ಇಟಗಿ ಸಾಸಲವಾಡ ಯೋಜನೆ ನಿರ್ವಹಣೆಗೆ ಅನುದಾನದ ಸಮಸ್ಯೆ

KannadaprabhaNewsNetwork |  
Published : Nov 09, 2026, 02:30 AM IST
ಶಾಸಕ ಡಾ. ಚಂದ್ರು ಕೆ. ಲಮಾಣಿ ಮಾತನಾಡಿದರು. | Kannada Prabha

ಸಾರಾಂಶ

ತಾಲೂಕಿನ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆಯ ನಿರ್ವಹಣೆಗೆ ಅಗತ್ಯ ಅನುದಾನ ಬಿಡುಗಡೆ ಆಗದೇ ಇರುವುದರಿಂದ ಈ ಭಾಗದ ರೈತರಲ್ಲಿ ಆತಂಕ ಮೂಡಿಸಿದೆ.

ಸರ್ಕಾರಕ್ಕೆ ವರದಿ ಸಲ್ಲಿಸದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು: ಆರೋಪ

ಹೊಳೆಇಟಗಿ ಗ್ರಾಮದಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಶಾಸಕ ಚಂದ್ರು ಲಮಾಣಿಕನ್ನಡಪ್ರಭ ವಾರ್ತೆ ಶಿರಹಟ್ಟಿತಾಲೂಕಿನ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆಯ ನಿರ್ವಹಣೆಗೆ ಅಗತ್ಯ ಅನುದಾನ ಬಿಡುಗಡೆ ಆಗದೇ ಇರುವುದರಿಂದ ಈ ಭಾಗದ ರೈತರಲ್ಲಿ ಆತಂಕ ಮೂಡಿಸಿದೆ. ಅಧಿಕಾರಿಗಳ ನಿರ್ಲಕ್ಷ ಧೋರಣೆಯೇ ಇದಕ್ಕೆ ಕಾರಣ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಆರೋಪಿಸಿದರು.ತಾಲೂಕಿನ ಹೊಳೆ ಇಟಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ರೈತರಿಂದ ಬಂದ ದೂರು ಆಲಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ಬಹುತೇಕ ನೀರಾವರಿ ಯೋಜನೆಗಳ ನಿರ್ವಹಣೆಗೆ ಅನುದಾನ ಬಿಡುಗಡೆ ಆಗುತ್ತಿದೆ. ಆದರೆ ಕಳೆದ ಹಲವು ವರ್ಷಗಳಿಂದ ಇಟಗಿ ಸಾಸಲವಾಡ ಏತ ನೀರಾವರಿ ನಿರ್ವಹಣೆಗೆ ಅನುದಾನ ಬಿಡುಗಡೆಯಾಗಿಲ್ಲ. ಇದಕ್ಕೆ ಮುಖ್ಯವಾಗಿ ಅಧಿಕಾರಿಗಳ ಮತ್ತು ಶಿಂಗಟಾಲೂರ ಏತ ನೀರಾವರಿ ಯೋಜನೆ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ದೂರಿದರು.ಶಿಂಗಟಾಲೂರ ಏತ ನೀರಾವರಿ ಯೋಜನೆ ಇಲಾಖೆಯ ಅಡಿಯಲ್ಲಿ ೨೦೧೭ರಲ್ಲಿಯೇ ೨೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಆರಂಭಿಸಲಾಗಿದ್ದರೂ ಈ ವರಗೆ ಕಾಮಗಾರಿ ಪ್ರಾಥಮಿಕ ಹಂತಕ್ಕೂ ತಲುಪಿಲ್ಲ. ಜೊತೆಗೆ ತಾಲೂಕಿನ ಕೆರೆ ತುಂಬಿಸುವ ಕಾಮಗಾರಿಗೆ ಸಂಬಂಧಿಸಿದಂತೆ ₹೧೩೫ ಕೋಟಿ ಅನುದಾನದಲ್ಲಿ ಈಗಾಗಲೇ ₹೧೧೨ ಕೋಟಿ ಹಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಮಾರ್ಚ್‌ ತಿಂಗಳ ಒಳಗಾಗಿ ಇಟಗಿ ಸಾಸಲವಾದ ಏತ ನೀರಾವರಿಗೆ ಸಂಬಂಧಿಸಿದ ಎಲ್ಲ ಕೃಷಿ ಭೂಮಿಗೂ ನೀರು ಹರಿಸುವಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳ ಸೂಚಿಸಿದರು. ಈ ವೇಳೆ ಸಿಂಗಟಾಲೂರ ಏತ ನೀರಾವರಿ ಯೋಜನೆ ಎಇಇ ಹನುಮಂತಪ್ಪ ಎಂ. ಮಾತನಾಡಿ, ಯೋಜನೆಗೆ ಸಂಬಂಧಿಸಿದಂತೆ ನಿರ್ವಹಣೆಗೆ ₹೭೦ ಲಕ್ಷ ಅನುದಾನ ಬಿಡುಗಡೆಗೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿದರು. ಹೊಳೆ ಇಟಗಿ ಗ್ರಾಮದ ನೂತನ ಬಡಾವಣೆಯಲ್ಲಿ ೮೩ ಮನೆಗಳಿದ್ದು ಅಲ್ಲಿನ ನಿವಾಸಿಗಳು ಹಾಗೂ ಮಕ್ಕಳು ಗ್ರಾಮಕ್ಕೆ ಬಂದು ಹೋಗುವ ಒಂದು ಕಿಮೀ ರಸ್ತೆ ಹದಗೆಟ್ಟಿದ್ದು, ಮಳೆಗಾಲದಲ್ಲಂತೂ ಅಲ್ಲಿಯ ನಿವಾಸಿಗಳು ಮನೆಯಿಂದ ಹೊರಬರಲು ಸಾಧ್ಯವಿಲ್ಲ. ರಸ್ತೆಯನ್ನು ಸಿಸಿ ರಸ್ತೆ ಮಾಡುವಂತೆ ಶಾಸಕರಿಗೆ ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯೆಸಿದ ಶಾಸಕರು ಈಗಾಗಲೇ ವಿಬಿಜಿ-ರಾಮ್-ಜಿ ಅಡಿಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ₹೪೦ ಲಕ್ಷ ಅನುದಾನ ಮಂಜೂರಾಗಿದ್ದು, ಟೆಂಡರ್ ಹಂತದಲ್ಲಿದ್ದು ಶೀಘ್ರದಲ್ಲಿ ಕಾಮಗಾರಿ ಆರಂಭಿಸಿ ಜನರ ಸುಸಜ್ಜಿತ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ೫೦ಕ್ಕೂ ಹೆಚ್ಚು ಅಹವಾಲುಗಳು ಜನರಿಂದ ಸ್ವೀಕೃತವಾಗಿದ್ದು, ಅವುಗಳನ್ನು ಸರ್ಕಾರದ ಆದೇಶದಂತೆ ಅಧಿಕಾರಿಗಳಿಂದ ಐಪಿಜಿಆರ್‌ಎಸ್ ಪೋರ್ಟಲ್ ಮೂಲಕ ಅಪ್‌ಲೋಡ್ ಮಾಡಲಾಗಿದೆ. ಸಾಧ್ಯವಾದವುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕೊಟ್ಟರೆ ಉಳಿದವುಗಳನ್ನು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ ಎಂದು ತಹಶೀಲ್ದಾರ ಕೆ. ರಾಘವೇಂದ್ರ ರಾವು ತಿಳಿಸಿದರು.ಕಾರ್ಯಕ್ರಮದಲ್ಲಿ ಎಸಿ ಗಂಗಪ್ಪ ಎಂ., ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವೀರಯ್ಯ ಮಠಪತಿ, ತಾಪಂ ಇಒ ರಾಮಣ್ಣ ದೊಡ್ಡಮನಿ, ಮಂಜುನಾಥ ಶಂಕಿನದಾಸರ, ಚೆನ್ನವೀರಗೌಡ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ