ಮುಖ್ಯಮಂತ್ರಿ ಸಿದ್ದರಾಮಯ್ಯರವರ 77ನೇ ಹುಟ್ಟುಹಬ್ಬದ ನಿಮಿತ್ತ ರೋಗಿಗಳಿಗೆ ಹಣ್ಣು ವಿತರಣೆ

KannadaprabhaNewsNetwork |  
Published : Aug 13, 2024, 12:47 AM IST
12ಕೆಎಂಎನ್ ಡಿ21 | Kannada Prabha

ಸಾರಾಂಶ

ಸಿಎಂ ಸಿದ್ದರಾಮಯ್ಯ ಬಡವರು ಮತ್ತು ದೀನ ದಲಿತರ ಪರವಾದ ವ್ಯಕ್ತಿ. 40 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಕಳಂಕ ರಹಿತ ಆಡಳಿತ ನೀಡಿದ್ದಾರೆ. ಗ್ಯಾರಂಟಿ ಯೋಜನೆ ಅನುಷ್ಟಾನಕ್ಕೆ ತಂದು ಬಡವರ ಬದುಕಿಗೆ ಆಸರೆಯಾಗಿದ್ದಾರೆ. ಸಿದ್ದರಾಮಯ್ಯ ದೇಶದ ಪ್ರಧಾನಿಯಾಗಬೇಕೆಂಬ ಬಯಕೆ ನಮ್ಮದಾಗಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 77ನೇ ಹುಟ್ಟುಹಬ್ಬವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಕಾಂಗ್ರೆಸ್ ಮುಖಂಡರು ಆಚರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್ ಮತ್ತು ಹರಳಹಳ್ಳಿ ವಿಶ್ವನಾಥ್ ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಸಿಎಂಗೆ ಸಿದ್ದರಾಮಯ್ಯರಿಗೆ ಶುಭ ಕೋರಿದರು.

ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಮಾತನಾಡಿ, ಸಿಎಂ ಸಿದ್ದರಾಮಯ್ಯ ಬಡವರು ಮತ್ತು ದೀನ ದಲಿತರ ಪರವಾದ ವ್ಯಕ್ತಿ. 40 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಕಳಂಕ ರಹಿತ ಆಡಳಿತ ನೀಡಿದ್ದಾರೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಟಾನಕ್ಕೆ ತಂದು ಬಡವರ ಬದುಕಿಗೆ ಆಸರೆಯಾಗಿದ್ದಾರೆ. ಸಿದ್ದರಾಮಯ್ಯ ದೇಶದ ಪ್ರಧಾನಿಯಾಗಬೇಕೆಂಬ ಬಯಕೆ ನಮ್ಮದಾಗಿದೆ ಎಂದರು.

ಈ ವೇಳೆ ಮಾಜಿ ಶಾಸಕ ಬಿ.ಪ್ರಕಾಶ್, ಮುಖಂಡರಾದ ವಿಜಯರಾಮೇಗೌಡ, ಎಂ.ಡಿ.ಕೃಷ್ಣಮೂರ್ತಿ, ಕಿಕ್ಕೇರಿ ಸುರೇಶ್, ಕೋಡಿಮಾರನಹಳ್ಳಿ ದೇವರಾಜು, ಶೀಳನೆರೆ ಅಂಬರೀಶ್, ಕೆ.ಆರ್.ರವಿಂದ್ರಬಾಬು, ಅಗಸರಹಳ್ಳಿ ಗೋವಿಂದರಾಜು, ಲಕ್ಷ್ಮೀಪುರ ಚಂದ್ರೇಗೌಡ, ಅಕ್ಕಿಹೆಬ್ಬಾಳು ದಿವಾಕರ್, ಸ್ನೇಹಿತ ರಮೇಶ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಪುರುಷೋತ್ತಮ್ ಹಲವರು ಇದ್ದರು.ಇಂದು ಶ್ರೀ ಚೌಡೇಶ್ವರಿ ಮಂಡಲ ಪೂಜೆ

ಮಂಡ್ಯ: ತಾಲೂಕಿನ ಚಂದಗಾಲು ಶ್ರೀ ಚೌಡೇಶ್ವರಿ ದೇವಸ್ಥಾನದಿಂದ ಶ್ರೀಚೌಡೇಶ್ವರಿ ದೇವಿ ಮಂಡಲ ಪೂಜೆ ಕಾರ್ಯಕ್ರಮ ಆ.13ರಂದು ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ದುರ್ಗಾ ಹೋಮ, ಫಲಪಂಚಾಮೃತ ಅಭಿಷೇಕ ಏರ್ಪಡಿಸಲಾಗಿದೆ. ದಿವ್ಯಸಾನ್ನಿಧ್ಯವನ್ನು ಆದಿ ಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ವಹಿಸುವರು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಯಲಿದ್ದು, ಸಂಜೆ 4.30ಕ್ಕೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿದೆ. ಸಂಜೆ 7.30ಕ್ಕೆ ಮಲ್ಲನಾಯಕನಕಟ್ಟೆ ಶ್ರೀ ಭೈರವೇಶ್ವರ ಸಾಂಸ್ಕೃತಿಕ ಕಲಾ ಸಂಘದವರಿಂದ ಚನ್ನಪ್ಪ ಚನ್ನೇಗೌಡ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ