ಸಮಗ್ರ ಅರಿವಿನಿಂದ ಸ್ವಾತಂತ್ರ್ಯದ ಸಾಕಾರ: ಅರವಿಂದ್‌

KannadaprabhaNewsNetwork |  
Published : Aug 18, 2025, 12:00 AM IST
ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ಲಯನ್ಸ್‌ ಕ್ಲಬ್‌ನಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಸಮಾನತೆಯ ಆಶಯಗಳಿಗೆ ಪೂರಕವಾಗಿ ಸಹಿಷ್ಣುತೆ, ಸಹಬಾಳ್ವೆ ನಮ್ಮ ಆದ್ಯತೆಯಾಗಬೇಕು. ಈ ನೆಲದ ಸಾರ್ವಭೌಮತೆಯನ್ನು ಸದಾಕಾಲ ರಕ್ಷಿಸುವ ಕೆಲಸ ಆಗಬೇಕು ಎಂದು ಕಿರುತೆರೆ ನಟ ಅರವಿಂದ್‌ ಹೇಳಿದರು.

ದೊಡ್ಡಬಳ್ಳಾಪುರ: ಸಮಾನತೆಯ ಆಶಯಗಳಿಗೆ ಪೂರಕವಾಗಿ ಸಹಿಷ್ಣುತೆ, ಸಹಬಾಳ್ವೆ ನಮ್ಮ ಆದ್ಯತೆಯಾಗಬೇಕು. ಈ ನೆಲದ ಸಾರ್ವಭೌಮತೆಯನ್ನು ಸದಾಕಾಲ ರಕ್ಷಿಸುವ ಕೆಲಸ ಆಗಬೇಕು ಎಂದು ಕಿರುತೆರೆ ನಟ ಅರವಿಂದ್‌ ಹೇಳಿದರು.

ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್ ನೇತೃತ್ವದಲ್ಲಿ ಆರ್‌ಎಲ್‌ಜೆ ಕಲಾ ಮಂದಿರದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

ಧ್ವಜಾರೋಹಣ ನೆರವೇರಿಸಿದ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ದೇಶದ ಸಮಗ್ರತೆ ಮತ್ತು ಏಕತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರೀಕನ ಮುಖ್ಯ ಕರ್ತವ್ಯವಾಗಬೇಕು. ಈ ಹಂತದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಮತ್ತು ಉತ್ತಮ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವ ಅಗತ್ಯ ಇದೆ. ಸ್ವಾತಂತ್ರ್ಯ ಎಂಬುದು ಜಾಗೃತ ನಾಗರೀಕ ಪ್ರಜ್ಞೆ ಎಂದರು.

ಲಯನ್ಸ್‌ ಕ್ಲಬ್‌ನಿಂದ ವಿದ್ಯಾರ್ಥಿ ವೇತನ:

ಇದೇ ವೇಳೆ ಲಯನ್ಸ್‌ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. ವಿದ್ಯಾರ್ಥಿಗಳಿಂದ ಆಕರ್ಷಕ ಪೆರೇಡ್ ನಡೆಯಿತು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ‍್ಯಕ್ರಮಗಳನ್ನು ನಡೆಸಿಕೊಟ್ಟರು. ಇದೇ ವೇಳೆ ಕಲರ್ಸ್‌ ಕನ್ನಡ ವಾಹಿನಿಂದ ನಡೆಸಲಾದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಿರುತೆರೆ ನಟಿ ಅಮೃತ ನಾಯ್ಡು, ಲಯನ್ಸ್‌ ಕ್ಲಬ್‌ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಜಿಎಂಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್, ಮಾನವ ಸಂಪನ್ಮೂಲ ನಿರ್ದೇಶಕ ಎನ್.ಎಸ್ ಬಾಬುರೆಡ್ಡಿ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರಾದ ಡಾ.ವಿಜಯ್‌ಕಾರ್ತಿಕ್, ಡಾ.ನರಸಿಂಹರೆಡ್ಡಿ, ಡಾ.ಗೌರಪ್ಪ, ಡಾ.ಎಂ.ಚಿಕ್ಕಣ್ಣ, ಮಹಂತೇಶಪ್ಪ, ಧನಂಜಯ್‌, ಜಿಯಾವುಲ್ಲಾಖಾನ್, ರವಿಕುಮಾರ್ ಸೇರಿದಂತೆ ವಿಭಾಗಗಳ ಮುಖ್ಯಸ್ಥರು, ಲಯನ್ಸ್‌ ಕ್ಲಬ್‌ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!