ನಾಳೆಯಿಂದ ಚಾಮರಾಜನಗರ ಜಿಲ್ಲಾ ದಸರಾ ಸಂಭ್ರಮ

KannadaprabhaNewsNetwork |  
Published : Oct 16, 2026, 01:45 AM IST
೧೫ಕೆಎಲ್‌ಆರ್-೫ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ವರ್ತೂರು ಪ್ರಕಾಶ್. | Kannada Prabha

ಸಾರಾಂಶ

ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಕಾರ್ಯಕ್ರಮವನ್ನು ಅ. 17 ರಿಂದ 19ರವರೆಗೆ ನಗರದಲ್ಲಿ ಆಯೋಜಿಸಲಾಗಿದೆ.

ಖ್ಯಾತ ಚಲನಚಿತ್ರ ನಟ ವಿ. ರವಿಚಂದ್ರನ್ ದಸರಾ ಮಹೋತ್ಸವಕ್ಕೆ ಚಾಲನೆಕನ್ನಡಪ್ರಭ ವಾರ್ತೆ ಚಾಮರಾಜನಗರ

ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಕಾರ್ಯಕ್ರಮವನ್ನು ಅ. 17 ರಿಂದ 19ರವರೆಗೆ ನಗರದಲ್ಲಿ ಆಯೋಜಿಸಲಾಗಿದೆ.

ಅ.17ರಂದು ಬೆಳಗ್ಗೆ 10.40 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯದ ಮೂಲಕ ದಸರಾ ಮಹೋತ್ಸವಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡುವರು. ಸಂಜೆ 5.30 ಗಂಟೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಖ್ಯ ವೇದಿಕೆಯಲ್ಲಿ ಖ್ಯಾತ ಚಲನಚಿತ್ರ ನಟರಾದ ವಿ. ರವಿಚಂದ್ರನ್ ಅವರು ದಸರಾಗೆ ಚಾಲನೆ ನೀಡುವರು. ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು.

ಲೋಕಸಭಾ ಸದಸ್ಯರಾದ ಸುನೀಲ್ ಬೋಸ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ವಿ ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಅ. 17ರಂದು ಬೆಳಗ್ಗೆ 11 ಗಂಟೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. 11.30 ಗಂಟೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಉದ್ಘಾಟನೆ ನೆರವೇರಲಿದೆ. ಬೆಳಗ್ಗೆ 11.45 ಗಂಟೆಗೆ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಮಹಿಳಾ ದಸರಾ ಕಾರ್ಯಕ್ರಮ, 12.30 ಗಂಟೆಗೆ ರಂಗೋಲಿ ಸ್ಪರ್ಧೆ, ಮಧ್ಯಾಹ್ನ 1 ಗಂಟೆಗೆ ಚಿತ್ರಕಲಾ ಪ್ರದರ್ಶನ ಉದ್ಘಾಟನೆಗೊಳ್ಳಲಿದೆ.

ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಡಳಿತ ಭವನದಿಂದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದವರೆಗೆ ವಿವಿಧ ಕಲಾ ತಂಡಗಳಿಂದ ಮತ್ತು ವಿವಿಧ ಇಲಾಖೆಗಳಿಂದ ಸ್ತಬ್ದ ಚಿತ್ರಗಳ ಮೆರವಣಿಗೆ ನಡೆಯಲಿದೆ. ಸಂಜೆ 5.30 ಗಂಟೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಂಜೆ 6 ಗಂಟೆಗೆ ರಸಮಂಜರಿ ಕಾರ್ಯಕ್ರಮ ನಡೆಯಲಿವೆ.

ಅ. 18ರಂದು ಬೆಳಗ್ಗೆ 6.30 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನ ಆವರಣದ ಮುಂಭಾಗದಿಂದ ಮ್ಯಾರಥಾನ್ ಆರಂಭವಾಗಲಿದೆ. ಬೆಳಗ್ಗೆ 10 ಗಂಟೆಗೆ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಕವಿಗೋಷ್ಠಿ ನಡೆಯಲಿದೆ. ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಆವರಣದ ಮುಖ್ಯ ವೇದಿಕೆಯಲ್ಲಿ ಬೆಳಗ್ಗೆ 10 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 4 ಗಂಟೆಗೆ ಯುವ ಸಂಭ್ರಮ ಹಾಗೂ ಸಂಜೆ 6 ರಿಂದ ರಾತ್ರಿ 9.45 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಅ. 19ರಂದು ಬೆಳಗ್ಗೆ 6.30 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನ ಆವರಣದಿಂದ ಪಾರಂಪರಿಕ ನಡಿಗೆ ಪ್ರಾರಂಭಗೊಳ್ಳಲಿದೆ. ಬೆಳಿಗ್ಗೆ 10 ರಿಂದ ಸಂಜೆ 6.30 ಗಂಟೆಯವರೆಗೆ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಚಾಮರಾಜೇಶ್ವರಸ್ವಾಮಿ ದೇವಸ್ಥಾನ ಆವರಣದ ಮುಖ್ಯ ವೇದಿಕೆಯಲ್ಲಿ ಬೆಳಗ್ಗೆ 10 ರಿಂದ ರಾತ್ರಿ 9.45 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಮಾರೋಪ ಸಮಾರಂಭವು ಸಹ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

----------

ಇಂದು ದಸರಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ವತಿಯಿಂದ ಚಾಮರಾಜನಗರ ದಸರಾ ಮಹೋತ್ಸವ ಅಂಗವಾಗಿ ಅ. 16ರಂದು ರೈತ ದಸರಾ, ಫಲಪುಷ್ಪ ಪ್ರದರ್ಶನ, ಶ್ವಾನ ಪ್ರದರ್ಶನ, ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 10ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶ್ವಾನಗಳ ಪ್ರದರ್ಶನವನ್ನು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸುವರು. 11.45 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರೈತ ದಸರಾದ ವೇದಿಕೆ ಕಾರ್ಯಕ್ರಮ ಹಾಗೂ ರಾಶಿ ಪೂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ರೈತ ದಸರಾ ಕಾರ್ಯಕ್ರಮ ಉದ್ಘಾಟಿಸುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಬೆಳಗ್ಗೆ 11.30 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಬೆಳಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಒಳ ಆವರಣದಲ್ಲಿ ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಫಲಪುಷ್ಪ ಪ್ರದರ್ಶನ ಉದ್ಘಾಟಿಸುವರು.

ಬೆಳಗ್ಗೆ 11 ಗಂಟೆಗೆ ಚಾಮರಾಜೇಶ್ವರ ದೇವಸ್ಥಾನದ ಬಳಿ ರೈತ ದಸರಾ ಮೆರವಣಿಗೆಗೆ ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ಚಾಲನೆ ನೀಡುವರು. ಸಂಜೆ 5 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಬಹುಮಾನ ವಿತರಿಸುವರು.

ಕಾರ್ಯಕ್ರಮದಲ್ಲಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್ ಭಾಗವಹಿಸುವರು. ಶಾಸಕರಾದ ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ (ಮುನ್ನ) ಅವರು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಚಿಕ್ಕಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

---------------

ಇಂದು ರೈತ ದಸರಾ: ಮೆರವಣಿಗೆ, ವಸ್ತುಪ್ರದರ್ಶನ ಚಾಮರಾಜನಗರ: ಚಾಮರಾಜನಗರ ದಸರಾ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ರೈತ ದಸರಾ ಕಾರ್ಯಕ್ರಮವನ್ನು ಅ. 16 ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ. ಬೆಳಗ್ಗೆ 10.30 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಿಂದ ಪಚ್ಚಪ್ಪ ವೃತ್ತ ಮಾರ್ಗವಾಗಿ ಡಾ. ಬಿ.ಆರ್ ಅಂಬೇಡ್ಕರ್ ಭವನದವರೆಗೆ ಇಲಾಖಾ ಸ್ತಬ್ಧಚಿತ್ರಗಳು, ಎತ್ತಿನ ಗಾಡಿಗಳು ಹಾಗೂ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ. ಬಳಿಕ ವೇದಿಕೆ ಕಾರ್ಯಕ್ರಮವಿದ್ದು, ಕೃಷಿ ವಸ್ತುಪ್ರದರ್ಶನದಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಪಾರಂಪರಿಕ ಕೃಷಿ ವಸ್ತುಗಳ ಪ್ರದರ್ಶನ, ಸಾವಯವ ಉತ್ಪನ್ನಗಳು, ಮಣ್ಣು ಆರೋಗ್ಯ ಪ್ರಯೋಗಾಲಯ, ರೇಷ್ಮೆ ಕೃಷಿ, ಅಲಂಕಾರಿಕ ಮೀನುಗಳ ಪ್ರದರ್ಶನ ಹಾಗೂ ಇತರೆ ವಸ್ತು ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ರೈತರು ರೈತ ದಸರಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

---------

ಇಂದು ಹಾಲು ಕರೆಯುವ ಸ್ಪರ್ಧೆ, ಶ್ವಾನ ಪ್ರದರ್ಶನ

ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಏರ್ಪಡಿಸಿರುವ ರೈತ ದಸರಾ ಅಂಗವಾಗಿ ಅ. 16ರಂದು ಜಿಲ್ಲಾಮಟ್ಟದ ಹಾಲು ಕರೆಯುವ ಸ್ಪರ್ಧೆ ಹಾಗೂ ಶ್ವಾನ ಪ್ರದರ್ಶನ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಸಂಯುಕ್ತ ಪದವಿ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 7 ಗಂಟೆಗೆ ದಿನದ ಮೊದಲ ಹಾಲು ಕರೆಯುವಿಕೆ ಹಾಗೂ ಅದೇ ದಿನ ಸಂಜೆ 5 ಗಂಟೆಗೆ ಎರಡನೇ ಬಾರಿ ಹಾಲು ಕರೆಯುವಿಕೆಯ ಒಟ್ಟು ಪ್ರಮಾಣವನ್ನು ಸ್ಪರ್ಧೆಗೆ ಪರಿಗಣಿಸಲಾಗುವುದು. ವಿಜೇತರಿಗೆ ಪ್ರಥಮ ಬಹುಮಾನವಾಗಿ 20 ಸಾವಿರ ರು., ದ್ವಿತೀಯ ಬಹುಮಾನ 15 ಸಾವಿರ ರು., ತೃತೀಯ ಬಹುಮಾನ 10 ಸಾವಿರ ರು. ನೀಡಲಾಗುವುದು.

ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶ್ವಾನ ಪ್ರದರ್ಶನ ಸ್ಪರ್ಧೆಯು ನಡೆಯಲಿದ್ದು, ವಿಜೇತರಾದ ಶ್ವಾನಗಳಿಗೆ ತಳಿವಾರು ವಿಶೇಷ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಚಾಮರಾಜನಗರದ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಮೊ.ಸಂ 9141328463 ಹಾಗೂ ಮುಖ್ಯ ಪಶುವೈದ್ಯಾಧಿಕಾರಿಗಳು ಜಿಲ್ಲಾ ಪಾಲಿಕ್ಲಿನಿಕ್ ಮೊ.ಸಂ 9480310464 ಮತ್ತು ಸ್ಥಳೀಯ ಪಶುವೈದ್ಯ ಸಂಸ್ಥೆಗಳನ್ನು ಸಂಪರ್ಕಿಸಬಹುದು.

ಜಿಲ್ಲೆಯ ಆಸಕ್ತ ಪಶುಪಾಲಕರು ಮತ್ತು ಶ್ವಾನ ಪಾಲಕರು/ಶ್ವಾನ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಟಿಂಗ್ ಆಪರೇಷನ್ ಸಿಎಂ ಮಾಡಿಸಿದ್ದಾರೆ ಎಂಬ ಎಚ್ಡಿಕೆ ಹೇಳಿಕೆಯಲ್ಲಿ ಆಧಾರವಿಲ್ಲ: ಕೆ.ಎಂ.ಉದಯ್
ಅಭಿವೃದ್ಧಿಯಲ್ಲಿ ನಿರೀಕ್ಷಿತ ಪ್ರಗತಿ ಕಾಣದ ದೊಡ್ಡಅರಸಿನಕೆರೆ ಗ್ರಾಮ: ಶಾಸಕ ಉದಯ್