ಬ್ರಹ್ಮಾವರ ಜಿ.ಎಂ.ನಲ್ಲಿ ‘ಫ್ರೆಶರ್ಸ್‌ ಡೇ’ ಸಂಭ್ರಮ

KannadaprabhaNewsNetwork |  
Published : Jun 29, 2025, 01:33 AM IST
28ಡೇ | Kannada Prabha

ಸಾರಾಂಶ

ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ‘ಫ್ರೆಶರ್ಸ್‌ ಡೇ’ಯನ್ನು ಸಂಭ್ರಮದಿಂದ ಆಚರಿಸಲಾಯಿತು. ಉಡುಪಿ ಅಂಬಲಪಾಡಿಯ ವೈದ್ಯೆ ಡಾ. ರೂಪಶ್ರೀ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಬ್ರಹ್ಮಾವರ

ಇಲ್ಲಿನ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ‘ಫ್ರೆಶರ್ಸ್‌ ಡೇ’ಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿ ಅಂಬಲಪಾಡಿಯ ವೈದ್ಯೆ ಡಾ. ರೂಪಶ್ರೀ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಕಲಿಕೆಯಷ್ಟೇ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಪ್ರತಿನಿತ್ಯ ವ್ಯಾಯಾಮ ಮಾಡುವುದರ ಮೂಲಕ ತಮ್ಮ ಆರೋಗ್ಯವನ್ನು ಹಾಗೂ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಬೇಕು ಎಂದರು.ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಹೊಸ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಶುಭ ಹಾರೈಸಿ ಮಾತನಾಡಿ, ಮುಂಜಾನೆ ಬೇಗನೆ ಎದ್ದು ನಮ್ಮ ದಿನಚರಿಗಳನ್ನು ಪ್ರಾರಂಭಿಸಬೇಕು. ಸಮಯವನ್ನು ವ್ಯರ್ಥ ಮಾಡದೆ ಒಂದಲ್ಲಾ ಒಂದು ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು.ಶಾಲಾ ಪ್ರಾಂಶುಪಾಲ ಜಾರ್ಜ್ ಕುರಿಯನ್, ಸಂಸ್ಥೆಗೆ ಹೊಸದಾಗಿ ಸೇರಿಕೊಂಡ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಕೋರಿದರು. ಶಿಕ್ಷಕವೃಂದ, ವಿದ್ಯಾರ್ಥಿಗಳು ತಮ್ಮ ಪ್ರತಿಭಾ ಪ್ರದರ್ಶನ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಜಿ.ಎಂ. ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲರಾದ ಪ್ರಣವ್ ಶೆಟ್ಟಿ, ಶ್ರೀಮಾ ಪ್ರಣವ್ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ರೇವತಿ ಕೆ., ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ