ಬೆಳೆ ನಷ್ಟ ಪರಿಹಾರಕ್ಕೆ ಫ್ರೂಟ್ ಐಡಿಗೆ ಕಡ್ಡಾಯ

KannadaprabhaNewsNetwork |  
Published : Nov 05, 2023, 01:16 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಹಾವೇರಿಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಲು ರೈತರು FRUITS ID ಹೊಂದಿರುವುದರ ಜತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲ ಸರ್ವೇ ನಂಬರ್‌ಗಳನ್ನು FRUITS IDಗೆ ಸೇರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹಾವೇರಿ

ಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಲು ರೈತರು FRUITS ID ಹೊಂದಿರುವುದರ ಜತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲ ಸರ್ವೇ ನಂಬರ್‌ಗಳನ್ನು FRUITS IDಗೆ ಸೇರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ. ಕಾರಣ FRUITS ID ಹೊಂದಿರುವ ರೈತರು ಆಧಾರ್ ಕಾರ್ಡ್ ಹಾಗೂ ಉತಾರ ದಾಖಲಾತಿಗಳೊಂದಿಗೆ ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತುರ್ತಾಗಿ ಬಾಕಿ ಇರುವ ಸರ್ವೇ ನಂಬರ್‌ಗಳನ್ನು ಸೇರಿಸಿಕೊಳ್ಳಬೇಕು. ಇಲ್ಲವಾದಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಸಿಗುವುದಿಲ್ಲ. ಜಿಲ್ಲೆಯ ರೈತರು FRUITS ID ಹೊಂದಿರುವುದರ ಜತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲ ಸರ್ವೇ ನಂಬರ್‌ಗಳನ್ನು FRUITS IDಗೆ ಸೇರಿಸಿಕೊಳ್ಳಲು ಕೋರಲಾಗಿದೆ. ಇದಲ್ಲದೇ FRUITS ID ಹೊಂದಿರದ ರೈತರು ಎಲ್ಲ ದಾಖಲಾತಿಗಳೊಂದಿಗೆ FRUITS ID ಮಾಡಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

Recommended Stories

ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ದ್ವೇಷ ಭಾಷಣ ತಡೆ, ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮಸೂದೆ