ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ
ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಸೋಮವಾರ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿ.ಕೆ.ನಾರಾಯಣ ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಕೃಷಿಕ ಸಮಾಜದ ಆಡಳಿತ ಮಂಡಳಿ ಸಭೆಯಲ್ಲಿ ಮಾಹಿತಿ ನೀಡಿದರು.
ಜಾನುವಾರು ಆಕಸ್ಮಿಕ ಮರಣಹೊಂದಿದರೆ 15 ಸಾವಿರ ರು., ಕುರಿಗಳು ಮರಣ ಹೊಂದಿದರೆ 7,500 ರು. ಪರಿಹಾರ ನೀಡಲು ಅವಕಾಶವಿದೆ ಎಂದರು.ಈ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ ಎನ್.ಪಿ.ರಮೇಶ್ ಮಾತನಾಡಿ, ಹಾತೂರು ಗ್ರಾಮದಲ್ಲಿ ಜಾನುವಾರಿಗೆ ಮಿಂಚು ಕಾಯಿಲೆ ಬಂದು ಸಹಾಯವಾಣಿ 1962 ಗೆ ಕರೆ ಮಾಡಿದಾಗ ಸ್ಪಂದಿಸಲಿಲ್ಲ. ಅಂಬುಲೆನ್ಸ್ ಅವರ ನಿರ್ಲಕ್ಷ್ಯದಿಂದ ಕೊಪ್ಪಕ್ಕೆ ಸ್ವಂತ ಖರ್ಚಿನಲ್ಲಿ ಜಾನುವಾರು ಕರೆದುಕೊಂಡು ಹೋಗಿ ಗ್ರಾಮಸ್ಥರು ಚಿಕಿತ್ಸೆ ಕೊಡಿಸಿದ್ದಾರೆ ಎಂದರು. ಸಭೆಯಲ್ಲಿ ಈ ವಿಷಯ ಚರ್ಚೆಗೆ ಗ್ರಾಸವಾಯಿತು.
ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ರೋಹಿತ್ ಮಾಹಿತಿ ನೀಡಿ, ಕೃಷಿ ಯಂತ್ರೋಪಕರಣ ಯೋಜನೆಯಡಿ ಅಡಕೆ ಸುಲಿಯುವ ಯಂತ್ರ, ಗೊರಬಲು ಪಾಲಿಶರ್ ಮತ್ತಿತರ ಯಂತ್ರೋಪಕರಣಗಳಿಗೆ ಸಹಾಯಧನ ಲಭ್ಯವಿದೆ. ಎಸ್.ಸಿ, ಎಸ್.ಟಿ ಹಾಗೂ ಮಹಿಳೆಯರಿಗೆ ಶೇ.50ರಷ್ಟು ಹಾಗೂ ಸಾಮಾನ್ಯ ರೈತರಿಗೆ ಶೇ.40 ಸಹಾಯಧನ ನೀಡಲಾಗುವುದು 45 ಜೇನು ಪೆಟ್ಟಿಗೆ ನೀಡಲು ಕ್ರಿಯಾಯೋಜನೆ ರೂಪಿಸಲಾಗಿದೆ ಎಂದರು.
ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ, ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ, ತಾಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ಮಂಜಪ್ಪಗೌಡ, ಪ್ರಧಾನ ಕಾರ್ಯದರ್ಶಿ ಎಚ್.ಕೆ.ನವೀನ್, ಖಜಾಂಚಿ ಬಿ.ಎಸ್.ಚೇತನ್, ಸದಸ್ಯರಾದ ಎಚ್.ಆರ್. ತಿಮ್ಮಯ್ಯ, ಎನ್.ಎಲ್.ತೀರ್ಥೇಶ್. ಎಚ್.ಎಂ.ನಾಗರಾಜ್, ಎಸ್.ಎನ್.ರಂಜಿತ್, ಎಂ.ವಿ.ಶ್ರೀನಿವಾಸ್ ಇದ್ದರು.