ಕನಕಗಿರಿ:
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಗಂಗಾವತಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕನಕಗಿರಿ ಸಹಯೋಗದಲ್ಲಿ ಸೋಮವಾರ ಇಲ್ಲಿನ ಸಂತೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಶ್ರವಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರವಣ ದೋಷ ಹಾಗೂ ಕಿವುಡುತನದ ತಡೆಗಟ್ಟುವಿಕೆಗಾಗಿ ಜಾಗೃತಿ ಮೂಡಿಸಿ ನಿಯಂತ್ರಿಸಲು ಪ್ರತಿ ವರ್ಷ ಮಾ. ೩ರಂದು ವಿಶ್ವ ಶ್ರವಣ ದಿನ ಆಚರಿಸಲಾಗುತ್ತಿದೆ. ಕಿವಿ ದೋಷವಿದೆಯೆಂದು ಕಿವಿಯಲ್ಲಿ ಕಡ್ಡಿ ಹಾಕಬಾರದು, ಎಣ್ಣೆ ಹಾಕಬಾರದು, ನಕಲಿ ವೈದ್ಯರ ಬಳಿ ಹೋಗಿ ಕಿವಿಯಲ್ಲಿ ಗುಗ್ಗೆ ತೆಗೆಸಿಕೊಳ್ಳಬಾರದು, ವೈದ್ಯರ ಸಲಹೆ ಇಲ್ಲದೆ ಕಿವಿಯಲ್ಲಿ ಏನು ಹಾಕಬಾರದು. ಕಲುಷಿತ ನೀರಿನಲ್ಲಿಯೂ ಈಜಬಾರದು. ಕಿವಿನೋವು, ಸೋರುವಿಕೆ ಕಂಡು ಬಂದರೆ ತಾಲೂಕು, ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಕಿವಿ, ಮೂಗು, ಗಂಟಲು ತಜ್ಞರನ್ನು ಸಂಪರ್ಕಿಸುವಂತೆ ತಿಳಿಸಿದರು.ಇಎನ್‌ಟಿ ವೈದ್ಯ ಡಾ. ಅವಿನಾಶ, ರಾಷ್ಟ್ರೀಯ ಶ್ರವಣ ದೋಷ ನಿವಾರಣ ಮತ್ತು ನಿಯಂತ್ರಣ ಕಾರ್ಯಕ್ರಮ ನವಜಾತು ಶಿಶುವಿನ ಕಿವಿಯ ಆರೈಕೆ ಮತ್ತು ಸದರಿ ಕಾರ್ಯಕ್ರಮದಡಿ ಸಿಗುವ ಸೇವಾ ಸೌಲಭ್ಯಗಳ ಮತ್ತು ಚಿಕಿತ್ಸೆ ಕುರಿತು ವಿಶೇಷ ಉಪನ್ಯಾಸ ನೀಡಿದರು.