ಕನ್ನಡಪ್ರಭ ವಾರ್ತೆ ಮಂಡ್ಯ
ಕಾರ್ಯಕ್ರಮವನ್ನು ಫೌಂಡೇಶನ್ ಖಜಾಂಚಿ ಶಶಿಕುಮಾರ್ ಉದ್ಘಾಟಿಸಿ ಮಾತನಾಡಿ, ಫೌಂಡೇಶನ್ ಸಂಸ್ಥಾಪಕ ಮಹಾಲಿಂಗೇಗೌಡರ ನೇತೃತ್ವದಲ್ಲಿ 15 ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ಮಾಡುತ್ತಾ ಬಂದಿದೆ. ಅದರಂತೆ ಇಂದು ಬಸರಾಳು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನುವಿತರಿಸಲಾಗುತ್ತಿದೆ ಎಂದರು.
ತಾಲೂಕಿನಾದ್ಯಂತ ಒಂದು ಲಕ್ಷ ನೋಟ್ ಬುಕ್ ಗಳನ್ನು ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿತರಿಸಲು ಗುರಿ ಹೊಂದಲಾಗಿದೆ. ಮಕ್ಕಳು ಇದರ ಪ್ರಯೋಜನ ಪಡೆದು ಉತ್ತಮವಾಗಿ ಅಭ್ಯಾಸ ಮಾಡಿ ಉನ್ನತ ಮಟ್ಟಕ್ಕೆ ಏರಬೇಕು ಎಂದರು.ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ಹಲವು ಸಮಾಜ ಮುಖಿ ಕಾರ್ಯಕ್ರಮ ಮಾಡುತ್ತಿದೆ. ಎಲ್ಲರೂ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಇಂದು ಮಾಜಿ ಸ್ಪೀಕರ್ ದಿ.ಕೃಷ್ಣರ ಹುಟ್ಟುಹಬ್ಬ, ಸಾಧಕರಿಗೆ ಪುರಸ್ಕಾರ
ಮಾಜಿ ಸ್ಪೀಕರ್ ದಿ.ಕೃಷ್ಣರ 85ನೇ ಹುಟ್ಟುಹಬ್ಬದ ಅಂಗವಾಗಿ ಕೃಷ್ಣ ಪ್ರತಿಷ್ಠಾನದ ವತಿಯಿಂದ ಜುಲೈ 1 ರಂದು ಪಟ್ಟಣದ ಹೋಟೆಲ್ ರಾಮದಾಸ್ ಸುಲೋಚನಮ್ಮ ಸಭಾಂಗಣದಲ್ಲಿ ಸಾಧಕರಿಗೆ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷ್ಣ ಪ್ರತಿಷ್ಠಾನದ ಅಧ್ಯಕ್ಷ ಗೂಡೇಹೊಸಹಳ್ಳಿ ಜವರಾಯಿಗೌಡ ತಿಳಿಸಿದರು.
ಅಂದು ಬೆಳಗ್ಗೆ 10.30ಕ್ಕೆ ಸಾಧಕರಿಗೆ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಕಲ್ಬುರ್ಗಿ ಜಿಲ್ಲೆಯ ಅಳಂದ ಕ್ಷೇತ್ರದ ಶಾಸಕ ಹಾಗೂ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಉದ್ಘಾಟಿಸಲಿದ್ದಾರೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಾಧಕರಿಗೆ ಕೃಷ್ಣ ಪುರಸ್ಕಾರ ನೀಡಲಿದ್ದಾರೆ. ಶಾಸಕ ಹೆಚ್.ಟಿ.ಮಂಜು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಪುರಸಭೆ ಅಧ್ಯಕ್ಷೆ ಪಂಕಜ ಪ್ರಕಾಶ್, ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.