ಮೈತ್ರಿಯಿಂದ ಮತ್ತಷ್ಟು ಶಕ್ತಿ: ಜೋಶಿ

KannadaprabhaNewsNetwork | Updated : Apr 07 2024, 07:20 AM IST

ಸಾರಾಂಶ

ಧಾರವಾಡ ಲೋಕಸಭಾ ಕ್ಷೇತ್ರವ್ಯಾಪಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಇನ್ನೂ ಹೆಚ್ಚು ಅಭಿವೃದ್ಧಿ ಕಾರ್ಯ ಮಾಡಲು ಮೈತ್ರಿ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು.

ಹುಬ್ಬಳ್ಳಿ:  ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಿಂದ ಎರಡು ಪಕ್ಷಗಳಿಗೆ ಮತ್ತಷ್ಟುಶಕ್ತಿ ಬಂದಿದ್ದು, ದೇಶದಲ್ಲಿ ಎನ್‌ಡಿಎ ಅತೀ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮತ್ತೊಮ್ಮೆ ಸಾಧನೆ ಮಾಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಇಲ್ಲಿಯ ಜೆ.ಸಿ. ನಗರದ ನೌಕರರ ಭವನದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ನಡೆದ ಬಿಜೆಪಿ, ಜೆಡಿಎಸ್‌ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಸಮನ್ವಯ ಸಭೆಯಲ್ಲಿ ಮಾತನಾಡಿದರು.

ಧಾರವಾಡ ಲೋಕಸಭಾ ಕ್ಷೇತ್ರವ್ಯಾಪಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಇನ್ನೂ ಹೆಚ್ಚು ಅಭಿವೃದ್ಧಿ ಕಾರ್ಯ ಮಾಡಲು ಮೈತ್ರಿ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು. ಈ ಹಿನ್ನೆಲೆಯಲ್ಲಿ ಹು-ಧಾ ಪೂರ್ವ ಕ್ಷೇತ್ರದಲ್ಲಿ ಹೆಚ್ಚು ಮತದಾರರ ಸಂಪರ್ಕ ಮಾಡಬೇಕು ಎಂದರು.

ಜೆಡಿಎಸ್‌ ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಮಾತನಾಡಿ, ಮೈತ್ರಿ ಪಕ್ಷಗಳು ಎಲ್ಲ ಸಮುದಾಯದ ರಕ್ಷಣೆಗೆ ಮಾಡುತ್ತಿವೆ. ರಾಜ್ಯದಲ್ಲಿರುವ ಜಲ್ವಂತ ಸಮಸ್ಯೆಗಳ ಪರಿಹರಿಸಲು ನಮ್ಮ ವರಿಷ್ಠರು ಮೈತ್ರಿ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಲ್ಲ. ಆದ್ದರಿಂದ ಒಗ್ಗಟ್ಟಿನಿಂದ ಹೋರಾಡುವುದು ಅನಿವಾರ್ಯವಾಗಿದೆ. ಲೋಕಸಭಾ ಚುನಾವಣೆ ಅಭ್ಯರ್ಥಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಗೆಲ್ಲಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.

ಹು-ಧಾ ಪೂರ್ವ ಕ್ಷೇತ್ರದಲ್ಲಿ 23 ವಾರ್ಡ್‌ಗಳಲ್ಲಿ ಪ್ರತಿ ಮನೆ ಮನೆಗೆ ಕಾರ್ಯಕರ್ತರು ಹೋಗಿ ಪ್ರಚಾರ ಮಾಡಬೇಕು. ಆ ಮೂಲಕ ಕೇಂದ್ರ ಸರ್ಕಾರದ ಸಾಧನೆ ಮತ್ತು ಅಭಿವೃದ್ಧಿ ಚಿತ್ರಣವನ್ನು ಜನರೆದುರು ತೆರೆದಿಟ್ಟು ಮತಯಾಚಿಸಬೇಕು ಎಂದು ಕರೆ ನೀಡಿದರು.

ಮಾಜಿ ಸಚಿವ ಕೆ.ಎನ್‌. ಗಡ್ಡಿ ಮಾತನಾಡಿದರು. ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಪ್ರಭು ನವಲಗುಂದಮಠ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಜೆಡಿಎಸ್‌ ಗ್ರಾಮೀಣ ಘಟಕದ ಅಧ್ಯಕ್ಷ ಬಿ.ಬಿ. ಗಂಗಾಧರಮಠ, ಹು-ಧಾ ಪೂರ್ವ ಕ್ಷೇತ್ರದ ಜೆಡಿಎಸ್‌ ಅಧ್ಯಕ್ಷ ಅಹ್ಮದ ಅರಸಿಕೇರಿ, ಜೆಡಿಎಸ್‌ ಜಿಲ್ಲಾ ಕಾರ್ಯದರ್ಶಿ ನವೀನಕುಮಾರ ಮಡಿವಾಳರ, ಮಹಿಳಾ ಜಿಲ್ಲಾಧ್ಯಕ್ಷೆ ಪೂರ್ಣಿಮಾ ಸವದತ್ತಿ, ವಿನಾಯಕ ಗಾಡಿವಡ್ಡರ, ಬಾಷಾಸಾಬ್‌ ಮುದಗಲ್‌, ಸಿದ್ದು ಮಹಾಂತಒಡೆಯರ ಸೇರಿದಂತೆ ಇತರರು ಇದ್ದರು.

Share this article