ಮಠಗಳಿಂದ ಸುಜ್ಞಾನದ ಕಡೆಗೆ ಕೊಂಡೊಯ್ಯುವ ಕೆಲಸ: ವೀರಶೈವ ಲಿಂಗಾಯತ ಮಹಾಸಭಾ ತಾಲೂಕಾಧ್ಯಕ್ಷ ರಾಜಶೇಖರ್

KannadaprabhaNewsNetwork |  
Published : Sep 24, 2024, 01:46 AM IST
ಪೋಟೋ 1 : ಸೋಂಪುರ ಹೋಬಳಿಯ ಕಂಬಾಳು ಸಮೀಪದ ಮೇಲಣಗವಿ ಮಠದಲ್ಲಿ ಹಮ್ಮಿಕೊಂಡಿದ್ದ ಡಾ. ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಸ್ವಾಮೀಜಿಯವರ  ಜನ್ಮವರ್ಧಂತಿ ಕಾರ್ಯಕ್ರಮಕ್ಕೆ ಹರಗುರು ಚರಮೂರ್ತಿಗಳು ಹಾಗೂ ಗಣ್ಯರು ಚಾಲನೆ ನೀಡಿದರು | Kannada Prabha

ಸಾರಾಂಶ

ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಧರ್ಮ ಜಾಗೃತಿಯನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಠಗಳು ಮಾಡುತ್ತಿವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಎನ್. ರಾಜಶೇಖರ್ ತಿಳಿಸಿದರು. ದಾಬಸ್‌ಪೇಟೆಯಲ್ಲಿ ಮಲಯ ಶಾಂತಮುನಿ ದೇಶೀಕೇಂದ್ರ ಸ್ವಾಮೀಜಿಯವರ 58ನೇ ವರ್ಷದ ಜನ್ಮವರ್ಧಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

58ನೇ ಜನ್ಮವರ್ಧಂತಿಕನ್ನಡಪ್ರಭ ವಾರ್ತೆ ದಾಬಸ್‌ಪೇಟೆ

ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಧರ್ಮ ಜಾಗೃತಿಯನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಠಗಳು ಮಾಡುತ್ತಿವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಎನ್. ರಾಜಶೇಖರ್ ತಿಳಿಸಿದರು.

ಕಂಬಾಳು ಸಮೀಪದ ಮೇಲಣಗವಿ ಮಠದಲ್ಲಿ ಹಮ್ಮಿಕೊಂಡಿದ್ದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಸ್ವಾಮೀಜಿಯವರ 58ನೇ ವರ್ಷದ ಜನ್ಮವರ್ಧಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮೇಲಣಗವಿ ಮಠದ ಪೂಜ್ಯರು ನಮ್ಮ ರಾಜ್ಯವಲ್ಲದೇ ವಿದೇಶಕ್ಕೆ ಹೋಗಿ ಧರ್ಮದ ಬಗ್ಗೆ ಪ್ರಚಾರ ಮಾಡುತ್ತಾ ಭಕ್ತರನ್ನು ಅಜ್ಞಾನದಿಂದ ಸುಜ್ಞಾನದ ಕಡೆಗೆ ಕೊಂಡ್ಯೊಯ್ಯುತ್ತಿದ್ದಾರೆ ಎಂದರು.

ಕಂಬಾಳು ಮಠದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಹಲವಾರು ಬದಲಾವಣೆಯಾಗುತ್ತಿವೆ. ನಾವು ನಮ್ಮ ಹಿಂದಿನ ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕಾಗಿದೆ ಎಂದರು.

ಡಾ. ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವಿದೇಶಿಗರು ನಮ್ಮ ಭಾರತೀಯ ಸಂಸ್ಕೃತಿ, ಸಂಸ್ಕಾರ, ಧರ್ಮದ ಬಗ್ಗೆ ವಿಶೇಷ ಭಕ್ತಿಯನ್ನು ಹೊಂದಿದ್ದು, ಈ ದೇಶದ ರಾಯಭಾರಿಯಾಗಿ ನಮ್ಮ ಧರ್ಮದ ಬಗ್ಗೆ ವಿದೇಶಕ್ಕೆ ಹೋಗಿ ಉಪನ್ಯಾಸ ನೀಡುವುದು ನನ್ನ ಕರ್ತವ್ಯವಾಗಿದೆ ಎಂದರು.

ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಬಂಡೇಮಠದ ಶ್ರೀ ಮಹಾಲಿಂಗ ಸ್ವಾಮೀಜಿ, ಗ್ರಾಪಂ ಅಧ್ಯಕ್ಷ ಪ್ರಭುದೇವ್, ನಗರಸಭೆ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು, ಗ್ರಾಪಂ ಉಪಾಧ್ಯಕ್ಷ ನಾಗಬಸವರಾಜು, ಮುಖಂಡರಾದ ಚನ್ನಬಸಪ್ಪ, ಅಣ್ಣಪ್ಪ, ಕುಮಾರಸ್ವಾಮಿ, ಲೋಕೇಶ್, ಮುಪ್ಪಿನಸ್ವಾಮಿ, ಉಮೇಶ್, ಪ್ರಕಾಶ್, ರಾಜಮ್ಮ, ವೇದಾವತಿ ಬ್ರಹ್ಮಕುಮಾರಿ ವಿವಿಯ ಮಂಜುಳ, ಶಿಕ್ಷಕರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ