ವಿಜಯೇಂದ್ರ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣುಹಂಪಲು

KannadaprabhaNewsNetwork |  
Published : Nov 06, 2026, 02:00 AM IST
5ಎಚ್ಎಸ್ಎನ್11 :  | Kannada Prabha

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ 51ನೇ ಜನ್ಮದಿನದ ಅಂಗವಾಗಿ ಬಿಜೆಪಿ ಮಂಡಲದ ವತಿಯಿಂದ ಪಟ್ಟಣದ ಸಾರ್ವಜನಿಕ ಕ್ರಾಫರ್ಡ್ ಆಸ್ಪತ್ರೆಯಲ್ಲಿ 170ಕ್ಕೂ ಹೆಚ್ಚು ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ವಿಜಯೇಂದ್ರ ಅವರಿಗೆ ಭಗವಂತ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಪಕ್ಷವನ್ನು ಮುನ್ನಡೆಸುವ ಶಕ್ತಿ ನೀಡಲಿ ಎಂದು ಹಾರೈಸಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ 51ನೇ ಜನ್ಮದಿನದ ಅಂಗವಾಗಿ ಬಿಜೆಪಿ ಮಂಡಲದ ವತಿಯಿಂದ ಪಟ್ಟಣದ ಸಾರ್ವಜನಿಕ ಕ್ರಾಫರ್ಡ್ ಆಸ್ಪತ್ರೆಯಲ್ಲಿ 170ಕ್ಕೂ ಹೆಚ್ಚು ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು, ರಾಜ್ಯಾಧ್ಯಕ್ಷರಾದ ಬಳಿಕ ಬಿ.ವೈ. ವಿಜಯೇಂದ್ರ ಅವರು ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡಿದ್ದು, ರೈತರು, ನಿರ್ಗತಿಕರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಸಂಕಷ್ಟಗಳಿಗೆ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು-ಬೆಂಗಳೂರು ಪಾದಯಾತ್ರೆ ಸೇರಿದಂತೆ ವಿವಿಧ ಹೋರಾಟಗಳ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರ ಜನ್ಮದಿನವನ್ನು ಸೇವಾ ಕಾರ್ಯದ ಮೂಲಕ ಆಚರಿಸುತ್ತಿರುವುದು ಸಂತಸದ ಸಂಗತಿ ಎಂದರು. ಮುಂಬರುವ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸಿ, 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ವಿಜಯೇಂದ್ರ ಅವರಿಗೆ ಭಗವಂತ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಪಕ್ಷವನ್ನು ಮುನ್ನಡೆಸುವ ಶಕ್ತಿ ನೀಡಲಿ ಎಂದು ಹಾರೈಸಿದರು.ಬಿಜೆಪಿ ಸಕಲೇಶಪುರ ಮಂಡಲ ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಮಾತನಾಡಿ, ರಾಜ್ಯದ ಯುವಕರ ಕಣ್ಮಣಿ ಹಾಗೂ ಪಕ್ಷದ ಸಂಘಟನಾ ಶಕ್ತಿಯಾಗಿರುವ ಬಿ.ವೈ. ವಿಜಯೇಂದ್ರ ಅವರ 51ನೇ ಜನ್ಮದಿನವನ್ನು ರಾಜ್ಯಾದ್ಯಂತ ಸೇವಾ ಕಾರ್ಯಗಳ ಮೂಲಕ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂತೆಯೇ ಪಕ್ಷದ ನಾಯಕರ ಜನ್ಮದಿನಗಳನ್ನೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸಕಲೇಶಪುರ ಮಂಡಲವೂ ಅರ್ಥಪೂರ್ಣವಾಗಿ ಜನ್ಮದಿನ ಆಚರಿಸಿದೆ ಎಂದರು. ರಾಜ್ಯದಲ್ಲಿ ಬಿಜೆಪಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ವಿಜಯೇಂದ್ರ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಸಂಘಟನಾ ಶಕ್ತಿ ಲಭಿಸಲಿ ಎಂದು ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್, ಅಗ್ನಿ ಸೋಮಶೇಖರ್, ಬಿಜೆಪಿ ಮುಖಂಡರಾದ ಜಯಪ್ರಕಾಶ್, ನವೀನ್ ಶೆಟ್ಟಿ, ನೇಮನ್ ಶೇಕ್ ಸೇರಿದಂತೆ ಪಕ್ಷದ ಮುಖಂಡರು, ಮಹಿಳಾ ಕಾರ್ಯಕರ್ತರು ಹಾಗೂ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.---ಫೋಟೋ:ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಬಿ. ವೈ ವಿಜಯೇಂದ್ರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಟಿಂಗ್‌: ನ್ಯಾಯಾಲಯಕ್ಕೆ ಹಲವು ದಾಖಲೆ ಸಲ್ಲಿಸಿದ ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥ
ಮದುವೆ ಆಗುವಂತೆ ಉದ್ಯಮಿಗೆ ಹನಿಟ್ರ್ಯಾಪ್: ₹2 ಕೋಟಿ ಬೇಡಿಕೆ