)
ಕನ್ನಡಪ್ರಭ ವಾರ್ತೆ ಬೆಳಗಾವಿ
ಸಹ್ಯಾದ್ರಿ ನಗರದ ಶ್ರೀದೇವಿ ಜೋಶಿ ಅವರಿಗೆ ಸೇರಿದ ಮೊದಲ ಮಹಡಿ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಈ ಮನೆಯಲ್ಲಿ ರೂಪಾ ನಾಶಿಪುಡಿ ಅವರು ತಮ್ಮ ಇಬ್ಬರು ಮಕ್ಕಳೊಂದಿಗೆ ಬಾಡಿಗೆಗೆ ವಾಸವಾಗಿದ್ದಾರೆ. ಅಮಾವಾಸ್ಯೆ ಹಿನ್ನೆಲೆಯಲ್ಲಿ ರೂಪಾ ಅವರು ಮನೆಗೆ ಬೀಗ ಹಾಕಿ ದೇವಸ್ಥಾನಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ದಟ್ಟ ಹೊಗೆ ಆವರಿಸಿದ್ದು, ಒಳಗಿದ್ದ ಮಕ್ಕಳು ಭಯಭೀತರಾಗಿ ಚೀರಾಡಿದ್ದಾರೆ.
ಮಕ್ಕಳ ಚೀರಾಟ ಕೇಳಿದ ಮನೆಯ ಮಾಲೀಕರಾದ ಶ್ರೀದೇವಿ ಜೋಶಿ ಅವರು ತಕ್ಷಣ ಧಾವಿಸಿ, ಹೊಗೆ ತುಂಬಿದ್ದ ಮನೆಯಿಂದ ಇಬ್ಬರು ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಸಮಯಪ್ರಜ್ಞೆಯಿಂದ ಮಕ್ಕಳನ್ನು ರಕ್ಷಿಸಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.