ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದಲ್ಲಿ ನೀರಿನ ಸಮಸ್ಯೆ ಕುರಿತು ಶನಿವಾರ ಬಿಬಿಎಂಪಿ ಆಡಳಿತಾಧಿಕಾರಿ, ಮುಖ್ಯ ಆಯುಕ್ತರು ಹಾಗೂ ಬೆಂಗಳೂರು ಜಲ ಮಂಡಳಿ ಅಧ್ಯಕ್ಷರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಕೇಂದ್ರ ವಲಯದಲ್ಲಿ ನೀರಿನ ಪೂರೈಕೆಯ ಸಂಪೂರ್ಣ ಜವಾಬ್ದಾರಿಯನ್ನು ಬೆಂಗಳೂರು ಜಲ ಮಂಡಳಿ ನಿರ್ವಹಿಸಲಿದ್ದು, ಹೊರ ವಲಯದ 110 ಹಳ್ಳಿ ವ್ಯಾಪ್ತಿಯಲ್ಲಿ ಮಾತ್ರ ಬಿಬಿಎಂಪಿ ನಿರ್ವಹಣೆ ಮಾಡಲಿದೆ. ಸದ್ಯ ನಗರಕ್ಕೆ ಪ್ರತಿ ದಿನ 1450 ದಶಲಕ್ಷ ಲೀಟರ್ ಪಂಪ್ ಮಾಡುವುದಕ್ಕೆ ಅವಕಾಶವಿದೆ. ಆದರೆ, ಹೆಚ್ಚುವರಿ ಪಂಪ್ ಬಳಕೆ ಮಾಡಿಕೊಂಡು 1,472 ಎಂಎಲ್‌ಡಿ ನೀರು ಪೂರೈಕೆ ಮಾಡುತ್ತಿದೆ. ಖಾಸಗಿ ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಕುಸಿದಿರುವ ಹಿನ್ನೆಲೆಯಲ್ಲಿ ಕಾವೇರಿ ನೀರಿನ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಕಾವೇರಿ ನೀರಿನ ಪೂರೈಕೆ ಇಲ್ಲದ ಕಡೆ ನೀರಿನ ಸಮಸ್ಯೆ ಆಗುತ್ತಿದೆ. ಅದಕ್ಕಾಗಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.200 ಟ್ಯಾಂಕರ್ ವಶಕ್ಕೆ:
ಅಗತ್ಯ ಬಿದ್ದರೆ ಎಲ್ಲಾ ಟ್ಯಾಂಕರ್ ವಶಕ್ಕೆ:
ಸದ್ಯ ನಗರದಲ್ಲಿ 58 ಕಡೆ ನೀರಿನ ಸಮಸ್ಯೆಯಿದ್ದು, ಈ ಪೈಕಿ ಮಹದೇವಪುರ 16, ಆರ್.ಆರ್.ನಗರ 25, ಬೊಮ್ಮನಹಲ್ಳಿ 5 ಕಡೆ, ಯಲಹಂಕ ಹಾಗೂ ದಾಸರಹಳ್ಳಿ ತಲಾ 3 ಕಡೆ ನೀರಿನ ಅಭಾವ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆ ಹೆಚ್ಚಾದರೆ ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುತ್ತದೆ.ನೀರಿಗಾಗಿ ₹131 ಕೋಟಿ
ಇದಲ್ಲದೇ, ಉಪ ಮುಖ್ಯಮಂತ್ರಿಗಳ ವಿವೇಚನೆಯಲ್ಲಿ ಮೀಸಲಿಟ್ಟ ಅನುದಾನದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹10 ಕೋಟಿ ನೀಡಲಾಗಿದೆ. ಆ ಹಣವನ್ನೂ ಬಳಕೆ ಮಾಡಿಕೊಂಡು ಕೊಳವೆ ಬಾವಿ ಕೊರೆಯಲಾಗುವುದು. ಜಲ ಮಂಡಳಿಯು ನೀರಿನ ಸಮಸ್ಯೆ ಇರುವ ಕಡೆ ಕೊಳವೆ ಬಾವಿ ಕೊರೆಯುವುದಕ್ಕೆ ₹20 ಕೋಟಿ ಮೀಸಲಿಟ್ಟಿದ್ದು, ಅಗತ್ಯಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಿದೆ ಎಂದು ಮಾಹಿತಿ ನೀಡಿದರು.ಜಲಮಂಡಳಿ ಅಧಿಕಾರಿ ಬಿಬಿಎಂಪಿಗೆ ಅಧೀನಕ್ಕೆ
ಹಲವು ಕಡೆ ಆರ್‌ಒ ಘಟಕ ಸ್ಥಗಿತ
ಜಲಮಂಡಳಿಯ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ಬೆಂಗಳೂರು ವ್ಯಾಪ್ತಿಯಲ್ಲಿ ವಾರ್ಷಿಕವಾಗಿ 19 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗುತ್ತಿದ್ದು, ಪ್ರತಿನಿತ್ಯ ಸುಮಾರು 1,472 ಎಂ.ಎಲ್.ಡಿ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಫೆಬ್ರವರಿಯಿಂದ ಜುಲೈವರೆಗೆ ಅಂದಾಜು 9.48 ಟಿಎಂಸಿ ನೀರು ಅವಶ್ಯಕತೆಯಿದೆ. ನಗರದಲ್ಲಿ ಜಲಮಂಡಳಿಯಿಂದ 10.84 ಲಕ್ಷ ನೀರಿನ ಸಂಪರ್ಕ ಹೊಂದಿವೆ. ನಗರದಲ್ಲಿ 10,955 ಕೊಳವೆ ಬಾವಿಗಳಲ್ಲಿ 1,214 ಕೊಳವೆ ಬಾವಿಗಳು ಬತ್ತಿದ್ದು, 3,700 ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಈ ಸಂಬಂಧ ಸರಿಪಡಿಸಬಹುದಾದ ಕೊಳವೆ ಬಾವಿಗಳನ್ನು ಗುರುತಿಸಿ ಅಂತಹವುಗಳನ್ನು ಫ್ಲಷಿಂಗ್ ಹಾಗೂ ಮರು ಕೊರೆಯುವುದಕ್ಕೆ ಕ್ರಮವಹಿಸಲಾಗುತ್ತಿದೆ ಎಂದರು.ಮೇ ತಿಂಗಳಿಂದ ಹೆಚ್ಚುವರಿ ನೀರು
ಸಭೆಯಲ್ಲಿ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ। ಕೆ.ಹರೀಶ್ ಕುಮಾರ್, ಎಲ್ಲಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಪಾಲಿಕೆ/ಜಲಮಂಡಳಿ ಅಧಿಕಾರಿಗಳು ಇದ್ದರು.---ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಎಂಬುದನ್ನು ಪಟ್ಟಿ ಮಾಡಿಕೊಂಡು ಅಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ನೀರಿನ ಅಭಾವ ಹೆಚ್ಚಿರುವ ಕಡೆ ಜಲಮಂಡಳಿ ಅಧಿಕಾರಿಗಳ ಜತೆಗೆ ಸಮನ್ವಯ ಮಾಡಿಕೊಂಡು ನಾಗರಿಕರಿಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು.-ರಾಕೇಶ್ ಸಿಂಗ್, ಆಡಳಿತಾಧಿಕಾರಿ, ಬಿಬಿಎಂಪಿ.