ಅಂಗನವಾಡಿ ಕೇಂದ್ರದ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ

KannadaprabhaNewsNetwork |  
Published : Oct 14, 2025, 01:00 AM IST
13ಕೆಎಂಎನ್ ಡಿ20 | Kannada Prabha

ಸಾರಾಂಶ

ಮಕ್ಕಳ ಮೊದಲ ಕಲಿಕಾ ಪಾಠ ಶಾಲೆಯಾದ ಅಂಗನವಾಡಿ ಮಕ್ಕಳಿಗೆ ಆರಂಭದಿಂದಲೇ ಶಿಸ್ತು ರೂಪಿಸಬೇಕು. ಆ ನಿಟ್ಟಿನಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಅಂಗನವಾಡಿಗಳಿಗೂ ವಿತರಿಸಲಾಗುವುದು.

ಪಾಂಡವಪುರ:

ತಾಲೂಕಿನ ಕನಗನಮರಡಿ ಗ್ರಾಮದ ಒಂದು ಮತ್ತು ಎರಡನೇ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸೊಸೈಟಿ ಅಧ್ಯಕ್ಷರು ಹಾಗೂ ಗ್ರಾಪಂ ಸದಸ್ಯ ಎಚ್.ಜೆ.ರಾಮಕೃಷ್ಣ ನೇತೃತ್ವದಲ್ಲಿ ಎಲ್ಲಾ ಸದಸ್ಯರು ಉಚಿತವಾಗಿ ಸಮವಸ್ತ್ರ ವಿತರಿಸಿದರು.

ಬಳಿಕ ಮಾತನಾಡಿದ ಎಚ್.ಜೆ.ರಾಮಕೃಷ್ಣ, ಗ್ರಾಮದ 1ನೇ ಹಾಗೂ 2ನೇ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಗ್ರಾಪಂ ಎಲ್ಲಾ ಸದಸ್ಯರು ಸೇರಿ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ವಿತರಣೆ ಮಾಡಿದ್ದೇವೆ. ಮಕ್ಕಳ ಮೊದಲ ಕಲಿಕಾ ಪಾಠ ಶಾಲೆಯಾದ ಅಂಗನವಾಡಿ ಮಕ್ಕಳಿಗೆ ಆರಂಭದಿಂದಲೇ ಶಿಸ್ತು ರೂಪಿಸಬೇಕು. ಆ ನಿಟ್ಟಿನಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಅಂಗನವಾಡಿಗಳಿಗೂ ವಿತರಿಸಲಾಗುವುದು ಎಂದರು.

ಈ ವೇಳೆ ಗ್ರಾಪಂ ಅಧ್ಯಕ್ಷೆ ಅಭಿ, ಸದಸ್ಯ ಮಂಜುನಾಥ್, ಮಾಜಿ ಅಧ್ಯಕ್ಷರಾದ ಸ್ವಾಮೀಗೌಡ, ಪ್ರಮೀಳ, ಮಾಜಿ ಉಪಾಧ್ಯಕ್ಷ ಕೃಷ್ಣ, ಪಿಡಿಒ ರಾಜೇಂದ್ರ, ಕಾರ್ಯದರ್ಶಿ ಎ.ಎಂ.ಜಯರಾಮು, ಅಂಗನವಾಡಿ ಕಾರ್ಯಕರ್ತೆ ಪಿ.ರೇಖಾ, ಸಹಾಯಕಿ ಮಂಗಳ ಸೇರಿದಂತೆ ಹಲವರು ಇದ್ದರು.

ಕಾಂಗ್ರೆಸ್ ನಾಯಕರ ವಿಶ್ವಾಸ ಉಳಿಸಿಕೊಳ್ಳುವೆ: ಬಿ.ನಾಗೇಂದ್ರಕುಮಾರ್

ಪಾಂಡವಪುರ:

ನನ್ನ ಅಧಿಕಾರದ ಅವಧಿಯಲ್ಲಿ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ಶೇ.100ರಷ್ಟು ನ್ಯಾಯ ಒದಗಿಸುವ ಕೆಲಸ ಮಾಡಿ ಕಾಂಗ್ರೆಸ್ ನಾಯಕರ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದು ನಿಗಮದ ನೂತನ ಅಧ್ಯಕ್ಷ ಕೆ.ಆರ್.ಪೇಟೆ ಬಿ.ನಾಗೇಂದ್ರಕುಮಾರ್ ಹೇಳಿದರು.

ಪಟ್ಟಣದ ಐದು ದೀಪದ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಕಾಂಗ್ರೆಸ್ ಮುಖಂಡರು ಅಭಿನಂದಿಸುವ ಮೂಲಕ ನನಗೆ ಮತ್ತಷ್ಟು ಜವಾಬ್ದಾರಿ ಹೆಚ್ಚಳ ಮಾಡಿದ್ದೀರಿ ಎಂದರು.

ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ನಿಷ್ಠೆಗಿಂತಲೂ ಪಕ್ಷ ನಿಷ್ಠೆಗೆ ನ್ಯಾಯ ಸಿಗಲಿದೆ ಎನ್ನುವುದಕ್ಕೆ ಬಿ.ನಾಗೇಂದ್ರ ಅವರೇ ಸೂಕ್ತ ಉದಾಹರಣೆ. ನಾಗೇಂದ್ರ ಅವರು ಜಿಪಂ ಸದಸ್ಯರಾಗಿ, ಕೆ.ಆರ್.ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ನಿಷ್ಠೆಯಿಂದ ಕೆಲಸ ಮಾಡಿದರ ಫಲವಾಗಿ ಅವರಿಗೆ ಇದೀಗ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಲಭಿಸಿದೆ ಎಂದರು.

PREV

Recommended Stories

ದೀಪಾವಳಿ ಹಬ್ಬ : ಕೆಎಸ್ಸಾರ್ಟಿಸಿಯಿಂದ 2500 ಹೆಚ್ಚುವರಿ ಬಸ್‌
ಆರೆಸ್ಸೆಸ್‌ ಚಟುವಟಿಕೆ ನಿಷೇಧ ಬಗ್ಗೆ ತಮಿಳುನಾಡು ಮಾದರಿ ಪರಿಶೀಲನೆ : ಸಿದ್ದರಾಮಯ್ಯ