- ತಾಲೂಕಿನ ಪಟ್ಟಣಗೆರೆ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ
ತಾಲೂಕಿನ ಪಟ್ಟಣಗೆರೆ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಭಾರತ ಪರಕೀಯರ ದಾಸ್ಯದಿಂದ ಮುಕ್ತಿ ಹೊಂದಲು ಮಹಾತ್ಮ ಗಾಂಧೀಜಿ ಸುಭಾಷ್ ಚಂದ್ರ ಬೋಸ್ ಮತ್ತಿತರ ಮಹಾ ನಾಯಕರು ತ್ಯಾಗ ಮತ್ತು ಬಲಿದಾನಗಳ ಮೂಲಕ ನಮ್ಮ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಕಳೆದ 77 ವರ್ಷಗಳಲ್ಲಿ ಬಡತನ ರೇಖೆ ಯಲ್ಲಿದ್ದ ಭಾರತ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಆರ್ಥಿಕವಾಗಿ ಇಂದು ಐದನೇ ಬಲಾಢ್ಯ ದೇಶವಾಗಿರುವುದು ಸಂತಸದ ಸಂಗತಿ. ಈ ನಿಟ್ಟಲ್ಲಿ ಭಾರತದ ಇಂದಿನ ಯುವ ಜನತೆ ಭಾರತ ರಕ್ಷಿಸಲು ಪಣತೊಡಬೇಕು. ಅಲ್ಲದೆ ಭವಿಷ್ಯದ ದಿನಗಳಲ್ಲಿ ದೇಶ ರಕ್ಷಣೆಗೆ ಸುಭದ್ರರಾಗಿ ಕಾರ್ಯನಿರತರಾಗಬೇಕು ಎಂದು ಕರೆ ನೀಡಿದರು.
ಕೆನರಾ ಬ್ಯಾಂಕ್ ಶಾಖೆ ವ್ಯವಸ್ಥಾಪಕ ಆಂಜನೇಯ, ಸಿಬ್ಬಂದಿ ರೋಷನ್, ಸಗುನಪ್ಪ, ಗ್ರಾಮಸ್ಥರು ಉಪಸ್ಥಿತರಿದ್ದರು.16ಕೆಕೆಡಿಯು2. ವಿ ಎಸ್ ಎಸ್ ಎನ್ ನ ಮಾಜಿ ಅಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ನವರು ಪಟ್ಟಣಗೆರೆ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು.