ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಗುಂಡಿಕೆರೆ ಮಖಾಂನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ವಲಿಯುಲ್ಲಾಹಿರವರ ಹೆಸರಿನಲ್ಲಿ ಪ್ರತಿ ವರ್ಷ ಅದ್ಧೂರಿಯಿಂದ ನಡೆಸಲಾಗುವ ಗುಂಡಿಕೆರೆ ಮಖಾಂ ಉರೂಸ್ ಈ ಸಾಲಿನಲ್ಲೂ 3 ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಗುಂಡಿಕೆರೆ ಶಾಫಿ ಮುಸ್ಲಿಂ ಜಮಾಅತ್ ನ ಆಡಳಿತ ಮಂಡಳಿ ಅಧ್ಯಕ್ಷರಾದ ಕೆ.ಯು. ಮಹಮ್ಮದ್ ಹಾಜಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 5ರಂದು ಸಂಜೆ 4ಕ್ಕೆ ಧ್ವಜಾರೋಹಣದ ಮೂಲಕ ಗುಂಡಿಕೆರೆ ಮಖಾಂ ಉರೂಸ್ ಗೆ ಚಾಲನೆ ದೊರೆಯಲಿದೆ. ಬಳಿಕ ಗುಂಡಿಕೆರೆ ಜಮಾಹತ್ತಿನ ಖತೀಬ ಇಲ್ಯಾಸ್ ಅಂಜದಿ ನೇತೃತ್ವದಲ್ಲಿ ಮಖಾಂ ಅಲಂಕಾರ ಮತ್ತು ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಇದಾದ ಕೂಡಲೇ ಗುಂಡಿಕೆರೆ ಜಮಾಅತ್ತಿನ 1ನೇ ತಕ್ಕರಾದ ಸಿ.ಎ. ಹಸೈನಾರ್ ಹಾಜಿ ಮತ್ತು 2ನೇ ತಕ್ಕರಾದ ಎಂ.ಪಿ. ಶಾದಲಿ ನೇತೃತ್ವದಲ್ಲಿ ಉರೂಸ್ ನ ಭಂಡಾರ ಜಮಾಯಿಸುವ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದ್ದಾರೆ.ಧಾರ್ಮಿಕ ಉಪನ್ಯಾಸ:
ಕಾರ್ಯಕ್ರಮದಲ್ಲಿ ಗುಂಡಿಕೆರೆ ಶಾಫಿ ಮುಸ್ಲಿಂ ಜಮಾಅತಿನ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಎಂ.ವೈ. ಆಲಿ, ಪ್ರಧಾನ ಕಾರ್ಯದರ್ಶಿ ಎಂ.ಎ. ಇಸ್ಮಾಯಿಲ್ ಹಾಜಿ ಗುಂಡಿಕೆರೆ ಜಮಾಅತ್ತಿನ 1ನೇ ತಕ್ಕರಾದ ಸಿ.ಎ. ಹಸೈನಾರ್ ಹಾಜಿ ಮತ್ತು 2ನೇ ತಕ್ಕರಾದ ಎಂ.ಪಿ. ಶಾದಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ಡಿ.ಎಚ್. ಸೂಫಿ ಹಾಜಿ, ಬೆಂಗಳೂರಿನ ಆಯೆಷಾ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಕುವೇoಡ ವೈ. ಹಂಝತುಲ್ಲಾ, ಉದ್ಯಮಿಗಳಾದ ಎಂ.ಎಚ್. ಮೊಯ್ದು, ಎ.ಎಚ್. ಅಬೂಬಕ್ಕರ್, ಹೈಕೋರ್ಟ್ ವಕೀಲ ಕೆ.ಎಂ. ಸುಬೈರ್, ಬೇಟೋಳಿ ಗ್ರಾ ಪಂ. ಸದಸ್ಯರಾದ ಎಂ. ಎಂ. ರಜಾಕ್, ಗುಂಡಿಕೆರೆ ಶಾಫಿ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ಉಪಾಧ್ಯಕ್ಷ ಎಂ. ವೈ. ಆಲಿ, ಗುಂಡಿಕೆರೆ ಜಮಾಅತ್ತಿನ 1ನೇ ತಕ್ಕ ಸಿ.ಎ. ಹಸೈನಾರ್ ಹಾಜಿ ಮತ್ತು 2ನೇ ತಕ್ಕ ಎಂ.ಪಿ. ಶಾದಲಿ ಮೊದಲಾದವರು ಭಾಗವಹಿಸಲಿದ್ದಾರೆ.
6ರಂದು ರಾತ್ರಿ 8ಕ್ಕೆ ನಡೆಯಲಿರುವ ಮತ್ತೊಂದು ಧಾರ್ಮಿಕ ಉಪನ್ಯಾಸ ಕಾರ್ಯಕ್ರಮವನ್ನು ಗುಂಡಿಕೆರೆ ಜಮಾಅತಿನ ಸದರ ಉಸ್ತಾದ್ ಇಬ್ರಾಹಿಂ ಲತೀಫಿ ಉದ್ಘಾಟಿಸಲಿದ್ದಾರೆ. ಹಿರಿಯ ಧಾರ್ಮಿಕ ವಿದ್ವಾಂಸ ಹಂಸ ಮಿಸ್ಬಾಯಿ ಒಟ್ಟಪಡವು ವಿಶೇಷ ಉಪನ್ಯಾಸ ನೀಡಲಿದ್ದಾರೆ.
7ರಂದು ರಾತ್ರಿ 8ಕ್ಕೆ ನಡೆಯುವ ಕಾರ್ಯಕ್ರಮವನ್ನು ಗುಂಡಿಕೆರೆ ಮದರಸಾ ಅಧ್ಯಾಪಕ ರಾಫಿ ಜೈನಿ ಉದ್ಘಾಟಿಸಲಿದ್ದಾರೆ. ಬಳಿಕ ಕೇರಳದ ಪ್ರಸಿದ್ಧ ಧಾರ್ಮಿಕ ಸಾಹಿತ್ಯಗಾರ ಡಾ. ಕೋಯ ಕಾಪಾಡ್ ಮತ್ತು ಸಂಗಡಿಗರಿಂದ ‘ಗ್ರಾಂಡ್ ಇಶಲ್ ನೈಟ್’ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಗುಂಡಿಕೆರೆ ಶಾಫಿ ಮುಸ್ಲಿಂ ಜಮಾಅತಿನ ಆಡಳಿತ ಮಂಡಳಿ ಉಪಾಧ್ಯಕ್ಷ ಎಂ.ವೈ. ಆಲಿ, ಪ್ರಧಾನ ಕಾರ್ಯದರ್ಶಿ ಎಂ.ಎ. ಇಸ್ಮಾಯಿಲ್ ಹಾಜಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉರೂಸ್ ನ ಎಲ್ಲಾ ದಿನವೂ ಮಗರಿಬ್ ನಮಾಜಿನ ನಂತರ ಸಾಂಪ್ರದಾಯಿಕ ದಫ್ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಮಹಮ್ಮದ್ ಹಾಜಿ ತಿಳಿಸಿದರು.