ಮರುಳು ಶಿಲ್ಪ ರಚನೆ ಮತ್ತು ಗಾಳಿಪಟ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ
ಸಾರ್ವಜನಿಕರು ತಮ್ಮ ದೈನಂದಿನ ಬದುಕಿನಲ್ಲಿ ಪ್ರತಿ ದಿನವೂ ಅನೇಕ ಒತ್ತಡದ ಕೆಲಸಗಳಲ್ಲಿ ತೊಡಗುತ್ತಿದ್ದು, ಕರಾವಳಿ ಉತ್ಸವದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಸಾರ್ವಜನಿಕರು ತಮ್ಮ ದಿನ ನಿತ್ಯದ ಬದುಕಿನ ಜಂಜಾಟಗಳಿಂದ ನೆಮ್ಮದಿ ಪಡೆದುಕೊಳ್ಳಲು ಸಾಧ್ಯ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಗುರುವಾರ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಕರಾವಳಿ ಉತ್ಸವ -2025 ರ ಅಂಗವಾಗಿ ಆಯೋಜಿಸಲಾದ ಮರುಳು ಶಿಲ್ಪ ರಚನೆ ಮತ್ತು ಗಾಳಿಪಟ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ನಾನು 1986 ರಿಂದ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದು, ಜಿಲ್ಲಾಡಳಿತದ ವತಿಯಿಂದ ಪ್ರತಿ ಬಾರಿಯೂ ಕರಾವಳಿ ಉತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುತ್ತದೆ. ಇಲ್ಲಿನ ಜನರ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೆ ಆದ್ದರಿಂದ ಉತ್ತರ ಕನ್ನಡ ಜಿಲ್ಲೆಗೆ ತಮ್ಮ ನಿಧಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ನೀಡಲಾಗುವುದು ಎಂದರು.
ಈ ಸಂದರ್ಭ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಪಂ ಸಿಇಓ ಡಾ. ದಿಲೀಶ್ ಶಶಿ, ಪೊಲೀಸ್ ವರಿಷ್ಠ ದೀಪನ್ ಎಂ.ಎನ್., ಪ್ರೋಬೇಷನರಿ ಐಎಎಸ್ ಅಧಿಕಾರಿ ಝೂಪಿಶಾನ್ ಹಕ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುನೀಲ್ ಅಂಕೋಲೆಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ಇದ್ದರು.