ಕನ್ನಡಪ್ರಭ ವಾರ್ತೆ ಸಿಂದಗಿ
ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಒಂದು ಭಾಗವಾಗಿದ್ದು, ಎಲ್ಲ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ರಾಷ್ಟ್ರ ಹಾಗೂ ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿದ್ದಾರೆ. ಈ ಮೂಲಕ ದೇಶದಲ್ಲಿಯೇ ಮಾದರಿ ಸಂಘಟನೆ ನಮ್ಮದಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಅಶೋಕ ತೆಲ್ಲೂರ, ಆಲಮೇಲ ತಾಲೂಕಾಧ್ಯಕ್ಷ ರವಿ ಬಿರಾದಾರ ಮಾತನಾಡಿ, ಈ ರಾಜ್ಯದ ಅಭಿವೃದ್ಧಿ ಸೂಚ್ಯಂಕದ ಬೆಳವಣಿಗೆಯಲ್ಲಿ ಹಾಗೂ ಜಿಎಸ್‌ಟಿ ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸಬೇಕು. ವಿವಿಧ ಇಲಾಖೆಗಳಲ್ಲಿ ೨.೬೦ ಲಕ್ಷ ಖಾಲಿ ಹುದ್ದೆಗಳಿದ್ದು, ಅವುಗಳನ್ನು ಕೂಡಲೇ ಭರ್ತಿ ಮಾಡಿಕೊಳ್ಳಬೇಕು. ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಿಂದಗಿ, ಆಲಮೇಲ ಮತ್ತು ದೇವರ ಹಿಪ್ಪರಗಿ ತಾಲೂಕು ಪದಾಧಿಕಾರಿಗಳಾದ ಗಿರೀಶ ಗತಾಟೆ, ರವಿ ಬಿರಾದಾರ, ಎಂ.ಜಿ.ಯಂಕಂಚಿ, ಸಿದ್ದು ಕಡಕಗಾಂವ, ಗುರು ಬಿರಾದಾರ, ಆನಂದ ಭೂಸನೂರ, ಆರ್.ಎಚ್.ಬಿರಾದಾರ, ಎ.ಎಚ್.ವಾಲೀಕಾರ, ಸಿ.ಬಿ.ಗಡಗಿ, ಸುರೇಶ ಬಬಲೇಶ್ವರ, ಸಂತೋಷ ಕಾಳಶೆಟ್ಟಿ, ಗಂಗಾಧರ ಸೋಮನಾಯಕ, ಪಂಡಿತ ವಾಸೇನ, ಬಸವರಾಜ ಸೊಂಪೂರ, ಸಂತೋಷ ಬಂದೆ ಮತ್ತು ನಿವೃತ್ತ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ರಾಜ್ಯ ಸರ್ಕಾರಿ ನೌಕರರು ಭಾಗವಹಿಸಿದ್ದರು.