ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಕರ್ತವ್ಯ ಪಾಲಿಸಿ: ಡಾ. ಗಂಗಾಧರಪ್ಪ

KannadaprabhaNewsNetwork |  
Published : Jan 27, 2025, 12:46 AM IST
233 | Kannada Prabha

ಸಾರಾಂಶ

ಶೃಂಗೇರಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನವೇ ಶ್ರೇಷ್ಠ, ಪರಮೋಚ್ಚವಾದುದು. ಪ್ರತಿಯೊಬ್ಬರೂ ನಮ್ಮ ಸಂವಿಧಾನದ ಆಶಯಗಳಿಗೆ ಬದ್ಧರಾಗಿ, ಸಂವಿಧಾನದಲ್ಲಿ ನೀಡಿರುವ ಕರ್ತವ್ಯಗಳನ್ನು ಪಾಲನೆ ಮಾಡಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಡಾ.ಬಿ.ಆರ್.ಗಂಗಾಧರಪ್ಪ ಹೇಳಿದರು.

ಕ್ಷೇತ್ರ ಸಂಪನ್ಮೂಲ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದ್ದ 76 ನೇ ಗಣರಾಜ್ಯೋತ್ಸವ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನವೇ ಶ್ರೇಷ್ಠ, ಪರಮೋಚ್ಚವಾದುದು. ಪ್ರತಿಯೊಬ್ಬರೂ ನಮ್ಮ ಸಂವಿಧಾನದ ಆಶಯಗಳಿಗೆ ಬದ್ಧರಾಗಿ, ಸಂವಿಧಾನದಲ್ಲಿ ನೀಡಿರುವ ಕರ್ತವ್ಯಗಳನ್ನು ಪಾಲನೆ ಮಾಡಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಡಾ.ಬಿ.ಆರ್.ಗಂಗಾಧರಪ್ಪ ಹೇಳಿದರು.

ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದ್ದ 76 ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ, ರಾಜಕೀಯ, ಆರ್ಥಿಕ, ಸಾಂಸ್ಕೃತಿಕ ಇನ್ನಿತರೆ ಎಲ್ಲಾ ರೀತಿಯ ಹಕ್ಕಗಳು ಸಿಗುವಂತೆ ಮಾಡಿದರು. ಸಂವಿಧಾನ ನಿರ್ಮಾತೃಗಳ ಆಳವಾದ ಅಧ್ಯಯನ, ನಿರಂತರ ಪರಿಶ್ರಮದ ಫಲವೇ ದೇಶಕ್ಕೆ ನೀಡಿರುವ ಮಹಾನ್ ಕೊಡುಗೆ ಎಂದರು.

ಸಂವಿಧಾನ ರಚನೆಯಾಗಿ 75 ವರ್ಷಗಳು ಕಳೆದಿವೆ. ಸಂವಿಧಾನ ಪ್ರಜಾ ಪ್ರಭುತ್ವ ವ್ಯವಸ್ಥೆಯ ಜೀವಾಳ.ಆಡಳಿತದಿಂದ ಹಿಡಿದು ಒಕ್ಕೂಟ ರಾಜ್ಯ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಮಾಜದಲ್ಲಿ ಬದುಕುತ್ತಿರುವ ಕಟ್ಟಕಡೆ ವ್ಯಕ್ತಿಗೂ ಸಾಮಾಜಿಕ, ಆರ್ಥಿಕ ನ್ಯಾಯ ಸಿಗಬೇಕು. ಸಮಾನತೆ ಸಿಗಬೇಕು ಎಂಬುದು ಅಂಬೇಡ್ಕರ್ ಆಶಯವಾಗಿತ್ತು. ನಮ್ಮ ಹಕ್ಕು ಗಳನ್ನು ಅನುಭವಿಸುವ ಜೊತೆಗೆ ಕರ್ತವ್ಯಗಳನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ನಿರ್ವಹಿಸಿಕೊಂಡು ಹೋಗಬೇಕು ಎಂದರು.

ಕಾರ್ಯಕ್ರಮದಲ್ಲಿ ಬಿಆರ್ ಪಿ. ಸುಂದರೇಶ್, ಸಿಆರ್ ಪಿ ರಾಜನಾಯಕ್, ಬಿಐಆರ್ ಟಿ ಮಾಲಾ ವೈ ಪ್ರಭು, ಶಶಿಕಲಾ, . ಸುಂದರೇಶ್, ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು.

26 ಶ್ರೀ ಚಿತ್ರ 2-

ಶೃಂಗೇರಿ ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಗಂಗಾಧರಪ್ಪ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ