ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಅಂಗವಾಗಿ ಒಕ್ಕಲಿಗರ ಸಮುದಾಯ ಭವನದಲ್ಲಿ ಕುವೆಂಪು ಕಾರಂಜಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ವಿದ್ಯಾಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ಕಲ್ಪಿಸುವುದು ಜನಪ್ರತಿನಿಧಿಗಳ ಜವಾಬ್ದಾರಿ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಅಂಗವಾಗಿ ಒಕ್ಕಲಿಗರ ಸಮುದಾಯ ಭವನದಲ್ಲಿ ಗುರುವಾರ ನಡೆದ ಕುವೆಂಪು ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಒಕ್ಕಲಿಗರ ಸಂಘದ ಕೊಡುಗೆ ಅಪಾರವಾದುದು. ಒಂದು ವಿದ್ಯಾಸಂಸ್ಥೆ ಬೆಳೆಯಬೇಕಾದರೆ ಪೋಷಕರ ಪ್ರೋತ್ಸಾಹ ಮುಖ್ಯವಾದುದು. ದಾನಗಳಲ್ಲಿ ವಿದ್ಯಾದಾನ ಅತೀ ಶ್ರೇಷ್ಠವಾದುದು. ವಿದ್ಯಾವಂತರು ಈ ದೇಶದ ಆಸ್ತಿಯಾಗಿದ್ದಾರೆ. ಪೋಷಕರು ಮಕ್ಕಳಿಗೆ ಉನ್ನತಶಿಕ್ಷಣ ಕೊಡಿಸಬೇಕು ಎಂದರು.
ಸಂಘದ ಕೆಲ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಈಡೇರಿಸಲಾಗುವುದು. ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಗಮನ ಕೇಂದ್ರಿಕರಿಸಬೇಕು. ಶಿಕ್ಷಕರ ಸಲಹೆಗಳನ್ನು ಪಡೆದು ಹೆಚ್ಚಿನ ಅಂಕ ಗಳಿಸಬೇಕು ಎಂದು ಹೇಳಿದರು.
ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಮಾತನಾಡಿ, ಶೇ.98ರಷ್ಟು ಗ್ರಾಮೀಣ ಮಕ್ಕಳು ಕುವೆಂಪು ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿದ್ದಾರೆ ಎಂಬುದು ನಮ್ಮ ಹೆಮ್ಮೆಯಾಗಿದೆ. ಕಳೆದ ಆರು ವರ್ಷಗಳಿಂದಲೂ ಎಸ್‍ಎಸ್‍ಎಲ್‍ಸಿಯಲ್ಲಿ ಶೇ.100ರಷ್ಟು ಫಲಿತಾಂಶ ಬರುತ್ತಿದೆ. ಪ್ರಸಕ್ತ ವರ್ಷದಿಂದ ಪಿಯುಸಿಯಲ್ಲಿ ವಿಜ್ಞಾನ ವಿಭಾಗ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
2023-24ನೇ ಸಾಲಿನ ಉತ್ತಮ ವಿದ್ಯಾರ್ಥಿಯಾಗಿ 6ನೇ ತರಗತಿ ರಿಧಾನ್, ಎಸ್‍ಎಸ್‍ಎಲ್‍ಸಿ ಟಾಪರ್ ಆಗಿ ವೈ.ಎಸ್.ಧನ್ಯ ಹಾಗೂ ದ್ವಿತೀಯ ಪಿಯುಸಿ ಪ್ರನುತಾ ಟಾಪರ್ ಗೌರವಕ್ಕೆ ಭಾಜನರಾದರು. 1ನೇ ತರಗತಿಯಿಂದ 9ನೇ ತರಗತಿವರೆಗೆ ಅತೀಹೆಚ್ಚು ಅಂಕಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಕ್ರಮವಾಗಿ ಆದಿ ಗೌಡ ಮತ್ತು ಪೂರ್ವಿಕಾ, ನವಾಮಿಕ, ಸಮೃತ ವಿಠಲ್, ಇಶಾನಿ ಮತ್ತು ವನಿಶಾ, ಕೋಮಲ್, ಸಂಯಮ ವಿಠಲ್, ದೀಕ್ಷಿತಾ ನಾರಾಯಣ, ಚರಿತಾ, ಸಿರಿ, ಧನ್ಯತಾ, ಆದ್ವಿ, ಎಚ್.ಆರ್. ಜೀವಿತಾ ಅವರನ್ನು ಗೌರವಿಸಲಾಯಿತು.
ರಾಷ್ಟ್ರೀಯ ಮಟ್ಟದ ಕರಾಟೆ ಪಟು ಮಾನಸ, ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದ ಪ್ರತೀಕ್ಷಾ, ಶಟ್ಲ್ ಬ್ಯಾಡ್ಮಿಂಟನ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಧನ್ಯ ಮತ್ತು ಪುಷ್ಪಾಂಜಲಿ, ಚಿತ್ರಕಲೆಯಲ್ಲಿ ರಾಜ್ಯ ಮಟ್ಟದಲ್ಲಿ ಭಾಗವಹಿಸಿದ್ದ ಸಧನ್, 5000ಮೀ ಓಟದಲ್ಲಿ ರಾಜ್ಯಮಟ್ಟದ ಸ್ಪರ್ಧಿ ರಕ್ಷಿತ್, ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದ ಬಾಲಕಿಯರ ವಾಲಿಬಾಲ್ ತಂಡದ ಬಿಂದು, ಜೀವಿತಾ, ವಿದ್ಯಾಗೌರಿ, ರಿಷಿಕಾ, ಹನಿ, ಕೃತಿ, ವರ್ಣಿಕ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಚ್.ಎನ್.ರವೀಂದ್ರ, ಬಿಇಒ ಭಾಗ್ಯಮ್ಮ, ಒಕ್ಕಲಿಗರ ಸಂಘದ ಕಾರ್ಯದರ್ಶಿ ಎನ್.ಬಿ.ಗಣಪತಿ, ಖಜಾಂಚಿ ಜಿ.ಪಿ.ಲಿಂಗರಾಜು, ಶಾಲಾ ವ್ಯವಸ್ಥಾಪಕ ಕೆ.ಎಂ.ಜಗದೀಶ್, ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಪೂರ್ಣಿಮಾ ಗೋಪಾಲ್, ಮುಖ್ಯಶಿಕ್ಷಕಿ ಮಿಲ್ಡ್ರೆಡ್ ಗೋನ್ಸಾಲ್ವೆಸ್ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿಯರಾದ ಹಿಮಾನಿ ಮತ್ತು ಧನ್ಯ ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.