ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2259.56 ಕೋಟಿ ಅನುದಾನ ಮಂಜೂರು

KannadaprabhaNewsNetwork |  
Published : Jan 15, 2026, 03:00 AM IST
ಫೋಟೋ: ಅಶೋಕ್ ರೈ | Kannada Prabha

ಸಾರಾಂಶ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2023- 24ರಲ್ಲಿ ರು.1479.59 ಕೋಟಿ, 2024- 25ರಲ್ಲಿ ರು. 529 ಕೋಟಿ ಹಾಗೂ 2025- 26ರ ಜನವರಿ ತನಕ ರು. 251.06 ಕೋಟಿ ಸನುದಾನವೂ ಸೇರಿ ಒಟ್ಟು ರು. 2259.56 ಕೋಟಿ ಅನುದಾನ ಮಂಜೂರುಗೊಂಡಿದೆ.

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2023- 24ರಲ್ಲಿ ರು.1479.59 ಕೋಟಿ, 2024- 25ರಲ್ಲಿ ರು. 529 ಕೋಟಿ ಹಾಗೂ 2025- 26ರ ಜನವರಿ ತನಕ ರು. 251.06 ಕೋಟಿ ಸನುದಾನವೂ ಸೇರಿ ಒಟ್ಟು ರು. 2259.56 ಕೋಟಿ ಅನುದಾನ ಮಂಜೂರುಗೊಂಡಿದೆ. ರಸ್ತೆಗಳ ಅಭಿವೃದ್ಧಿಗಾಗಿ ಸರ್ಕಾರ ಶಾಸಕರಿಗೆ ನೀಡಿದ ರು.50 ಕೋಟಿಯಲ್ಲಿ 550 ರಸ್ತೆ ಕಾಮಗಾರಿ, 79 ಶ್ರದ್ಧಾಕೇಂದ್ರಗಳು ಸೇರಿದಂತೆ ಒಟ್ಟು 629 ಕಾಮಗಾರಿ ಟೆಂಡರ್ ಹಂತದಲ್ಲಿದೆ. ಈ ಕಾಮಗಾರಿಗಳ ನಿರ್ವಹಣೆಗೆ 5 ಗುತ್ತಿಗೆದಾರರಿಗೆ ತಲಾ ರು. 10 ಕೋಟಿಯಂತೆ ವಿಭಾಗಿಸಿ ನೀಡಲಾಗಿದೆ. ಈಗಾಗಲೇ ಶೇ.13 ಅನುದಾನ ಮಂಜೂರುಗೊಂಡಿದೆ. ಮುಂದಿನ 20 ದಿನಗಳಲ್ಲಿ ಈ ಕಾಮಗಾರಿಗಳು ಆರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ಅವರು ಸೋಮವಾರ ಶಾಸಕರ ಕಚೇರಿಯಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದಂತೆ 400 ಬೆಡ್‌ನ ಆಸ್ಪತ್ರೆಯ ಕಾಮಗಾರಿಗೆ ರು.450 ಕೋಟಿಯ ಅಂದಾಜು ವೆಚ್ಚ ಶೀಘ್ರದಲ್ಲಿ ಮಂಜೂರುಗೊಳ್ಳಲಿದೆ. ಇದನ್ನು ಸೇರಿಸಿದರೆ ಒಟ್ಟು ರು.2709.65 ಕೋಟಿ ಅನುದಾನ ಕಳೆದ 3 ವರ್ಷಗಳಲ್ಲಿ ಪುತ್ತೂರು ಕ್ಷೇತ್ರಕ್ಕೆ ಲಭಿಸಿದಂತಾಗುತ್ತದೆ. ಉಪ್ಪಿನಂಗಡಿ-ಪುತ್ತೂರು ರಸ್ತೆಯ ಚತುಷ್ಪಥ ಪೂರ್ಣಗೊಳ್ಳಲು ರು. 12 ಕೋಟಿ ಅನುದಾನ ಮಂಜೂರಾಗಿದ್ದು ಟೆಂಡರ್ ಹಂತದಲ್ಲಿದೆ ಎಂದರು.ಕೃಷ್ಣನಗರದಿಂದ ಉಪ್ಪಿನಂಗಡಿ ತನಕದ ಚತುಷ್ಪಥ ರಸ್ತೆಯ ಡಿವೈಡರ್ ನಲ್ಲಿ ವಿದ್ಯುತ್ ಲೈಟ್ ಅಳವಡಿಕೆಗೆ ರು. 5 ಕೋಟಿ ಮಂಜೂರುಗೊಂಡಿದೆ. ಬೆಟ್ಟಂಪಾಡಿ-ಪಾಣಾಜೆ ರಸ್ತೆಯ ಅಭಿವೃದ್ಧಿಗಾಗಿ ಸಿಎಸ್‌ಆರ್ ಫಂಡಿನಲ್ಲಿ 3 ಕೋಟಿ ರು. ಯೂ ಸೇರಿದಂತೆ ಒಟ್ಟು ರು. 6 ಕೋಟಿ ಅನುದಾನ ದೊರೆತಿದೆ. ಕಬಕ-ವಿಟ್ಲದ ಚತುಷ್ಪಥ ರಸ್ತೆಗಾಗಿ ರು.60 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದರಲ್ಲಿ ರು. 10 ಕೋಟಿ ಅನುದಾನ ದೊರೆತಿದೆ. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 38 ಕಿಮೀ ರಸ್ತೆಗೆ ರು. 38 ಕೋಟಿಗೆ ನೀಡಲಾದ ಪ್ರಸ್ತಾವನೆಯನ್ನು ಸರ್ಕಾರ ಅಂಗೀಕಾರ ಮಾಡಿದೆ. ಹಾರಾಡಿ ರೈಲ್ವೇ ಅಂಡರ್ ಪಾಸ್ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುವ ಹಿನ್ನಲೆಯಿಂದ ರಾಜ್ಯ ಸರ್ಕಾರದ ವತಿಯಿಂದ ಕಾಮಗಾರಿ ನಡೆಯಲಿದ್ದು, ಅದಕ್ಕಾಗಿ ರು.8 ಕೋಟಿ ಅನುದಾನ ಮಂಜೂರಾಗಿದ್ದು, ರೈಲ್ವೇ ಇಲಾಖೆಯ ಮೇಲ್ವಿಚಾರಣೆಯಲ್ಲಿ ಲೋಕೋಪಯೋಗಿ ಇಲಾಖೆ ಈ ಕಾಮಗಾರಿಯನ್ನು ನಡೆಸಲಿದೆ ಎಂದು ತಿಳಿಸಿದರು.ಹಿಂದೂ ಧಾರ್ಮಿಕ ಶ್ರದ್ಧಾಕೇಂದ್ರಗಳ ಅಭಿವೃದ್ಧಿಗಾಗಿ ಕಳೆದ ವರ್ಷ ರು. 3 ಕೋಟಿ ಹಾಗೂ ಈ ವರ್ಷ ರು. 8 ಕೋಟಿ, ಅಲ್ಪಸಂಖ್ಯಾತ ಧಾರ್ಮಿಕ ಕೇಂದ್ರಗಳಿಗೆ ರು. 9 ಕೋಟಿ ಹಾಗೂ ಜೈನಧರ್ಮದ ಶ್ರದ್ಧಾ ಕೇಂದ್ರಗಳಿಗೆ ರು. 2 ಕೋಟಿ ಅನುದಾನ ಮಂಜೂರುಗೊಂಡಿದೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪುತ್ತೂರು ಕ್ಷೇತ್ರದ ಉಪ್ಪಿನಂಗಡಿ ಬಸದಿ ಹಾಗೂ ಬಜತ್ತೂರು ಬಾರಿಕೆ ಬಸದಿಗೆ ತಲಾ ರು.1 ಕೋಟಿ ಬಿಡುಗಡೆಯಾಗಿದೆ ಎಂದರು.ಈ ಹಿಂದೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಪಕ್ಕ ಪುತ್ತೂರು ಮಹಿಳಾ ಠಾಣೆಯನ್ನು ಸ್ಥಳಾಂತರ ಮಾಡಲು ಚಿಂತನೆ ನಡೆಸಲಾಗಿತ್ತು. ಅದಕ್ಕಾಗಿ 9 ಸೆಂಟ್ಸ್ ಜಾಗವನ್ನು ಮಹಿಳಾಠಾಣೆಯ ಹೆಸರಲ್ಲಿ ಪಹಣಿಯನ್ನು ಮಾಡಲಾಗಿತ್ತು. ಆದರೆ ಈ ಮಹಿಳಾಠಾಣೆಯನ್ನು ಎ ಗ್ರೇಡ್ ಠಾಣೆಯನ್ನಾಗಿಸಲು ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಹೆಚ್ಚುವರಿ ಜಾಗದ ಅವಶ್ಯಕತೆಯ ಹಿನ್ನಲೆಯಲ್ಲಿ ಕೊಂಬೆಟ್ಟಿನಲ್ಲಿ 30 ಸೆಂಟ್ಸ್ ಸ್ಥಳವನ್ನು ನೀಡಲಾಗುವುದು. ದೇವಳದ ಪುಷ್ಕರಿಣಿಯ ಒಂದು ಭಾಗದಲ್ಲಿರುವ ಈ ಮಹಿಳಾ ಠಾಣೆ ಕೊಂಬೆಟ್ಟಿಗೆ ಸ್ಥಳಾಂತರಗೊಳ್ಳಲಿದೆ ಎಂದು ತಿಳಿಸಿದರು.ಪುತ್ತೂರಿನಲ್ಲಿ ಗುಪ್ತಚರ ಇಲಾಖೆಯ ಕಚೇರಿಯನ್ನು ತೆರೆಯಲು ಈ ಹಿಂದೆ ನೀಡಲಾಗಿದ್ದ ಪ್ರಸ್ತಾವನೆಯಂತೆ ಇದೀಗ ಸಹಾಯಕ ಗುಪ್ತಚರ ಇಲಾಖೆಯ ಕಚೇರಿಯನ್ನು ತೆರೆಯಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಪಡ್ನೂರಿನಲ್ಲಿ ಜಾಗ ಮಂಜೂರು ಮಾಡಲಾಗಿದೆ. ಇಲಾಖಾ ಕಚೇರಿ ಹಾಗೂ ವಸತಿ ಸಂಕೀರ್ಣಕ್ಕೆ ಪಡ್ನೂರಿನಲ್ಲಿ 44 ಸೆಂಟ್ಸ್ ಸ್ಥಳವನ್ನು ಮಂಜೂರುಗೊಳಿಸಲಾಗಿದೆ. ಕುರಿಯ ಗ್ರಾಮದಲ್ಲಿ ಕಾರ್ಮಿಕ ವಸತಿ ಶಾಲೆಯ ನಿರ್ಮಾಣಕ್ಕಾಗಿ 7 ಎಕ್ರೆ ಜಾಗದ ವ್ಯವಸ್ಥೆ ಮಾಡಲಾಗಿದೆ. 31ರಂದು ಸಿಎಂ ಪುತ್ತೂರಿಗೆಜ.31ರಂದು ಪುತ್ತೂರಿನ ಬನ್ನೂರಿನ ಆನೆಮಜಲು ಎಂಬಲ್ಲಿ ನಿರ್ಮಿಸಲಾದ ನ್ಯಾಯಾಲಯ ಸಂಕೀರ್ಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.31ರಂದು ಲೋಕಾರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಸಚಿವರು, ಹೈ ಕೋರ್ಟಿನ ಮುಖ್ಯ ನಾಯಾಧೀಶರು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನರೇಗಾ ಮರುನಾಮಕರಣದಿಂದ ಬಡವರ ಅನ್ನದ ಬಟ್ಟಲಿಗೆ ಕನ್ನ: ಬಿಪಿನ್ ಚಂದ್ರ ಪಾಲ್‌
ಸುಂಟಿಕೊಪ್ಪ: ಮಕ್ಕಳ ಸಂತೆ ಉದ್ಘಾಟನೆ