ಸೌಹಾರ್ದ ಕಪ್ ಕ್ರಿಕೆಟ್: ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್

KannadaprabhaNewsNetwork |  
Published : Apr 21, 2026, 02:45 AM IST
ಪ್ರಥಮ ಬಹುಮಾನ | Kannada Prabha

ಸಾರಾಂಶ

ಸಿದ್ದಾಪುರ ಟರ್ಫ್ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಟರ್ಫ್ ‘ಸೌಹಾರ್ದ ಕಪ್’ ಪಂದ್ಯಾವಳಿಯಲ್ಲಿ ಮೀಡಿಯಾ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಸಿದ್ದಾಪುರ: ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹಾಗೂ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘವ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟರ್ಫ್ ‘ಸೌಹಾರ್ದ ಕಪ್’ ಪಂದ್ಯಾವಳಿಯಲ್ಲಿ ಮೀಡಿಯಾ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಸಿದ್ದಾಪುರದ ಟರ್ಫ್ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ 8 ತಂಡಗಳು ಪಾಲ್ಗೊಂಡಿತ್ತು. ಫೈನಲ್ ಪಂದ್ಯಾವಳಿಯಲ್ಲಿ ಕಾವೇರಿ ತಂಡದ ಪರವಾಗಿ ಜಯಪ್ರಕಾಶ್ ಅವರ 26 ರನ್ ಗಳ ಸಹಾಯದಿಂದ ತಂಡ 49 ರನ್ ಗಳಿಸಿತು. ಮೀಡಿಯಾ ಸೂಪರ್ ಕಿಂಗ್ಸ್ ತಂಡದ ಇಸ್ಮಾಯಿಲ್ 28, ರೆಜಿತ್ 18 ರನ್ ಗಳನ್ನು ಗಳಿಸಿ ಸುಲಭ ಜಯ ಸಾಧಿಸಿತು. ಇದಕ್ಕೂ ಮೊದಲು ನಡೆದ ಕ್ವಾಲಿಫೈಯರ್ ಪಂದ್ಯದಲ್ಲಿ ಕಾವೇರಿ ಮಿಡಿಯಾ ತಂಡ ಮೀಡಿಯಾ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತು. ಎಲಿಮಿನೇಟರ್ ಪಂದ್ಯದಲ್ಲಿ ಬ್ರಾಡ್ ಕಾಸ್ಟ್ ಇಬ್ನಿ ಬ್ಲಾಸ್ಟರ್ ತಂಡ ಮೀಡಿಯಾ ರೋಯಲ್ಸ್ ತಂಡವನ್ನು ಮಣಿಸಿತು. ಎರಡನೇ ಕ್ಲಾಲಿಫೈಯರ್ ಪಂದ್ಯದಲ್ಲಿ ಬ್ರಾಡ್ ಕಾಸ್ಟ್ ಇಬ್ನಿ ಬ್ಲಾಸ್ಟರ್ ಹಾಗೂ ಮೀಡಿಯಾ ಸೂಪ್ ಕಿಂಗ್ಸ್ ತಂಡದ ನಡುವಿನ ಪಂದ್ಯವು ಸಮಬಲ ಆಗಿದ್ದು, ಸೂಪರ್ ಓವರ್ ನಲ್ಲಿ ಮೀಡಿಯಾ ಸೂಪರ್ ಕಿಂಗ್ಸ್ ಜಯ ಸಾಧಿಸಿತು.

ಪಂದ್ಯಾವಳಿಯ ಫೈನಲ್ಸ್‌ ಪಂದ್ಯದ ಪಂದ್ಯ ಪುರುಷೋತ್ತಮ ರೆಜಿತ್ ಕುಮಾರ್ ಗುಹ್ಯ, ಬೆಸ್ಟ್ ಬ್ಯಾಟ್ಸ್ ಮನ್ ಇಸ್ಮಾಯಿಲ್ ಕಂಡಕ್ಕರೆ, ಬೆಸ್ಟ್ ಬೌಲರ್ ಯುಗ ದೇವಯ್ಯ, ಬೆಸ್ಟ್ ಕೀಪರ್ ಜಯಪ್ರಕಾಶ್, ಬೆಸ್ಟ್ ಕ್ಯಾಚ್ ಪ್ರದೀಪ್, ಸರಣಿ ಶ್ರೇಷ್ಠ ಆದರ್ಶ್, ಉತ್ತಮ ಮಹಿಳಾ ಆಟಗಾರರಾಗಿ ಪ್ರಮಿಳಾ ನಾಚಯ್ಯ, ಉತ್ತಮ ಹಿರಿಯ ಆಟಗಾರ ಹನೀಫ್ ಕೊಡ್ಲಿಪೇಟೆ, ಬೆಸ್ಟ್ ಫೀಲ್ಡರ್ ವಿನು ಕುಶಾಲಪ್ಪ ಪಡೆದುಕೊಂಡರು. ಪಂದ್ಯಾವಳಿಯಲ್ಲಿ ನನ್ನ ಧ್ವನಿ, ಕಾಪಿನಾಡ್, ಗೋಣಿಕೊಪ್ಪ ಮೀಡಿಯಾ ಕಿಂಗ್ಸ್, ಟೀಮ್ ಅಯರ ತಂಡಗಳು ಪಾಲ್ಗೊಂಡಿತು.ಪಂದ್ಯಾವಳಿಯನ್ನು ಅಂತಾರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರು ಸದಾ ಒತ್ತಡದ ಬದುಕಿನಲ್ಲಿದ್ದು, ಕ್ರೀಡೆಯ ಮೂಲಕ ಉತ್ತಡಕ್ಕೆ ವಿರಾಮ ಕಂಡುಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಯುವ ಮುಖಂಡ ಎಡಿಕೇರಿ ಪ್ರಸನ್ನ ಮಾತನಾಡಿ, ಕ್ರೀಡೆಯು ದೈಹಿಕ ಆರೋಗ್ಯವನ್ನು ಹೆಚ್ಚಿಸಲು ಉಪಯುಕ್ತವಾಗಲಿದೆ. ಪತ್ರಕರ್ತರು ಸಮಾಜದ ಪ್ರತಿಯೊಂದು ವಿಷಯದಲ್ಲೂ ಗಮನ ಹರಿಸುತ್ತಿದ್ದು, ತಮ್ಮ ಆರೋಗ್ಯದ ಕಡೆಯೂ ಗಮನಹರಿಸುವಂತೆ ತಿಳಿಸಿದರು.

ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜೀರ ಬಿ ಅಯ್ಯಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಬಿ.ಆರ್ ಸವಿತಾ ರೈ, ಅಯರ ತಂಡದ ಮಾಲೀಕರಾದ ಪಿ.ವಿಷ್ಣು, ಸಮಾಜ ಸೇವಕರಾದ ಎ.ಎನ್ ಪದ್ಮನಾಭ ಹಾಜರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ವಹಿಸಿದ್ದರು. ಜಿಲ್ಲಾ ಕೇಂದ್ರದಲ್ಲಿ ಟರ್ಫ್ ಮೈದಾನ ಅಗತ್ಯ: ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ಮಾತನಾಡಿ, ಪತ್ರಕರ್ತರಲ್ಲಿ ಉತ್ತಮ ಕ್ರಿಕೆಟ್ ಆಟಗಾರರನ್ನು ಹೊಂದಿದ್ದು, ವೃತ್ತಿಪರ ಆಟಗಾರರಂತೆ ಆಡುತ್ತಿರುವುದು ಶ್ಲಾಘನೀಯ ಎಂದರು.

ಉದ್ಯಮಿ ಚೈಯಂಡ ಸತ್ಯ ಗಣಪತಿ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜೀರ ಬಿ ಅಯ್ಯಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ಬಿ.ಆರ್ ಸವಿತಾ ರೈ ಹಾಜರಿದ್ದರು. ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರೆಜಿತ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಪ್ಪೂರು ನದಿಕೊರೆತ ಪ್ರದೇಶಕ್ಕೆ ಶಾಸಕ ಯಶ್ ಪಾಲ್ ಭೇಟಿ
ಅಗ್ನಿ ಅವಘಡಗಳಿಗೆ ಸುರಕ್ಷತಾ ಕ್ರಮ ತಿಳಿದುಕೊಳ್ಳುವುದು ಅವಶ್ಯಕ: ಲಕ್ಷ್ಮಿಕುಮಾರ್