ಮೃತರ ಖಾತೆಗೆ ಹಣ: ಲೀಡ್‌ ಬ್ಯಾಂಕ್‌ ಅಧಿಕಾರಿಗಳ ಜೊತೆ ಸಭೆಗೆ ಸೂಚನೆ

KannadaprabhaNewsNetwork |  
Published : Oct 06, 2026, 02:45 AM IST
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು | Kannada Prabha

ಸಾರಾಂಶ

ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿರುವ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿರುವ ಹಣವನ್ನು ನಿಯಮಾನುಸಾರ ಹಿಂಪಡೆಯುವುದರೊಂದಿಗೆ, ಹಿಂಪಡೆದ ಮೊತ್ತವನ್ನು ಸರ್ಕಾರಕ್ಕೆ ಶೇ.100 ರಷ್ಟು ಮರುಜಮೆ ಮಾಡಲು ಅಗತ್ಯ ಕ್ರಮವಹಿಸಬೇಕು. ಮೃತ ಫಲಾನುಭವಿಗಳ ಖಾತೆಯಿಂದ ಎಷ್ಟು ಹಣ ಡ್ರಾ ಮಾಡಲಾಗಿದೆ. ಎಷ್ಟು ಬ್ಯಾಂಕ್ ಖಾತೆಯಲ್ಲಿ ಜಮೆಯಾಗಿದೆ ಎಂಬ ಮಾಹಿತಿ ಅಗತ್ಯವಿರುವುದರಿಂದ, ಈ ನಿಟ್ಟಿನಲ್ಲಿ ಆಯಾ ತಾಲೂಕಿನಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲೂಕು ಗ್ಯಾರಂಟಿ ಅಧ್ಯಕ್ಷರು ಲೀಡ್‍ಬ್ಯಾಂಕ್ ಅಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದರು.

ಮಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿರುವ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿರುವ ಹಣವನ್ನು ನಿಯಮಾನುಸಾರ ಹಿಂಪಡೆಯುವುದರೊಂದಿಗೆ, ಹಿಂಪಡೆದ ಮೊತ್ತವನ್ನು ಸರ್ಕಾರಕ್ಕೆ ಶೇ.100 ರಷ್ಟು ಮರುಜಮೆ ಮಾಡಲು ಅಗತ್ಯ ಕ್ರಮವಹಿಸಬೇಕು. ಮೃತ ಫಲಾನುಭವಿಗಳ ಖಾತೆಯಿಂದ ಎಷ್ಟು ಹಣ ಡ್ರಾ ಮಾಡಲಾಗಿದೆ. ಎಷ್ಟು ಬ್ಯಾಂಕ್ ಖಾತೆಯಲ್ಲಿ ಜಮೆಯಾಗಿದೆ ಎಂಬ ಮಾಹಿತಿ ಅಗತ್ಯವಿರುವುದರಿಂದ, ಈ ನಿಟ್ಟಿನಲ್ಲಿ ಆಯಾ ತಾಲೂಕಿನಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲೂಕು ಗ್ಯಾರಂಟಿ ಅಧ್ಯಕ್ಷರು ಲೀಡ್‍ಬ್ಯಾಂಕ್ ಅಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದರು.

ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ಸಂಬಂಧ, ಮರಣ ಹೊಂದಿರುವ ಫಲಾನುಭವಿಗಳ ವಿವರಗಳನ್ನು ಪರಿಶೀಲಿಸಿ, ಅವರ ಖಾತೆಗಳಿಗೆ ಜಮೆಯಾಗಿರುವ ಮೊತ್ತವನ್ನು ಗುರುತಿಸಿ, ನಿಯಮಾನುಸಾರ ವಸೂಲಿ ಹಾಗೂ ಶೇ.100ರಷ್ಟು ಮರುಜಮೆ ಮಾಡುವ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕಳೆದ 5 ವರ್ಷದ ಹಿಂದೆ ಇ-ಕೆವೈಸಿ ಮಾಡಿರುವ ಎಲ್ಲ ಪ್ರಕರಣಗಳಿಗೆ ಈಗ ಮತ್ತೊಮ್ಮೆ ಅ.20ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಲು ನಿರ್ದೇಶನವಿರುತ್ತದೆ. 6,62,195 ಫಲಾನುಭವಿಗಳ ಪೈಕಿ ಶೇ.58 ರಷ್ಟು ಫಲಾನುಭವಿಗಳ ಇ-ಕೆವೈಸಿ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಭಾರತ್ ಜೋಡೋ ಯುವ ಸಂಘಗಳ ಬಗ್ಗೆ ಸಭೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ ಸಭೆಗೆ ಮಾಹಿತಿ ನೀಡಿದರು. ಪ್ರಸ್ತುತ ಆಫ್‍ಲೈನ್ ನಮೂನೆಗಳು ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಪಂಚಾಯತ್‍ಗಳಲ್ಲಿ ವಿತರಿಸಲಾಗಿದ್ದು, ಈ ಸಂಬಂಧ ಗ್ಯಾರಂಟಿ ಸದಸ್ಯರು ನಮೂನೆಗಳನ್ನು ಭರ್ತಿ ಮಾಡಲು ಸಂಪೂರ್ಣ ಸಹಕಾರ ನೀಡಲು ಕೋರಿದರು.ಸಮಿತಿಯ ಉಪಾಧ್ಯಕ್ಷರಾದ ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್, ನಾರಾಯಣ ನಾಯಕ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹಾ, ಜಯಂತಿ ಬಿಎ, ಶಾಹುಲ್ ಹಮೀದ್ ಕೆ, ಉಮಾನಾಥ್ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಸುಧೀರ್ ಕುಮಾರ್ ಶೆಟ್ಟಿ, ಸುರೇಂದ್ರ ಕಂಬಳಿ, ಆಲಿಸ್ಟನ್ ಕ್ಲೈವ್ ಡಿ ಕುನ್ಹಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಫಿನಾಡಿನಲ್ಲಿ ವರುಣನ ಆಗಮನ; ರೈತರ ಮೊಗದಲ್ಲಿ ಸಂತಸ
ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ