ಜಿ.ಬಿ.ಮಹಾಂತೇಶ್ ಶಿಕ್ಷಕರ ಸಂಘದ ಅಧ್ಯಕ್ಷ

KannadaprabhaNewsNetwork |  
Published : May 25, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್ ಬಾಟಂ    | Kannada Prabha

ಸಾರಾಂಶ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಬಿ.ಮಹಾಂತೇಶ್ ಅವರನ್ನು ಶಿಕ್ಷಕರು ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಜಿ.ಬಿ.ಮಹಾಂತೇಶ್ ಆಯ್ಕೆಯಾಗಿದ್ದಾರೆ.

ರಾಜ್ಯಾದ್ಯಂತ ಶನಿವಾರ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಜಿ.ಬಿ.ಮಹಾಂತೇಶ್ ಭರ್ಜರಿಯಾಗಿ ಜಯ ಗಳಿಸಿದ್ದಾರೆ.

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಜಿ.ಬಿ.ಮಹಾಂತೇಶ್, ಪ್ರಧಾನ ಕಾರ್ಯದರ್ಶಿಯಾಗಿ ಜಿ.ಟಿ.ಹನುಮಂತಪ್ಪ, ಜಿಲ್ಲಾ ಉಪಾಧ್ಯಕ್ಷರಾಗಿ ಎ.ಆರ್.ಅಶೋಕ್ ಹಾಗೂ ಜಿಲ್ಲಾ ಖಜಾಂಚಿಯಾಗಿ ಹೆಚ್.ಶಿವಮೂರ್ತಿ ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ರಾಜಪ್ಪನವರು ಅಭಿನಂದಿಸಿ ಗೌರವಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಚಳ್ಳಕೆರೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಟಿ. ವೀರೇಶ್, ಮೊಳಕಾಲ್ಮೂರು ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಕರಿಬಸಣ್ಣ, ಚಿತ್ರದುರ್ಗ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಗುರುನಾಥ ಸೇರಿದಂತೆ ಮುಖಂಡರಾದ ರುದ್ರಪ್ಪ, ಎಸ್.ಕೆಂಚಪ್ಪ, ಮಲ್ಲಿಕಾರ್ಜುನ, ಚನ್ನಕೇಶವ, ಸುದರ್ಶನ, ಸದಾನಂದ, ಸಿ.ಎನ್.ರೂಪ, ಲತಾ, ಕೃಷ್ಣಪ್ಪ, ಜಾನಪ್ಪ, ಕಲ್ಲೇಶ್ ಮೌರ್ಯ, ಬಸವರಾಜ್, ಉಮಾಪತಿ, ಉಮೇಶಯ್ಯ, ಶಶಿಧರ್, ಶಿವಸ್ವಾಮಿ, ದಿನೇಶ್, ದುರುಗೇಶ್, ರಂಗಸ್ವಾಮಿ, ಭಾಗೇಶ್ ಉಗ್ರಾಣ, ರವಿಶಂಕರ್, ಪ್ರಕಾಶ್, ಪಾಟೀಲ್, ಕರಿಯಮ್ಮ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುಸ್ತಕಗಳಿಗೆ ಸೂಕ್ತ ಮಾರುಕಟ್ಟೆ ರೂಪಿಸಿಲ್ಲ
ಅಭಿವೃದ್ಧಿ ಸಣ್ಣ ಕೈಗಾರಿಕೆಗಳ ಪಾತ್ರ ಮಹತ್ತರವಾದದ್ದು