ಸಾರಿಗೆಯ ನಿವೃತ್ತ ನೌಕರರ ಬೇಡಿಕೆ ಈಡೇರಿಸಿ

KannadaprabhaNewsNetwork |  
Published : Oct 06, 2023, 01:15 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ವಾಯವ್ಯ ಸಾರಿಗೆ ಸಂಸ್ಥೆ ನೌಕರರ ಮತ್ತು ನಿವೃತ್ತ ನೌಕರರ ಸಂಘದಿಂದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ನಿವೃತ್ತ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗುರುವಾರ ವಾಯವ್ಯ ಸಾರಿಗೆ ಸಂಸ್ಥೆ ನೌಕರರ ಮತ್ತು ನಿವೃತ್ತ ನೌಕರರ ಸಂಘದಿಂದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ ನಿವೃತ್ತ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗುರುವಾರ ವಾಯವ್ಯ ಸಾರಿಗೆ ಸಂಸ್ಥೆ ನೌಕರರ ಮತ್ತು ನಿವೃತ್ತ ನೌಕರರ ಸಂಘದಿಂದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ನಿವೃತ್ತ ನೌಕರರಿಗೆ ಬರಬೇಕಿದ್ದ 2020ರ ವೇತನ ಪರಿಷ್ಕರಣೆ ಬಾಕಿ ಮತ್ತು ರಜೆ ನಗದೀಕರಣದ ವ್ಯತ್ಯಾಸದ ಬಾಕಿ ಹಣ ನೀಡಬೇಕು. ನಿವೃತ್ತ ನೌಕರರಿಗೆ 2016-17 ರಿಂದ 2019- 2020ರ ವರೆಗಿನ ರಜೆ ನಗದೀಕರಣ ಬಾಕಿಯನ್ನು ತಕ್ಷಣ ನೀಡಬೇಕು. ಸ್ತ್ರೀ ಶಕ್ತಿ ಯೋಜನೆ ಪ್ರಯಾಣಿಕರಿಂದ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸಲು ನಿವೃತ್ತ ನೌಕರರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಈ ನೌಕರರಿಗೆ ಮುಂಗಡ ಆಸನ ಕಾಯ್ದಿರಿಸಬೇಕು.ನಿವೃತ್ತ ನೌಕರರಿಗೆ ವೈದ್ಯಕೀಯ ಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್.ಭರತ್, ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಹುಬ್ಬಳ್ಳಿ ವಿಭಾಗದ ಅಧ್ಯಕ್ಷ ಎಚ್.ಜಿ. ಕೊಪ್ಪದ, ಎ.ಎಚ್.ಜವಳಿ, ಎಸ್.ಎಸ್. ಪಾಟೀಲ, ಎಂ.ಎಂ. ಹಿರೇಮಠ, ಬಿ.ಎಸ್. ದೋತ್ರದ, ಐ.ಸಿ. ವಾಲಿಶೆಟ್ಟಿ, ವಿ.ಐ. ಭದ್ರಾಪೂರ ಸೇರಿದಂತೆ ಹಲವರಿದ್ದರು. 5ಎಚ್‌ಯುಬಿ35 ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ವಾಯವ್ಯ ಸಾರಿಗೆ ಸಂಸ್ಥೆ ನೌಕರರ ಮತ್ತು ನಿವೃತ್ತ ನೌಕರರ ಸಂಘದಿಂದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ