ತಂದೆ, ತಾಯಿಯ ಕನಸು ಈಡೇರಿಸಿ

KannadaprabhaNewsNetwork |  
Published : Jun 27, 2025, 12:48 AM IST
26ಎಎನ್‌ಟಿ1ಇಪಿ: ಆನವಟ್ಟಿಯ ಸರ್ಕಾರಿ ಕೆಪಿಎಸ್‌ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ವಿರೋಧಿ ದಿನ ಕಾರ್ಯಕ್ರಮವನ್ನು ಪಿಎಸ್‌ಐ ಚಂದನ್‌ ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ವಿದ್ಯಾರ್ಥಿ ಜೀವನದಲ್ಲಿ ಮಾದಕ ದ್ರವ್ಯ ವ್ಯಸನಕ್ಕೆ ಒಮ್ಮೆ ಒಳಗಾದರೆ, ಅದು ಸಂಪೂರ್ಣ ಬದುಕನ್ನೇ ನಾಶ ಮಾಡುತ್ತದೆ. ಪಿಯುಸಿ ಹದಿಹರಿಯದ ಈ ವಯಸ್ಸಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಎಚ್ಚರಿಕೆಯಿಂದ ಇರಬೇಕು. ಯಾವುದೆ ಅಮಿಷಕ್ಕೆ ಒಳಗಾಗದೆ ತಂದೆ-ತಾಯಿ ನಿಮ್ಮ ಭವಿಷ್ಯದ ಬಗ್ಗೆ ಕಂಡ ಕನಸು ಈಡೇರಿಸುವ ನಿಟ್ಟಿನಲ್ಲಿ ಚನ್ನಾಗಿ ಓದಿ ಒಳ್ಳೇಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಆನವಟ್ಟಿ ಆರಕ್ಷಕ ಠಾಣೆಯ ಪಿಎಸ್‌ಐ ಸಿ.ಚಂದನ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಆನವಟ್ಟಿ: ವಿದ್ಯಾರ್ಥಿ ಜೀವನದಲ್ಲಿ ಮಾದಕ ದ್ರವ್ಯ ವ್ಯಸನಕ್ಕೆ ಒಮ್ಮೆ ಒಳಗಾದರೆ, ಅದು ಸಂಪೂರ್ಣ ಬದುಕನ್ನೇ ನಾಶ ಮಾಡುತ್ತದೆ. ಪಿಯುಸಿ ಹದಿಹರಿಯದ ಈ ವಯಸ್ಸಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಎಚ್ಚರಿಕೆಯಿಂದ ಇರಬೇಕು. ಯಾವುದೆ ಅಮಿಷಕ್ಕೆ ಒಳಗಾಗದೆ ತಂದೆ-ತಾಯಿ ನಿಮ್ಮ ಭವಿಷ್ಯದ ಬಗ್ಗೆ ಕಂಡ ಕನಸು ಈಡೇರಿಸುವ ನಿಟ್ಟಿನಲ್ಲಿ ಚನ್ನಾಗಿ ಓದಿ ಒಳ್ಳೇಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಆನವಟ್ಟಿ ಆರಕ್ಷಕ ಠಾಣೆಯ ಪಿಎಸ್‌ಐ ಸಿ.ಚಂದನ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಗುರುವಾರ ಸರ್ಕಾರಿ ಕೆಪಿಎಸ್‌ ಶಾಲೆಯ ಕಾಲೇಜು ವಿಭಾಗದಲ್ಲಿ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಸುತ್ತಾ-ಮುತ್ತಲ ಪ್ರದೇಶ ಹಾಗೂ ಗ್ರಾಮಗಳಲ್ಲಿ ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳು ಒಳಗಾಗಿದ್ದರೆ ಅಥವಾ ಬಲವಂತಪಡಿಸುತ್ತಿದ್ದರೆ, ಹಲವು ರೀತಿಯ ಅಮಿಷಗಳನ್ನು ಒಡ್ಡುವ ಮಾದಕ ದ್ರವ್ಯ ಜಾಲದ ಅನುಮಾನ ಬರುವಂತ ವ್ಯಕ್ತಿಗಳು ಕಂಡು ಬಂದರೆ ಕೂಡಲೇ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ ಎಂದರು.

ಪ್ರಾಂಶುಪಾಲ ಟಿ. ಜಗದೀಶ್‌ ಮಾತನಾಡಿ, ಪೋಕ್ಸೋ ಕಾಯಿದೆ, ಹಾಗೂ ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆ ಬಗ್ಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ನಾಗರಾಜ್‌ ಶುಂಠಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ