ಪ್ರೊ.ಟಿ.ಶಿವಣ್ಣರ ಅಂತ್ಯಕ್ರಿಯೆ; ಡಿಸಿಎಂ ಡಿಕೆಶಿ ಅಂತಿಮ ದರ್ಶನ

KannadaprabhaNewsNetwork |  
Published : Oct 04, 2024, 01:02 AM IST
3ಕೆಎಂಎನ್ ಡಿ19 | Kannada Prabha

ಸಾರಾಂಶ

ಮೈಸೂರು ಪ್ರವಾಸದಲ್ಲಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ 3.30 ಸುಮಾರಿಗೆ ರಸ್ತೆ ಮೂಲಕ ಸೋಮನಹಳ್ಳಿಯ ಎಸ್.ಸಿ.ವಿದ್ಯಾ ಸಂಸ್ಥೆ ಆವರಣದಲ್ಲಿ ಇರಿಸಲಾಗಿದ್ದ ಪ್ರೊ.ಶಿವಣ್ಣ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಬೆಂಗಳೂರಿನಲ್ಲಿ ನಿಧನರಾದ ಎಸ್.ಎಂ.ಕೃಷ್ಣ ಅವರ ಸೋದರ ಸಂಬಂಧಿ ಹಾಗೂ ಪ್ರಾಧ್ಯಾಪಕ ಪ್ರೊ.ಟಿ.ಶಿವಣ್ಣರ ಹುಟ್ಟೂರು ತಾಲೂಕಿನ ಸೋಮನಹಳ್ಳಿಯಲ್ಲಿ ನೆರವೇರಿತು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆ.ಎಂ.ಉದಯ್, ಕೆಪಿಸಿಸಿ ಸದಸ್ಯ ಟಿ.ಎಸ್.ಸತ್ಯಾನಂದ ಸೇರಿದಂತೆ ವಿವಿಧ ರಾಜಕೀಯ ಮುಖಂಡರು ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ನಮನ ಸಲ್ಲಿಸಿದರು.

ಮೈಸೂರು ಪ್ರವಾಸದಲ್ಲಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ 3.30 ಸುಮಾರಿಗೆ ರಸ್ತೆ ಮೂಲಕ ಸೋಮನಹಳ್ಳಿಯ ಎಸ್.ಸಿ.ವಿದ್ಯಾ ಸಂಸ್ಥೆ ಆವರಣದಲ್ಲಿ ಇರಿಸಲಾಗಿದ್ದ ಪ್ರೊ.ಶಿವಣ್ಣ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ವೇಳೆ ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್, ಪತ್ನಿ ನಾಗವೇಣಿ ದಿ.ಎಸ್.ಎಂ.ಶಂಕರ್, ಮೃತರ ಪತ್ನಿ ಉಮಾದೇವಿ, ಪುತ್ರರಾದ ಅರುಣ್ ಕುಮಾರ್, ತರುಣ್ ಕುಮಾರ್, ಪುತ್ರಿ ತಾರೀಣಿ ಸುರೇಶ್ ಕುಟುಂಬ ವರ್ಗದವರು ಹಾಜರಿದ್ದರು.

ಅಪರಿಚಿತ ವಾಹನ ಡಿಕ್ಕಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

ಮದ್ದೂರು:

ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ತಾಲೂಕಿನ ಹೊರವಲಯದ ನಿಡಘಟ್ಟದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಗುರುವಾರ ಜರುಗಿದೆ.

ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದ ನಾರಾಯಣ ಪುತ್ರ ಪ್ರಕಾಶ್(45) ಮೃತ ವ್ಯಕ್ತಿ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪ್ರಕಾಶ್ ನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಫಲಕಾರಿಯಾಗದೆ ಗುರುವಾರ ಮುಂಜಾನೆ ಅಸುನೀಗಿದ್ದಾನೆ.

ಪಿತೃಪಕ್ಷದ ಹಬ್ಬಕ್ಕಾಗಿ ನೆಂಟರ ಮನೆಗೆ ಬಂದಿದ್ದ ಪ್ರಕಾಶ್ ಬೆಳಗಿನ ಜಾವ 2.30 ಸುಮಾರಿಗೆ ಸಮೀಪದ ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇನ ಆಗಮನ ಮತ್ತು ನಿರ್ಗಮನ ಮಾರ್ಗದಲ್ಲಿ ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾಗಿದೆ.

ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ