ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ. 2014 ರಲ್ಲಿ ಬಿಜೆಪಿ ಧ್ವನಿ ಎತ್ತಿದ ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತಹ ಸಮಸ್ಯೆಗಳ ಕುರಿತು ಈಗ ಮೌನವಾಗಿದೆ ಎಂದರು.
ಅಬ್ಬರದ ಪ್ರಚಾರ ಮಾಡಿದ ಗುಜರಾತ್ ಮಾದರಿ ಅದೃಶ್ಯವಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಮಾತಿರಲಿ, ಭಾರತದ ಯುವಕರು ನಿರುದ್ಯೋಗದ ಕಷ್ಟ ತಡೆಯಲಾಗದೆ, ಯುದ್ಧ ಪೀಡಿತ ಇಸ್ರೇಲ್, ರಷ್ಯಾಗಳಿಗೆ ಕೆಲಸ ಹುಡುಕಿಕೊಂಡು ಹೋಗುತ್ತಿದ್ದಾರೆ ಎಂದರು.ಈ ಚುನಾವಣೆ ಬಂಡವಾಳಶಾಹಿ ಮತ್ತು ಕಾರ್ಮಿಕರ ನಡುವಿನ, ಶೋಷಕರು ಮತ್ತು ಶೋಷಿತರ ನಡುವಿನ ಸಮರವಾಗಿದೆ ಇಂತಹ ಪರಿಸ್ಥಿತಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷವು ಶೋಷಿತ ಜನರ ನೈಜ ಹೋರಾಟದ ಪರ್ಯಾಯವಾಗಿ ತನ್ನ ಶಕ್ತಿಮೀರಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ. ಎಂದರು.