ಬಿಜೆಪಿಯಿಂದ ದೇಶ ಅಧೋಗತಿಗೆ: ತಂಗಡಗಿ

KannadaprabhaNewsNetwork |  
Published : Mar 23, 2024, 01:03 AM IST
22ಕೆಪಿಎಲ್22 ಕೊಪ್ಪಳ ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದ ಬಳಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾರಂಭವನ್ನು ಸಚಿವ ಶಿವರಾಜ ತಂಗಡಗಿ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ಭಾರತೀಯ ಜನತಾ ಪಾರ್ಟಿ ಬದಲಿಗೆ ಬಾಂಡ್ ಜನತಾ ಪಾರ್ಟಿ ಎಂದು ಕರೆಯಬೇಕು. ಭ್ರಷ್ಟಾಚಾರಕ್ಕೆ ರಸೀದಿ ನೀಡಿದ ಸರ್ಕಾರ ಬಿಜೆಪಿ. ಬಾಂಡ್ ನೀಡಿದರೆ ಅವರ ಮನೆಗೆ ಇಡಿಯೂ ಹೋಗಲ್ಲ, ಸಿಬಿಐ ಸಹ ಹೋಗಲ್ಲ ಎಂದು ಸಚಿವ ಶಿವರಾಜ ತಂಗಡಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೊಪ್ಪಳ: ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಅಧಿಕಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯಿಂದ ದೇಶ ಅಧೋಗತಿಗೆ ಹೋಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪದಾಧಿಕಾರಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಜನತಾ ಪಾರ್ಟಿ ಬದಲಿಗೆ ಬಾಂಡ್ ಜನತಾ ಪಾರ್ಟಿ ಎಂದು ಕರೆಯಬೇಕು. ಭ್ರಷ್ಟಾಚಾರಕ್ಕೆ ರಸೀದಿ ನೀಡಿದ ಸರ್ಕಾರ ಬಿಜೆಪಿ. ಬಾಂಡ್ ನೀಡಿದರೆ ಅವರ ಮನೆಗೆ ಇಡಿಯೂ ಹೋಗಲ್ಲ, ಸಿಬಿಐ ಸಹ ಹೋಗಲ್ಲ.‌ ಈಗ ಲಂಚಕ್ಕೆ ರಸೀದಿ ನೀಡುವ ಸ್ಥಿತಿ ಬಂದಿದೆ ಎಂದರು. ಚುನಾವಣೆ ಬಂದರೆ ನಾಟಕ ಶುರು. ಪಾಕಿಸ್ತಾನ, ಧರ್ಮದ ಬಗ್ಗೆ ಮಾತನಾಡುತ್ತಾರೆ. 400 ಸೀಟು ಗೆದ್ದರೆ ಸಂವಿಧಾನ ಬದಲಾಯಿಸುತ್ತಾರೆ. ಆಗ ದೇಶದಲ್ಲಿ ಹಿಟ್ಲರ್ ಆಡಳಿತ, ಗಡಾಫಿ ಆಡಳಿತ ಬರುತ್ತದೆ. ಮತ್ತೆ ಮೋದಿ ಅಧಿಕಾರಕ್ಕೆ ಬಂದರೆ ಸಂವಿಧಾನ ತೆಗೆದು ರಾಜಾಡಳಿತ ಪ್ರಾರಂಭಿಸುತ್ತಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಮಾತನಾಡಿ, ಬಿಜೆಪಿ ಭರವಸೆ ಬಿರುಗಾಳಿಯಲ್ಲ, ಕಳೆದಬಾರಿ ಕಡಿಮೆ ಅಂತರದಿಂದ ಸೋಲಾಯಿತು. ಆದರೆ ಈ ಬಾರಿ ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಮನೆ ಮನೆಗೆ ಹೋಗಿ ಮನವರಿಕೆ ಮಾಡಬೇಕಾಗಿದೆ. ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿ ಅವರು ಬಡವರ ಬದುಕು ಹಸನು ಮಾಡುತ್ತೇವೆ ಎಂದಿದ್ದಾರೆ.

ನರೇಗಾ ತಂದಿದ್ದು ಕಾಂಗ್ರೆಸ್ ಸರ್ಕಾರ, ದೇಶದ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಆದರೆ ದೇಶ ಆಳುತ್ತಿರುವ ಬಿಜೆಪಿ ಕಾರ್ಪೊರೇಟ್ ಮಾಲೀಕರ ಸಾಲ ಮನ್ನಾ ಮಾಡುತ್ತದೆ. ಆದ್ದರಿಂದ ಕೇಂದ್ರ ಸರ್ಕಾರದಲ್ಲಿರುವ ಸರ್ಕಾರ ತೆಗೆದು ಹಾಕಲು ತೀರ್ಮಾನ ಮಾಡಬೇಕಾಗಿದೆ.‌ ಕಾಂಗ್ರೆಸ್ ಕಾರ್ಯಕರ್ತರು ವಿಶ್ರಮಿಸದೆ ಕೆಲಸ ಮಾಡಬೇಕು ಎಂದರು.

ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, ಈ ಬಾರಿಯ ಚುನಾವಣೆ ಧರ್ಮ ಮತ್ತು ಅಧರ್ಮದ ನಡುವೆ ನಡೆಯುತ್ತದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಕಾಂಗ್ರೆಸ್‌ ಧರ್ಮದ ಆಡಳಿತ ನಡೆಸುತ್ತಿದೆ. ಕೇಂದ್ರದಲ್ಲಿ ಮೋದಿ ಸರ್ಕಾರ ಸುಳ್ಳು ಭರವಸೆ ನೀಡಿ ಅಧರ್ಮದ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಅಕೌಂಟ್ ಸೀಜ್ ಮಾಡುವ ಮೂಲಕ ದುರಾಡಳಿತ ಮಾಡುತ್ತಿದೆ. ರಾಜ್ಯದಲ್ಲಿ ೨೮ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ ಎಂದರು. ಕೆ. ಬಸವರಾಜ ಹಿಟ್ನಾಳ, ಶಾಂತಣ್ಣ ಮುದಗಲ್ , ಟಿ. ಜನಾರ್ದನ , ಕೆ.ಎಂ. ಸಯ್ಯದ್, ಗೂಳಪ್ಪ ಹಲಿಗೇರಿ, ಅಮ್ಜಾದ್ ಪಟೇಲ, ಗಾಳೆಪ್ಪ ಪೂಜಾರ, ಕಾಟನ್ ಪಾಷಾ, ಯಮನಪ್ಪ ಕಬ್ಬೇರ, ಕೃಷ್ಣಾರಡ್ಡಿ ಗಲಬಿ, ಕೃಷ್ಣ ಇಟ್ಟಂಗಿ, ಪ್ರಸನ್ನ ಗಡಾದ, ತೋಟಪ್ಪ ಕಾಮನೂರು, ಅಮ್ಜಾದ ಪಟೇಲ, ಲತಾ ಗವಿಸಿದ್ದಪ್ಪ ಚಿನ್ನೂರು, ಇಂದಿರಾ ಭಾವಿಕಟ್ಟಿ ಇದ್ದರು.

ಸಂಗಣ್ಣ ಕರಡಿ ಅವರನ್ನು ನಾವು ಆಹ್ವಾನ ಮಾಡುತ್ತೇವೆ. ಅವರಿಗೆ ಟಿಕೆಟ್ ತಪ್ಪಿದ ತಕ್ಷಣ ಮಾತನಾಡಿದ್ದೇನೆ. ಅವರಿಗೆ ಅನ್ಯಾಯವಾಗಿದ್ದು, ಪಕ್ಷಕ್ಕೆ ಬರುವಂತೆ ಕೋರುತ್ತೇವೆ. ಬರುವುದು, ಬಿಡುವುದು ಅವರಿಗೆ ಬಿಟ್ಟಿರುವ ವಿಚಾರ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.ಸಂಸದ ಅನಂತಕುಮಾರ ಹೆಗಡೆ ಅವರು ತಲೆಯಲ್ಲಿ ಸೆಗಣಿ ತುಂಬಿಕೊಂಡಿದ್ದಾರೆ. ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅದರಲ್ಲೂ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಮಾತನಾಡಿದರೆ ನಾವು ಸಹಿಸಲ್ಲ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋಹಿನಿ ಸಿದ್ದೇಗೌಡ ನೊಂದವರ ಪರ ಗಟ್ಟಿ ಧ್ವನಿಯಾಗಿದ್ದರು
ಪೌರಕಾರ್ಮಿಕರು ಆರೋಗ್ಯದ ಕಡೆಗೂ ಗಮನಹರಿಸಬೇಕಾದುದು ಅಗತ್ಯ: ಶ್ವೇತಾ