ಕನ್ನಡಪ್ರಭ ವಾರ್ತೆ ಮದ್ದೂರು
ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್‌ನಿಂದ ದಿನಗಳಲ್ಲಿ ಮತ್ತಷ್ಟು ಸಾಮಾಜಿಕ ಸೇವಾ ಕಾರ್ಯ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಟ್ರಸ್ಟ್ ನಿರ್ದೇಶಕಿ ವಿನುತಾ ಕೆ.ಎಂ.ಉದಯ್ ಹೇಳಿದರು.ಪಟ್ಟಣದ ಗುರು ಭವನದಲ್ಲಿ ತಾಲೂಕಿನ ಸರ್ಕಾರಿ ಶಾಲೆಗಳ ಬಿಸಿಯೂಟ ತಯಾರಿಕಾ ಸಿಬ್ಬಂದಿಗೆ ಸಮವಸ್ತ್ರ ವಿತರಿಸಿ ಮಾತನಾಡಿ, ಕೋವಿಡ್ ಸಂಕಷ್ಟದ ಸಮಯದಲ್ಲಿ ಉಚಿತ ಆರೋಗ್ಯ ಸೇವೆ, ಪಡಿತರ ಕಿಟ್, ಕೋವಿಡ್ ಮೃತಪಟ್ಟ ಕುಟುಂಬಗಳಿಗೆ ಆರ್ಥಿಕ ನೆರವು, ಆಸ್ಪತ್ರೆಗಳಿಗೆ ಆಂಬ್ಯುಲೆನ್ಸ್ ಸೇರಿದಂತೆ ಆರೋಗ್ಯ ಸಲಕರಣೆಗಳನ್ನು ಟ್ರಸ್ಟ್‌ನಿಂದ ನೀಡುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಟ್ರಸ್ಟ್ ಮುಂದಾಗಿತ್ತು ಎಂದರು.
ತಾಲೂಕಿನ ಶಿಥಿಲ ದೇವಾಲಯಗಳ ಜೀರ್ಣೋದ್ಧಾರಕ್ಕೆ ಅಗತ್ಯ ಆರ್ಥಿಕ ನೆರವು, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳೆಗೆ ಶೈಕ್ಷಣಿಕ ಶುಲ್ಕ ಭರಿಸುವ ಜತೆಗೆ ಇನ್ನು ಹಲವು ಜನೋಪಯೋಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕದಲೂರು ಉದಯರ್ ಚಾರಿಟಬಲ್ ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.ಬಿಇಒ ಸಿ.ಎಚ್.ಕಾಳೀರಯ್ಯ, ತಾಲೂಕಿನಲ್ಲಿ ಸರ್ಕಾರಿ ಶಾಲೆಗಳು ಶಿಥಿಲಗೊಂಡಿವೆ. ಈ ಶಾಲೆಗಳನ್ನು ಟ್ರಸ್ಟ್‌ನಿಂದ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಮಾಜಿ ಸೈನಿಕ ಸಿಪಾಯಿ ಶ್ರೀನಿವಾಸ್ ಮಾತನಾಡಿ, ಟ್ರಸ್ಟ್ ತಾಲೂಕಿನಲ್ಲಿ ಕಳೆದ ಮೂರುವರೆ ವರ್ಷಗಳಿಂದ ಹಲು ಸಮಾಜ ಮುಖಿ ಕಾರ್ಯಕ್ರಮ ಹಮ್ಮಿಕೊಂಡು ಜನರಿಗೆ ಅನುಕೂಲ ಕಲ್ಪಿಸಿದೆ ಜತೆಗೆ ಶಿಕ್ಷಣ ಕ್ಷೇತ್ರಕ್ಕೂ ತನ್ನದೆಯಾದ ಅನನ್ಯ ಕೊಡುಗೆ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಅಕ್ಷರ ದಾಸೋಹ ಇಲಾಖೆ ಸಹಾಯಕ ನಿರ್ದೇಶಕರಾದ ಮಂಗಳಮ್ಮ, ರಾಜೇಶ್ವರಿ, ಟ್ರಸ್ಟ್ ನಿರ್ದೇಶಕ ಕೆ.ಎಂ.ರವಿ, ದಿನೇಶ್ ಬಾಬು, ಪುರಸಭಾ ಸದಸ್ಯರಾದ ಕೋಕಿಲಅರುಣ್, ವೆಂಕಟೇಶ್, ಅಜ್ಲಾನ್ ಖಾನ್, ಶಿಕ್ಷಣ ಇಲಾಖೆ ರವೀಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್ ಇದ್ದರು.
ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನನಾಗಮಂಗಲ:ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಿಂದ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್, ಲ್ಯಾಟರಲ್ ಎಂಟ್ರಿ ಸ್ಕೀಂ ಅಡಿ ನೇರವಾಗಿ 2ನೇ ವರ್ಷ, 3ನೇ ಸೆಮಿಸ್ಟರ್‌ಗೆ ಡಿಪ್ಲೋಮಾ ಕೋರ್ಸ್ ಗಳ ಪ್ರವಾಶಾತಿಗೆ 2 ವರ್ಷಗಳ ಐಟಿಐ, ದ್ವಿತೀಯ ಪಿಯುಸಿ(ವಿಜ್ಞಾನ) ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾದವರಿಗೆ ಆಫ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜುಲೈ 15ರೊಳಗೆ ಸಿವಿಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್, ಕಂಪ್ಯೂಟರ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಅಂಡ್ ಎಲೆಕ್ಟ್ರಿಕ್ ಎಹಿಕಲ್ ಟೆಕ್ನಾಲಜಿ, ಆಲ್ಟರ್‌ನೇಟ್ ಎನರ್ಜಿ ಟೆಕ್ನಾಲಜಿ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ ಸೈಟ್ DTE.karnataka.gov.in ಅನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆ ಪ್ರಾಂಶುಪಾಲರು ತಿಳಿಸಿದ್ದಾರೆ.