ಮೊಳಕಾಲ್ಮುರು: ತಾಲೂಕಿಗೆ ಬಂದಿರುವ ಅನುದಾನಗಳು ಮಾರ್ಚ್ 31ರೊಳಗೆ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಬೇಕು. ಸರ್ಕಾರಕ್ಕೆ ವಾಪಸ್ ಹೋದಲ್ಲಿ ನೀವೇ ಹೊಣೆಗಾರಾಗುತ್ತಿರಿ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಅಧಿಕಾರಿಗಳಿಗೆ ಖಡಕ್ಕಾಗಿ ಎಚ್ಚರಿಕೆ ನೀಡಿದರು.ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಅಬಿವೃದ್ಧಿ ಕಾರ್ಯಕ್ಕೆ ಬಂದಿರುವ ವಿವಿಧ ಇಲಾಖೆಯ ಅನುದಾನಗಳು ಸಂಪೂರ್ಣವಾಗಿ ಬಳಕೆಯಾಗಬೇಕು. ಸರ್ಕಾರಕ್ಕೆ ವಾಪಸ್ ಕಳಿಸಿದರೆ ನಿಮ್ಮನ್ನೇ ಹೊಣೆಗಾರರನ್ನಾಗಿಸುತ್ತೇನೆ. ಕಾಮಗಾರಿ ಪ್ರಕ್ರಿಯೆಗಳನ್ನು ಚುರುಕುಗೊಳಿಸಿ ಮಾರ್ಚ್ 31ರೊಳಗೆ ಮುಕ್ತಾಯಗೊಳಿಸಿ ಎಂದು ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಟೆಂಡರ್ ದಾರರನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸುವಂತೆ ಮೇಲಾಧಿಕಾರಿಗಳಿಗೆ ದೂರವಾಣಿ ಮೂಲಕ ತಿಳಿಸಿದರು.
ಈ ಬಾರಿ ತಾಲೂಕಿನಲ್ಲಿ ಉತ್ತಮ ಮಳೆಯಿಂದಾಗಿ ಕೆರೆಗಳು ಭರ್ತಿಯಾಗಿವೆ. ನೀರು ಪೋಲಾಗದಂತೆ ಕ್ರಮ ವಹಿಸಬೇಕು. ಹಾಗೂ ದೇವಸಮುದ್ರ ಗ್ರಾಮದಲ್ಲಿ ಕೋಡಿ ನೀರಿನಿಂದ ಜನರಿಗೆ ತೊಂದರೆಯಾಗುತ್ತಿದೆ ಇದಕ್ಕೆ ಶಾಶ್ವತ ಪರಿಹಾರವೇನು ಎಂದು ಶಾಸಕರು ಪ್ರಶ್ನಿಸಿದರು.ರಾಜಕಾಲುವೆಯನ್ನು ಅಗಲೀಕರಣಗೊಳಿಸಿ, ನೀರು ಊರಿನ ಮಧ್ಯ ಭಾಗದಲ್ಲಿ ಹರಿಯುವುದನ್ನು ತಡೆಯಲು ಕ್ರಮ ವಹಿಸುತ್ತೇವೆ ಎಂದು ಸಣ್ಣ ನೀರಾವರಿ ಇಲಾಖೆಯ ಎಇಇ ಅಪ್ಪಣ್ಣ ಉತ್ತರಿಸಿದರು.
ತಾಲೂಕಿನ ಬಿ.ಜಿ.ಕೆರೆಯಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಆರೋಗ್ಯ ಕೇಂದ್ರದ ಜಾಗದಲ್ಲಿ ಕೆಲವರು ಮನೆ ನಿರ್ಮಿಸಿಕೊಂಡಿದ್ದಾರೆ. ಅದನ್ನು ತೆರವುಗೊಳಿಸಿದ್ದಲ್ಲಿ ಸಿಬ್ಬಂದಿಗಳ ಕ್ವಾಟ್ರಸ್ ನಿರ್ಮಾಣದ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಟಿಎಚ್‌ಒ ಸಭೆಯಲ್ಲಿ ತಿಳಿಸಿದಾಗ, ಒಂದು ವಾರದಲ್ಲಿ ಸ್ಥಳಕ್ಕೆ ತೆರಳಿ ಅಲ್ಲಿನ ಮನೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಶಾಸಕರು, ತಹಸೀಲ್ದಾರ್ ಜಗದೀಶ್ ಹಾಗೂ ಸಿಪಿಐ ವಸಂತ್.ವಿ ಅಸೂದೆ ಅವರಿಗೆ ಸೂಚಿಸಿದರು.
ಅಮಾನತು ಮಾಡಲು ಸೂಚನೆಮೊಳಕಾಲ್ಮುರು: ತಾಲೂಕಿನ ಕೋನಸಾಗರ ಗ್ರಾಮದ ವಿದ್ಯಾರ್ಥಿ ನಿಲಯಕ್ಕೆ ಬಂದಿದ್ದ 30 ಹೊಸ ಮಂಚಗಳು ನಾಪತ್ತೆಯಾಗಿರುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಂಚಗಳ ಹಗರಣದಲ್ಲಿ ಭಾಗಿಯಾದ ನಿಯಲ ಪಾಲಕ ಪಯಾಜ್ ಬಾಷಾರನ್ನು ಇವತ್ತೇ ಅಮಾನತು ಮಾಡುವಂತೆ ತಾಕೀತು ಮಾಡಿದ ಘಟನೆಯೂ ಸಭೆಯಲ್ಲಿ ಜರುಗಿತು.