ಕಬ್ಬು ಬೆಳೆಗಾರರ ವಿವಿಧ ಹಕ್ಕೊತ್ತಾಯಗಳ ಈಡೇರಿಸಿ

KannadaprabhaNewsNetwork |  
Published : Nov 04, 2026, 12:45 AM IST
3ಸಿಎಚ್‌ಎನ್52ಕಬ್ಬು ಬೆಳೆಗಾರರ ವಿವಿಧ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದಲ್ಲಿಕಬ್ಬು ಬೆಳೆಗಾರರ ಸಮನ್ವಯ ಸಮಿತಿ ವರಿತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಮತ್ತುರಾಜ್ಯ ಸರ್ಕಾರಗಳ ವಿರುದ್ದಆಕ್ರೋಶ ವ್ಯಕ್ತಪಡಿಸಲಾಯಿತು. | Kannada Prabha

ಸಾರಾಂಶ

ಕಬ್ಬು ಬೆಳೆಗಾರರ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದಲ್ಲಿ ಕಬ್ಬು ಬೆಳೆಗಾರರ ಸಮನ್ವಯ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕಬ್ಬು ಬೆಳೆಗಾರರ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದಲ್ಲಿ ಕಬ್ಬು ಬೆಳೆಗಾರರ ಸಮನ್ವಯ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು.

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಮೆರವಣಿಗೆ ಉದ್ದಕ್ಕೂಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ರಾಜ್ಯ ಸಮಿತಿ ಕರೆಯಂತೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ತಿಸಿದ್ದರು. ಆದರೆ ಪೊಲೀಸರ ಬಿಗಿ ಬಂದೋಬಸ್ತಿನಿಂದಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ರಾಜ್ಯದರೈತ ಸಂಘಟನೆಗಳ ಕಬ್ಬು ಬೆಳೆಗಾರರ ಸಮನ್ವಯ ಸಮಿತಿಯ ವತಿಯಿಂದ ನ.5ರಂದು ಬೆಂಗಳೂರು ಫ್ರೀಡಂ ಪಾರ್ಕಲ್ಲಿ ನಿರಂತರ ಬೃಹತ್ ಪ್ರತಿಭಟನಾಧರಣಿ ನಡೆಸಲಾಗುವುದುಎಂದು ತಿಳಿಸಿದರು.

ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಪರಸ್ಪರ ಆರೋಪ ಮಾಡುತ್ತಾ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದು, ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಯಾವುದೇ ನಿರ್ದಿಷ್ಟ ನಿರ್ಧಾರ ಕೈಗೊಳ್ಳದೆ ಅಂತ್ಯಗೊಂಡಿದೆ ಎಂದು ಆರೋಪಿಸಿದರು,

ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಾಗಣೆ ಸಂದರ್ಭದಲ್ಲಿ ಪ್ರತಿಟನ್‌ ಕಬ್ಬಿನಲ್ಲಿಎರಡರಿಂದ ಮೂರುಟನ್ ಕಡಿತಗೊಳಿಸುವ ಮೂಲಕ ರೈತರು ಮತ್ತು ಟ್ರ‍್ಯಾಕ್ಟರ್ ಮಾಲೀಕರಿಗೆ ಭಾರಿ ಆರ್ಥಿಕ ನಷ್ಟ ಉಂಟು ಮಾಡುತ್ತಿದ್ದಾರೆ ಕಬ್ಬಿನ ತೂಕ ನಿರ್ಧಾರ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ವಸೂಲಿ ದರಗಳಲ್ಲಿಯೂ ಅಕ್ರಮಗಳು ನಡೆಯುತ್ತಿವೆ ಎಂದು ದೂರಿದರು.

ಪಂಜಾಬ್ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 4,480 ರು., ತಮಿಳುನಾಡು 4,000 ರು., ಉತ್ತರ ಪ್ರದೇಶ 4,200 ರು. ನಿಗದಿ ಮಾಡಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ರಾಜ್ಯ ಸಲಹಾ ಬೆಲೆ ಘೋಷಿಸಬೇಕು. ಕೇಂದ್ರ ಸರ್ಕಾರ ಕಬ್ಬಿನ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ ದರವನ್ನು ಏರಿಕೆ ಮಾಡಬೇಕು. ಕಬ್ಬಿನ ಉತ್ಪಾದನಾ ವೆಚ್ಚ ಏರಿಕೆಯಾಗಿರುವ ಕಾರಣ ಎಫ್‌ಆರ್‌ಪಿ ದರವನ್ನು ಕನಿಷ್ಠ 10-25 ಇಳುವರಿಗೆ 4,500 ರು.ಗೆ ಏರಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಹೊನ್ನೂರು ಪ್ರಕಾಶ್, ಮೂಕಹಳ್ಳಿ ಮಹದೇವಸ್ವಾಮಿ, ಹೊನ್ನೂರು ಬಸವಣ್ಣ, ಡಿ. ಮಹೇಶ್, ಮಲ್ಲೇಶ್, ಪಟೇಲ್ ಶಿವಮೂರ್ತಿ, ರೇವಣ್ಣ, ಶಿವಕುಮಾರಸ್ವಾಮಿ ಸತೀಶ್, ಮಂಜು, ಪುಟ್ಟಮಾದೇಗೌಡ, ಪ್ರಸಾದ್, ಶಿವಸ್ವಾಮಿ, ವಿಜಯಕುಮಾರ್, ಶಿವಲಿಂಗೇಗೌಡ, ಅನಂತ್, ಮಹೇಶ್, ನಂಜುಂಡಸ್ವಾಮಿ, ಅಶೋಕ್‌ಅಯೂಬ್, ವಸೀಂಉಲ್ಲಾ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌