ಸ್ವಗ್ರಾಮದಲ್ಲಿ ಗೂಳೂರು ವಿಎಲ್‌ಒ ಭುವನಾ ಅಂತ್ಯಕ್ರಿಯೆ

KannadaprabhaNewsNetwork |  
Published : Jul 06, 2026, 01:30 AM IST
ಪೋಟೋ 7 : ಮೃತಪಟ್ಟ ವಿಎಒ ಭುವನಾ ಅವರ ಅಂತಿಮ ದರ್ಶನ ಪಡೆದ ಗ್ರಾಮಸ್ಥರು | Kannada Prabha

ಸಾರಾಂಶ

ದಾಬಸ್‍ಪೇಟೆ: ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ತುಮಕೂರು ಜಿಲ್ಲೆಯ ಗೂಳೂರು ಗ್ರಾಪಂ ವಿಎಲ್‌ಒ ಭುವನಾ ಅಂತ್ಯಕ್ರಿಯೆ ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಸ್ವಗ್ರಾಮದದಲ್ಲಿ ಭಾನುವಾರ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿತು

-ತಹಸೀಲ್ದಾರ್‌ ರಾಜೇಶ್ವರಿ ಸೇರಿದಂತೆ ಹಲವಾರು ಸರ್ಕಾರಿ ಅಧಿಕಾರಿಗಳು ಭಾಗಿ

ದಾಬಸ್‍ಪೇಟೆ: ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ತುಮಕೂರು ಜಿಲ್ಲೆಯ ಗೂಳೂರು ಗ್ರಾಪಂ ವಿಎಲ್‌ಒ ಭುವನಾ ಅಂತ್ಯಕ್ರಿಯೆ ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಸ್ವಗ್ರಾಮದದಲ್ಲಿ ಭಾನುವಾರ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿತು.

ಎಸ್‌ಐಆರ್ ಕಾರ್ಯನಿಮಿತ್ತ ವಿಎಲ್‌ಒ ಭುವನಾ ಬೆಳಗ್ಗೆ 6 ಗಂಟೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಗೂಳೂರು ಬಳಿ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಶನಿವಾರ ಸಂಜೆ ಮೃತಪಟ್ಟಿದ್ದರು. ಮೃತ ಭುವನಾ ಅಂತ್ಯಕ್ರಿಯೆಯಲ್ಲಿ ಸಂಬಂಧಿಕರು, ಸ್ನೇಹಿತರು, ಸರ್ಕಾರಿ ಅಧಿಕಾರಿಗಳು ಪಾಲ್ಗೊಂಡಿದ್ದರು.

ಈ ವೇಳೆ ತುಮಕೂರು ತಹಸೀಲ್ದಾರ್ ರಾಜೇಶ್ವರಿ ಮಾತನಾಡಿ, ಮೃತ ಭುವನಾ ಕುಟುಂಬದ ಜೊತೆ ನಾವಿರುತ್ತೇವೆ. ಸರ್ಕಾರದಿಂದ ಅವರ ಕುಟುಂಬಕ್ಕೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡುತ್ತೇವೆ ಎಂದರು.

ಸಿಎಸ್‍ಗೆ ಪತ್ರ ಬರೆದ ತುಮಕೂರು ಡಿಸಿ: ಮೃತ ಭುವನಾ ಸಾವು ಸೇರಿದಂತೆ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಸಿಎಸ್‍ಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪತ್ರ ಬರೆದಿದ್ದು, ಮೃತ ಭುವನಾ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಒಂದು ತಿಂಗಳು ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಭುವನಾ ಕುಟುಂಬಕ್ಕೆ 30 ಲಕ್ಷ ರು. ಪರಿಹಾರ ಮಂಜೂರು ಮಾಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ಹಾಗೂ ಅನುಕಂಪದ ಆಧಾರದಲ್ಲಿ ಕುಟುಂಬದ ಸದಸ್ಯರೊಬ್ಬರಿಗೆ ನೌಕರಿ ನೀಡುವ ವಿಚಾರವನ್ನೂ ಪ್ರಸ್ತಾಪಿಸಲಾಗಿದೆ. ಜತೆಗೆ ತಹಸೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ 150 ರಿಂದ 200 ಜನ ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡೀಸಿ ಪತ್ರದಲ್ಲಿ ಮುಖ್ಯ ಕಾರ್ಯದರ್ಶಿಗೆ ತಿಳಿಸಿದ್ದಾರೆ.

ಕೋಟ್..................

ಗ್ರಾಮ ಆಡಳಿತಾಧಿಕಾರಿ ಭುವನಾ ಸಾವು ದುಃಖ ತರಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನನ್ನ ಅನಾರೋಗ್ಯದಿಂದ ನಿನ್ನೆ ಬರಲು ಆಗಿಲ್ಲ. ಮೃತರ ಕುಟುಂಬಕ್ಕೆ 1 ಕೋಟಿ ರು. ಇನ್ಶೂರೆನ್ಸ್ ಹಣ 15 ದಿನದಲ್ಲಿ ಬರುತ್ತದೆ. ಚುನಾವಣಾ ಆಯೋಗದಿಂದ 30 ಲಕ್ಷ ರು. ಮಂಜೂರು ಮಾಡಲಾಗುವುದು. ಅವರ ಕುಟುಂಬದವರಿಗೆ ಸರ್ಕಾರಿ ಕೆಲಸ ಕೊಡುತ್ತೇವೆ.

-ಜಿ.ಪರಮೇಶ್ವರ್, ಡಿಸಿಎಂ

ಪೋಟೋ 7 : ಮೃತಪಟ್ಟ ವಿಎಒ ಭುವನಾ ಅಂತಿಮ ದರ್ಶನ ಪಡೆದ ಗ್ರಾಮಸ್ಥರು.

ಪೋಟೋ 8 : ಮೃತಪಟ್ಟ ವಿಎಒ ಭುವನಾ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲೆಯಲ್ಲಿ ನಿರಂತರ ಮಳೆ: ತುಂಗಾ ಡ್ಯಾಂ ಭರ್ತಿ
ಸೊರಬ, ಶಿಕಾರಿಪುರ ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಿ