ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಬಂದೀಗೌಡ ಬಡಾವಣೆಯಲ್ಲಿರುವ ಶ್ರೀಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರಿಗೆ ಅಭಿಷೇಕ ಮತ್ತು ವಿಶೇಷ ಪೂಜೆ ನೆರವೇರಿಸಿದರು. ಆದಿ ಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ ಸಮ್ಮುಖದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತರಿಗೆ ಪ್ರಸಾದ ಮತ್ತು ಉಪಾಹಾರ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು. ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬರಿಗೆ ಲ್ಯಾಪ್‌ಟಾಪ್‌ನ್ನು ಉಚಿತವಾಗಿ ವಿತರಿಸಿದರು.
ನಂತರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಮಮತೆಯ ಮಡಿಲು ಆಶ್ರಯದಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಒಂದು ದಿನದ ಊಟದ ವ್ಯವಸ್ಥೆ ಮಾಡಿದ್ದರು. ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದರು. ರಕ್ತನಿಧಿ ಕೇಂದ್ರದ ಆವರಣದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಹಲವು ಯುವಕರು ರಕ್ತದಾನ ಮಾಡಿದರು.ಮಂಡ್ಯದ ಎಲ್ಲಾ ವೃದ್ಧಾಶ್ರಮ ಮತ್ತು ಅನಾಥಾಶ್ರಮಗಳಲ್ಲಿ ಊಟದ ವ್ಯವಸ್ಥೆ, ಆರ್‌ಟಿಒ ಕಚೇರಿ ಎದುರಿರುವ ಕಾಳಪ್ಪ ಬಡಾವಣೆಯ ನಿವಾಸಿಗಳಿಗೆ ಫುಡ್‌ಕಿಟ್ ವಿತರಣೆ ವಿತರಣೆ ಮಾಡಿ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಲಾಯಿತು.
ಎಚ್.ಡಿ.ದೇವೇಗೌಡರು ಹಿರಿಯರು ಹಾಗೂ ಅನುಭವಿ ರಾಜಕಾರಣಿಯಾಗಿದ್ದಾರೆ. ನೀರಾವರಿ ಸೇರಿದಂತೆ ಹಲವಾರು ವಿಚಾರಗಳಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಮೂಲಕ ಅವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಬಿಳಿದೇಗಲು ವಿವೇಕ್, ಪಿ.ಲಂಕೇಶ್ ಮಂಗಲ, ರಕ್ಷಿತ್ ರಾಜ್, ಕಲ್ಲಳ್ಳಿ ಶಿವರಾಮ್, ಧರ್ಮೇಂದ್ರ ಮತ್ತಿತರರು ಹಾಜರಿದ್ದರು.