ಯಕರ್ತೆಯರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು.

ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಹಾಗೂ ಜಾಂಡಿಸ್ ಕಾಯಿಲೆಗಳ ತಪಾಸಣೆ ನಡೆಸಲಾಯಿತು. ನೂರೈವತ್ತಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.

-------------

ಪೋಟೋ: ಚಿತ್ರದುರ್ಗ ತಾಲೂಕಿನ ಗುಡ್ಡದರಂಗವ್ವನಹಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ ಉದ್ಘಾಟಿಸಿದರು.

---------

ಪೋಟೋ: 15 ಸಿಟಿಡಿ8

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''