ಚಿತ್ರದುರ್ಗದಲ್ಲಿ ಡಾ.ಪ್ರಣವಾನಂದ ಸ್ವಾಮೀಜಿ ಹೇಳಿಕೆ । 18 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ದಿನಕ್ಕೆ 20 ಕಿ.ಮೀ. ನಡೆದು 41 ದಿನಗಳ ನಂತರ ಬೆಂಗಳೂರಿಗೆ ತಲುಪಿ ಫ್ರೀಡಂ ಪಾರ್ಕ್ ನಲ್ಲಿ ಬಹಿರಂಗ ಸಭೆ ನಡೆಸಿ ಬೇಡಿಕೆಗಳ ಈಡೇರಿಕೆಗಾಗಿ ಆಮರಣಾಂತರ ಉಪವಾಸ ಸತ್ಯಾಗ್ರಹ ಪ್ರಾರಂಭಿಸಲಾಗುವುದು. ಈಡಿಗ ಬಿಲ್ಲವ, ನಾಮಧಾರಿ, ಧೀವರ, ತೀಯ ಸೇರಿದಂತೆ 26 ಪಂಗಡಗಳನ್ನು ಹೊಂದಿದ ಸಮಾಜದ ಬೇಡಿಕೆ ಈಡೇರಿಕೆಗಾಗಿ ಜ.6ನೇ ತಾರೀಖಿನಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಕರದಾಳದಿಂದ ಬೆಂಗಳೂರುವರೆಗೆ ಐತಿಹಾಸಿಕ 700 ಕಿಮೀ ಪಾದಯಾತ್ರೆ ನಡೆಯಲಿದೆ ಎಂದರು.
ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋಟಿ ರು. ಬಿಡುಗಡೆ ಮಾಡಬೇಕು. ಕುಲ ಕಸುಬು ಕಳೆದುಕೊಂಡ ಕಲ್ಯಾಣ ಕರ್ನಾಟಕ ಭಾಗದ ಸಂತ್ರಸ್ತ ಈಡಿಗರ ಪ್ರತಿ ಕುಟುಂಬಕ್ಕೆ 5 ಎಕರೆ ಜಮೀನು ಮಂಜೂರು ಮಾಡಬೇಕು. ಸಮಾಜವನ್ನು 2ಎ ಯಿಂದ ಎಸ್‌ಟಿ ಮೀಸಲಾತಿಗೆ ಸೇರಿಸುವುದಕ್ಕೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಯನ್ನು ಬೆಂಗಳೂರಿನ ವಿಧಾನಸೌಧದ ಎದುರುಗಡೆ ಸ್ಥಾಪಿಸಬೇಕು ಎಂದರು.ರಾಜ್ಯದ ಈಡಿಗ ಸಮಾಜದ ಹಾಗೂ ಹಿಂದುಳಿದ ವರ್ಗದ ಭಕ್ತಿಶ್ರದ್ಧಾ ಕೇಂದ್ರವಾದ ಸಿಗಂಧೂರು ಚೌಡೇಶ್ವರಿ ದೇವಸ್ಥಾನದ ವಿರುದ್ಧ ಹೂಡಿದ ಮೊಕದ್ದಮೆಗಳನ್ನು ಕೂಡಲೇ ಹಿಂತೆಗೆದುಕೊಂಡು ದೇವಸ್ಥಾನಕ್ಕೆ ಸೂಕ್ತ ಭದ್ರತೆ ನೀಡಿ ಕ್ಷೇತ್ರಕ್ಕೆ ಅಗತ್ಯ ಭೂಮಿ ಮಂಜೂರು ಮಾಡಬೇಕು.
ಶಿವಮೊಗ್ಗ, ಮಂಗಳೂರು, ಕಾರವಾರ, ಉಡುಪಿ ಪ್ರತಿ ಜಿಲ್ಲೆಯಲ್ಲಿ 5 ಎಕರೆ ಜಮೀನು ಮಂಜೂರು ಮಾಡಿ ಐಎಎಸ್, ಐಪಿಎಸ್, ಕೆಎಎಸ್ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಸರ್ಕಾರ ಮುಂದಾಗಬೇಕಿದೆ ಎಂದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಹಾಜರಿದ್ದರು.