- ವಿಶ್ವ ವಿಕಲಚೇತನರ ದಿನ ಕಾರ್ಯಕ್ರಮ ಉದ್ಘಾಟಿಸಿ ಅಧಿಕಾರಿಗಳ ನಡೆಗೆ ಮಾಯಕೊಂಡ ಶಾಸಕ ಬಸವಂತಪ್ಪ ಅಸಮಾಧಾನ
ನಗರದ ಜಿಲ್ಲಾಧಿಕಾರಿ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ವಿಕಲಚೇತನರಿಗಾಗಿ ಮೋಟಾರು ಸೈಕಲ್, ಪಿಂಚಣಿ, ಬಸ್ ಪಾಸ್, ಸಾಲಸೌಲಭ್ಯ ಸೇರಿದಂತೆ ಹಲವಾರು ನೆರವುಗಳನ್ನು ಕಲ್ಪಿಸಿದೆ. ಆದರೆ ಅವರಿಗೆ ಆ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ₹2 ರಿಂದ ₹8 ಸಾವಿರ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಫಲಾನುಭವಿಗಳಿಂದ ದೂರುಗಳು ಬರುತ್ತಿವೆ. ವಿಕಲಚೇತನರ ಪೋಷಕರು ಮೊದಲೇ ಅವರ ಪೋಷಣೆ ಮತ್ತು ಕುಟುಂಬ ನಿರ್ವಹಣೆ ಕಷ್ಟವಾಗಿರುತ್ತದೆ. ಹೀಗಿರುವಾಗ ಅವರಿಂದ ಹಣ ವಸೂಲಿ ಮಾಡಬಹುದೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.ವಿಕಲಚೇತರಿಗೆ ಕೇವಲ ₹50 ಸಾವಿರದಿಂದ ₹1 ಲಕ್ಷದವರೆಗೆ ಸಾಲ ಸೌಲಭ್ಯ ಕಲ್ಪಿಸಿದರೆ ಸಾಲದು. ಅವರಿಗೆ ₹10 ರಿಂದ ₹15 ಲಕ್ಷದವರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡ್ಡಿರಹಿತ ಸಾಲಸೌಲಭ್ಯ ನೀಡಬೇಕು. ಇದರಿಂದ ಅವರು ಗುಡಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕ ಸಬಲರಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮಾತನಾಡಿ, ಛಲ, ಶ್ರದ್ಧೆ ಇದ್ದರೆ ಯಾವ ಕ್ಷೇತ್ರದಲ್ಲಾದರೂ ಮುಂದೆ ಬರಬಹುದು. ವಿಕಲಚೇತನರು ಸಾಲ ಸೌಲಭ್ಯ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಿಕೊಳ್ಳಬೇಕು. ಸರ್ಕಾರಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ವಿಕಲಚೇತನರಿಂದ ಹಣ ವಸೂಲಿ ಮಾಡುವ ಬಗ್ಗೆ ಫಲಾನುಭವಿಗಳ ದೂರುಗಳು ಬರುತ್ತಿವೆ ಎಂಬ ಮಾಹಿತಿ ಹೇಳಿದರು. ಈ ಬಗ್ಗೆ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
- - - -3ಕೆಡಿವಿಜಿ38:
-3ಕೆಡಿವಿಜಿ39: