ಶಾಲಾ ಮಕ್ಕಳಿಗೆ ಉಚಿತ ಸ್ಮಾರ್ಟ್ ಕ್ಲಾಸ್, ಪರಿಸರ ಕಾರ್ಯಚಟುವಟಿಕೆ

KannadaprabhaNewsNetwork |  
Published : Sep 05, 2025, 01:01 AM IST
ಕಾರ್ಯಚಟುವಟಿಕೆ | Kannada Prabha

ಸಾರಾಂಶ

ವಿಜ್ಞಾನ ಶಿಕ್ಷಕರಾಗಿ ಕೆಲಸ ಮಾಡುತ್ತಿರುವ ಡಿ. ಕೃಷ್ಣ ಚೈತನ್ಯ ಅವರು ವಿದ್ಯಾರ್ಥಿಗಳಿಗಾಗಿ ತಮ್ಮ ಸ್ವಂತ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್‌ ಮಾಡುತ್ತಿದ್ದಾರೆ.

ವಿಘ್ನೇಶ್ ಎಂ.ಭೂತನಕಾಡುಕನ್ನಡಪ್ರಭ ವಾರ್ತೆ ಮಡಿಕೇರಿತಮ್ಮ ಶಾಲೆಯ ಮಕ್ಕಳಿಗಾಗಿ ಈ ಶಿಕ್ಷಕ ತಮ್ಮ ಸ್ವಂತ ಖರ್ಚಿನಲ್ಲಿ ಉಚಿತ ಸ್ಮಾರ್ಟ್ ಕ್ಲಾಸ್ ನೀಡುವುದು ಸೇರಿದಂತೆ ಹಲವು ವಿಶೇಷ ಕಾರ್ಯಚಟುವಟಿಕೆಯನ್ನು ನಡೆಸುವ ಮೂಲಕ ಮಾದರಿ ಶಿಕ್ಷಕರಾಗಿ ಗುರುತಿಸಿಕೊಂಡಿದ್ದಾರೆ.ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ಅನುದಾನುನಿತ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕೆಲಸ ಮಾಡುತ್ತಿರುವ ಡಿ. ಕೃಷ್ಣ ಚೈತನ್ಯ ಅವರು ವಿದ್ಯಾರ್ಥಿಗಳಿಗಾಗಿ ತಮ್ಮ ಸ್ವಂತ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಮಾಡುತ್ತಿದ್ದಾರೆ. ಶಾಲೆಯಲ್ಲಿ ಔಷಧಿ ಸಸ್ಯಗಳ ಉದ್ಯಾನವನ, ಕ್ಯಾಕ್ಟಸ್ ಹಾಗೂ ಚಿಟ್ಟೆ ಉದ್ಯಾನವನವನ್ನು ನಿರ್ಮಿಸಿದ್ದಾರೆ.ಶಾಲೆ ಸೇರಿದಂತೆ ಇತರೆ ಕಡೆಗಳಲ್ಲಿ ಸುಮಾರು 2100ಕ್ಕೂ ಅಧಿಕ ಹೂವಿನ ಗಿಡ, ಹಣ್ಣಿನ ಮರ ಹಾಗೂ ಇತರೆ ಕಾಡು ಜಾತಿಯ ಗಿಡಗಳನ್ನು ನೆಡುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ ಮೂಡಿಸಿದ್ದಾರೆ. ಪಠ್ಯಕ್ಕೆ ಸಂಬಂಧಿಸಿದಂತೆ ವಿಜ್ಞಾನ ವಿಷಯದಲ್ಲಿ ಎಲ್ಲಾ ಪ್ರಾಯೋಗಿಕ ಪ್ರಯೋಗಗಳನ್ನು ನಡೆಸುತ್ತಿದ್ದಾರೆ. ಪ್ರಯೋಗ ಹಾಗೂ ಚಟುವಟಿಕೆಗಳನ್ನು ಕೂಡ ವಿದ್ಯಾರ್ಥಿಗಳಿಂದಲೇ ಮಾಡಲಾಗುತ್ತಿದೆ. ನಿಸರ್ಗ ತರಗತಿಗಳನ್ನು ಶಾಲೆಯ ಹೊರ ಆವರಣದಲ್ಲಿ ಮಕ್ಕಳಿಗೆ ನಡೆಸಲಾಗುತ್ತಿದೆ.ವಿಶ್ವ ಪರಸರ ದಿನ, ವನಮಹೋತ್ಸವ ದಿನ, ವಿಶ್ವ ಓಜೋನ್ ದಿನ ಮತ್ತಿತರ ಕಾರ್ಯಕ್ರಮಗಳು, ಪರಿಸರದ ನಡಿಗೆ, ಪಕ್ಷಿ ವೀಕ್ಷಣೆ, ನೇಚರ್ ಕ್ಯಾಂಪ್ ಗಳನ್ನು, ವನ್ಯ ಜೀವಿಗಳ ಸಂರಕ್ಷಣೆ ಬಗ್ಗೆ ಸುಮಾರು 145ಕ್ಕೂ ಅಧಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿಯನ್ನು ಮೂಡಿಸಿದ್ದಾರೆ.ಮಳೆ ನೀರಿನ ಇಂಗು ಗುಂಡಿ ಮಾಡಿ ವಿದ್ಯಾರ್ಥಿಗಳಲ್ಲಿ ಮಳೆ ನೀರಿನ ಸಂರಕ್ಷಣೆ ಮಾಡಲಾಗುತ್ತಿದೆ. ವಿಜ್ಞಾನ ಚಾರ್ಟ್ ಹಾಗೂ ಮಾದರಿ ಮಾಡಲಾಗಿದೆ. ಪಠ್ಯೇತರ ಚಟುವಟಿಕೆಗಳಲ್ಲಿ ಸಂಗೀತಾಭ್ಯಾಸವನ್ನು ಕೂಡ ಮಾಡುತ್ತಾರೆ. ತಮ್ಮ ಶಾಲೆಯನ್ನು ಪ್ಲಾಸ್ಟಿಕ್ ಮುಕ್ತ ಶಾಲೆ ಮಾಡುವಲ್ಲಿ ಶ್ರಮ ವಹಿಸಿದ್ದಾರೆ.ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಅಭ್ಯಾಸ ಮಾಡಲಾಗುತ್ತಿದೆ. ಪ್ರತಿ ವರ್ಷ ಉತ್ತಮ ಫಲಿತಾಂಶವನ್ನು ತಂದುಕೊಡುತ್ತಿದ್ದಾರೆ. ಈಗಾಗಲೇ ರಾಜ್ಯದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

PREV

Recommended Stories

ಬಿಆರ್‌ಎಲ್ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಚಿರಕಾಲ ಉಳಿಯುವ ಆಪ್ತಭಾವದ ಕವಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌