ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ವಿರುದ್ದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಕೆಲ ಕಾಂಗ್ರೆಸ್ ಮುಖಂಡರ ಕ್ಷುಲ್ಲಕ ಟೀಕೆ, ಆರೋಪ ಖಂಡನೀಯ ಎಂದು ಬಿಜೆಪಿ ವಕ್ತಾರರಾದ ಪುಷ್ಪಾ ಶಿವಶಂಕರ್ ಹೇಳಿದರು.
ಮಾಜಿ ಹಾಗೂ ಹಾಲಿ ಶಾಸಕರ ನಡುವೆ ರಾಜಕೀಯ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಆದರೆ ಶಾಸಕ ಧೀರಜ್ ಮುನಿರಾಜ್ ಅವರು ಈವರೆಗೆ ಉದ್ಧಟತನದಿಂದ ನಡೆದುಕೊಂಡಿಲ್ಲ. ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಟೀಕಿಸುವ ಬದಲು ರಾಜಕೀಯ ಹಾಗೂ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸುವುದು ಸೂಕ್ತ ಎಂದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಂತಿ ವೆಂಕಟೇಶ್ ಮಾತನಾಡಿ, ಸರ್ಕಾರಿ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಶಿಷ್ಟಾಚಾರದಂತೆ ಎಲ್ಲ ಪಕ್ಷಗಳ ಮುಖಂಡರನ್ನು ಆಹ್ವಾನಿಸಲಾಗುತ್ತಿದೆ. ಆದರೆ ಕಾರ್ಯಕ್ರಮಗಳಿಗೆ ಭಾಗವಹಿಸದೆ ರಾಜಕೀಯ ಟೀಕೆ ಮಾಡುವುದು ಸರಿಯಲ್ಲ ಎಂದು ಹೇಳಿದರು.ಸದನದಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಪರವಾಗಿ ಶಾಸಕ ಧೀರಜ್ ಮುನಿರಾಜ್ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಇದನ್ನು ಕೆಲವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಾಸಕರ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡಲಾಗುತ್ತಿದೆ. ಶಾಸಕರ ತೇಜೋವಧೆ ಮಾಡುವ ಪ್ರಯತ್ನಗಳನ್ನು ನಿಲ್ಲಿಸಬೇಕು ಎಂದು ಹೇಳಿದರು
23ಕೆಡಿಬಿಪಿ2- ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ವಿವಿಧ ಘಟಕಗಳ ನೇತೃತ್ವದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಕ್ತಾರರಾದ ಪುಷ್ಪಾ ಶಿವಶಂಕರ್ ಮಾತನಾಡಿದರು. ತಾಲೂಕು ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಪ್ಪ ಇತರರಿದ್ದರು.