ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಅನುದಾನ: ಸದನದಲ್ಲಿ ಡಾ. ಮಂತರ್‌ ಗೌಡ ಆಗ್ರಹ

KannadaprabhaNewsNetwork |  
Published : Aug 20, 2026, 02:45 AM IST
ಚಿತ್ರ : 18ಎಂಡಿಕೆ2: ಅಧಿವೇಶನದಲ್ಲಿ   ಶಾಸಕ ಡಾ. ಮಂತರ್ ಮಾತನಾಡಿದರು.  | Kannada Prabha

ಸಾರಾಂಶ

ವಿಧಾನಸಭಾ ಅಧಿವೇಶನದಲ್ಲಿ ಮಡಿಕೇರಿ ಶಾಸಕ ಡಾ. ಮಂತರ್‌ ಗೌಡ ಕ್ಷೇತ್ರದ ಪ್ರಮುಖ ಸಮಸ್ಯೆಗಳನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು. ಪ್ರಕೃತಿ ವಿಕೋಪದಿಂದ ಮೃತಪಟ್ಟವರ ಕುಟುಂಬಗಳಿಗೆ ತಕ್ಷಣ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಮಡಿಕೇರಿ : ವಿಧಾನಸಭಾ ಅಧಿವೇಶನದಲ್ಲಿ ಮಡಿಕೇರಿ ಶಾಸಕ ಡಾ. ಮಂತರ್‌ ಗೌಡ ಕ್ಷೇತ್ರದ ಪ್ರಮುಖ ಸಮಸ್ಯೆಗಳನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು. ಪ್ರಕೃತಿ ವಿಕೋಪದಿಂದ ಮೃತಪಟ್ಟವರ ಕುಟುಂಬಗಳಿಗೆ ತಕ್ಷಣ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅನೇಕ ಮನೆಗಳು ಹಾನಿಗೊಂಡಿವೆ. ಅಂತಹ ಕುಟುಂಬಗಳಿಗೆ ಪರಿಹಾರ ಧನ ನೀಡಿ ಸೂಕ್ತ ಪುನರ್ವಸತಿ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು. ಮಡಿಕೇರಿ ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳು ಮಳೆಯಿಂದಾಗಿ ಸಂಪೂರ್ಣ ಹದಗೆಟ್ಟಿವೆ. ರೈತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಸದನದಲ್ಲಿ ಮನವಿ ಮಾಡಿದರು. ಜಿಲ್ಲೆ ಪ್ರತಿ ವರ್ಷ ಪ್ರಕೃತಿ ವಿಕೋಪಕ್ಕೆ ತುತ್ತಾಗುತ್ತಿದೆ. ಹೀಗಾಗಿ ಶಾಶ್ವತ ಪರಿಹಾರ ಮತ್ತು ಮುಂಜಾಗ್ರತಾ ಕ್ರಮಗಳಿಗೆ ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಖಾಸಗಿ ಬಸ್‌ ಪಲ್ಟಿಯಾಗಿ ಬೈಕ್‌ ಸವಾರ ಸಾವು
ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಮುಂದುವರೆದ ಧರಣಿ