ಮತಗಳ್ಳತನ ವಿರುದ್ದ ಕಾಂಗ್ರೆಸ್‌ನಿಂದ ಮುಂಬತ್ತಿ ಮೆರವಣಿಗೆ

KannadaprabhaNewsNetwork |  
Published : Aug 15, 2025, 01:00 AM IST
ಬಿಜೆಪಿ ಮತಗಳ್ಳತನ ವಿರುದ್ದ  ಕಾಂಗ್ರೆಸ್‌ನಿಂದ ಮುಂಬತ್ತಿ  ಮೆರವಣಿಗೆ | Kannada Prabha

ಸಾರಾಂಶ

ಲೋಕಸಭೆ ಚುನಾವಣೆಯಲ್ಲ ನಡೆದಿರುವ ಮತಗಳ್ಳತನ ವಿರುದ್ದ ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ಸಮಿತಿಯಿಂದ ಮುಂಬತ್ತಿಯನ್ನು ಹಿಡಿದು ಮೆರವಣಿಗೆ ಮಾಡುವ ಮೂಲಕ ಬಿಜೆಪಿ ವಿರುದ್ದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಲೋಕಸಭೆ ಚುನಾವಣೆಯಲ್ಲ ನಡೆದಿರುವ ಮತಗಳ್ಳತನ ವಿರುದ್ದ ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ಸಮಿತಿಯಿಂದ ಮುಂಬತ್ತಿಯನ್ನು ಹಿಡಿದು ಮೆರವಣಿಗೆ ಮಾಡುವ ಮೂಲಕ ಬಿಜೆಪಿ ವಿರುದ್ದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ನೇತೃತ್ವದಲ್ಲಿ ಮೆರವಣಿಗೆ ಹೊರಟ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಘೋಷಣೆ ಕೂಗಿದರು. ಭುವನೇಶ್ವರಿ ವೃತ್ತದಲ್ಲಿ ಕೆಲ ಕಾಲ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ನಮ್ಮ ಪಕ್ಷದ ಯುವ ನೇತಾರರು ಹಾಗೂ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ನೇರ ಆರೋಪ ಮಾಡಿದ್ದು, ಇದರ ಬಗ್ಗೆ ದಾಖಲೆಗಳ ಸಮೇತ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಇದರ ಬಗ್ಗೆ ಚುನಾವಣೆ ಆಯೋಗ ಯಾವುದೇ ರೀತಿಯ ಕ್ರಮ ಕೈಗೊಳ್ಳದೇ ಬಿಜೆಪಿ ಕೈಗೊಂಬೆಯಂತೆ ವರ್ತನೆ ಮಾಡುತ್ತಿದೆ ಎಂದು ದೂರಿದರು. ಸಂವಿಧಾನದ ಮೂಲಕ ಬಂದಿರುವ ಮತದಾನ ಮತ್ತು ಪ್ರಭುಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡಲು ಬಿಜೆಪಿ ಮುಂದಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಕಡೆಯಲ್ಲಿ ಮತದಾನವನ್ನು ಮಾಡದಂತೆ ಮಾಡುವುದು, ಮತದಾರರ ಪಟ್ಟಿಯಿಂದ ಹೆಸರು ತೆಗೆಸುವುದು ಹಾಗೂ ಮತಗಳ್ಳತನ ಮಾಡಿರುವುದು ರುಜುವತಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡರು ಸುಳ್ಳು ಹೇಳುತ್ತಿದ್ದು, ಚುನಾವಣಾ ಆಯೋಗ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ರಾಹುಲ್ ಗಾಂಧಿ ಅವರ ಹೋರಾಟಕ್ಕೆ ದೇಶದ್ಯಾಂತ ಭಾರಿ ಬೆಂಬಲ ವ್ಯಕ್ತವಾಗುತ್ತಿದ್ದು, ಜಿಲ್ಲಾ ಕಾಂಗ್ರೆಸ್ ವತಿಯಿಂದಲು ಅವರನ್ನು ಬೆಂಬಲಿಸಿ, ಇಂದು ಮುಂಬತ್ತಿ ಮೆರವಣಿಗೆಯನ್ನು ಮಾಡಲಾಗಿದೆ ಎಂದು ರವಿಕುಮಾರ್ ತಿಳಿಸಿದರು. ಪ್ರತಿಭಟನೆಯಲ್ಲಿ ಚುಡಾ ಅಧ್ಯಕ್ಷರು ಅದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಬ್ಲಾಕ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ, ತೋಟೇಶ್, ಹೊಂಗನೂರು ಚಂದ್ರು, ಆಲೂರು ಪ್ರದೀಪ್, ಕಂದಹಳ್ಳಿ ನಂಜುಂಡಸ್ವಾಮಿ, ಕರಿನಂಜನಪುರ ಸ್ವಾಮಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಸ್. ನಾಗರತ್ನ ಕೆಂಗಾಕಿ, ಸಿ.ಎ. ಮಹದೇವಶೆಟ್ಟಿ, ನಗರಸಭಾ ಸದಸ್ಯ ಚಿನ್ನಮ್ಮ, ಪದ್ಮ ಪುರುಷೋತ್ತಮ್, ಉಮ್ಮತ್ತೂರು ಭಾಗ್ಯ, ರವಿಗೌಡ, ಹೊಂಗನೂರು ಜಯರಾಜ್, ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ, ಮುಜಾಹಿದ್, ಶಿವಮೂರ್ತಿ, ನಾಗುಮೋಹನ್, ಮೊದಲಾದವರು ಇದ್ದರು.

PREV

Recommended Stories

ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ