ಸಾಮಾಜಿಕ ನ್ಯಾಯದ ಆಶಯ ಈಡೇರಿಸಿ: ಮುಂಡರಗಿ ನಾಗರಾಜ

KannadaprabhaNewsNetwork |  
Published : Aug 21, 2026, 02:00 AM IST
ಬಳ್ಳಾರಿಯಲ್ಲಿ ಜರುಗಿದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಸಮಾರಂಭಕ್ಕೆ ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಚಾಲನೆ ನೀಡಿದರು. | Kannada Prabha

ಸಾರಾಂಶ

ಬಳ್ಳಾರಿ ಜಿಲ್ಲಾಡಳಿತದಿಂದ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ನಡೆಯಿತು.

ಬಳ್ಳಾರಿ: ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯದ ಆಶಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.

ಜಿಲ್ಲಾಡಳಿತದಿಂದ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜರುಗಿದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ವಿನೋಬಾ ಭಾವೆ ಅವರ ಭೂದಾನ ಚಳವಳಿಯ ಪ್ರೇರಣೆಯೊಂದಿಗೆ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ‘ಉಳುವವನೇ ಒಡೆಯ’ ಎಂಬ ಐತಿಹಾಸಿಕ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದರು. ಬಡವರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಭೂಮಿಯ ಹಕ್ಕು ನೀಡಿ, ಬಡತನ ನಿರ್ಮೂಲನೆಗೆ ಮತ್ತು ಸಾಮಾಜಿಕ ಸಮಾನತೆಗೆ ಅಡಿಪಾಯ ಹಾಕಿದ ಮಹಾನ್ ನಾಯಕ ಅರಸು ಎಂದು ಸ್ಮರಿಸಿದರು.

ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ ದೂರದೃಷ್ಟಿ ಹಾಗೂ ಕೊಡುಗೆಗಳು ಇಂದಿಗೂ ಲಕ್ಷಾಂತರ ಜನರ ಬದುಕಿಗೆ ದಾರಿದೀಪವಾಗಿವೆ ಎಂದು ಹೇಳಿದರು.

ಎಡಿಸಿ ಮಹಮ್ಮದ್ ಝುಬೇರ್ ಎನ್. ಮಾತನಾಡಿದರು. ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಬಾಷಾ ಅವರು ಡಿ. ದೇವರಾಜು ಅರಸು ಕುರಿತು ವಿಶೇಷ ಉಪನ್ಯಾಸ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಿದ್ಯಾರ್ಥಿ ನಿಲಯಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಹಾಗೂ ವಿವಿಧ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಇದಕ್ಕೂ ಮುನ್ನ ಸಂವಿಧಾನ ಪ್ರಸ್ತಾವನೆ ಬೋಧಿಸಲಾಯಿತು. ಇದೇ ವೇಳೆ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಸದ್ಭಾವನಾ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ಡಿ. ದೇವರಾಜ ಅರಸು ವೇದಿಕೆಯ ಜಿಲ್ಲಾಧ್ಯಕ್ಷ ಕಲ್ಲುಕಂಭ ಪಂಪಾಪತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಎ.ಕೆ., ತಾಲೂಕು ಅಧಿಕಾರಿ ಲೋಕೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸಿ
ಚಿಕನ್ ಕಂಪನಿಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಾಳಿ, ಪರಿಶೀಲನೆ