ವಿದ್ಯಾರ್ಥಿಗಳು ಪಠ್ಯದೊಂದಿಗೆ ಲೋಕ ಜ್ಞಾನ ಗಳಿಸಲು ಜಿ.ಡಿ. ಹರೀಶ್ ಗೌಡ ಕರೆ

KannadaprabhaNewsNetwork |  
Published : May 31, 2026, 01:15 AM IST
5 | Kannada Prabha

ಸಾರಾಂಶ

ಇಂದಿನ ಸಮಾಜ ಸ್ಪರ್ಧಾತ್ಮಕ ಸಮಾಜವಾಗಿದೆ. ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳಲು ಪರಿಶ್ರಮ ಹಾಕಬೇಕು. ಅದರಲ್ಲಿ ನಿಮ್ಮ ಭವಿಷ್ಯ ಅಡಗಿದೆ. ಪೋಷಕರು, ಶಿಕ್ಷಕರು ಮಾರ್ಗದರ್ಶನ ನೀಡಬಹುದು. ಆದರೆ, ನಿಮ್ಮ ಭವಿಷ್ಯವನ್ನು ನೀವೇ ಕಟ್ಟಿಕೊಳ್ಳಬೇಕು. ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಮುಂದುವರೆಯಿರಿ.

ಕನ್ನಡಪ್ರಭ ವಾರ್ತೆ ಮೈಸೂರು

ವಿದ್ಯಾರ್ಥಿಗಳು ಪಠ್ಯದೊಂದಿಗೆ ಲೋಕ ಜ್ಞಾನ ಗಳಿಸಬೇಕು. ಯಾವ ವಿದ್ಯಾರ್ಥಿ ಸಾಮಾನ್ಯ ಜ್ಞಾನ ಸಂಪಾದಿಸುವುದಿಲ್ಲವೋ ಆತ ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದು ಕಷ್ಟ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ತಿಳಿಸಿದರು.

ಮೈಸೂರು ವಿವಿ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಶನಿವಾರ ಆಯೋಜಿಸಿದ್ದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಪತ್ರಕರ್ತರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡುತ್ತಿರುವುದು ವಿಶೇಷ. ಇಂತಹ ಸಂಪ್ರದಾಯ ಮುಂದುವರೆಯಬೇಕು. ಇಂದಿನ ಸಮಾಜ ಸ್ಪರ್ಧಾತ್ಮಕ ಸಮಾಜವಾಗಿದೆ. ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳಲು ಪರಿಶ್ರಮ ಹಾಕಬೇಕು. ಅದರಲ್ಲಿ ನಿಮ್ಮ ಭವಿಷ್ಯ ಅಡಗಿದೆ. ಪೋಷಕರು, ಶಿಕ್ಷಕರು ಮಾರ್ಗದರ್ಶನ ನೀಡಬಹುದು. ಆದರೆ, ನಿಮ್ಮ ಭವಿಷ್ಯವನ್ನು ನೀವೇ ಕಟ್ಟಿಕೊಳ್ಳಬೇಕು. ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಮುಂದುವರೆಯಿರಿ. ನೀವು ವಿದ್ಯಾವಂತರಾಗದಿದ್ದರೆ, ನಿಮ್ಮಲ್ಲಿ ಸಾಮಾನ್ಯ ಜ್ಞಾನ ಇಲ್ಲವಾದರೆ ಈ ಸಮಾಜದಲ್ಲಿ ಯಶಸ್ವಿಯಾಗಿ ಬದುಕಲು ಸಾಧ್ಯವಾಗಲ್ಲ ಎಂದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ವಿದ್ಯಾವಂತರಾಗುವ ಜೊತೆಗೆ ಕಠಿಣ ಪರಿಶ್ರಮದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಕಲಿಯಲು ಯಾವುದೇ ಕ್ಷೇತ್ರ ಅಥವಾ ರಂಗ ಆಯ್ಕೆ ಮಾಡಿಕೊಂಡರೂ ಅದರಲ್ಲಿ ಶ್ರದ್ಧೆ, ಪ್ರೀತಿ ಇರಲಿ.

ಇದೇ ವೇಳೆ ಹಿರಿಯ ಪತ್ರಕರ್ತರಾದ ಆರ್. ಕೃಷ್ಣಕುಮಾರ್, ಕೆ. ನರಸಿಂಹಮೂರ್ತಿ, ಕುಂದೂರು ಉಮೇಶ ಭಟ್ಟ, ಐತಿಚಂಡ ರಮೇಶ್ ಉತ್ತಪ್ಪ, ಎ.ಸಿ. ಪ್ರಭಾಕರ್, ಎಚ್.ಕೆ. ನಾಗೇಶ್, ಕೆ.ಟಿ. ಮಂಜುನಾಥ್, ಶಿವಕುಮಾರ್ ವಿ. ರಾವ್ ಅವರನ್ನು ಅಭಿನಂದಿಸಲಾಯಿತು. ನಂತರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ತೇರ್ಗಡೆಯಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀಸೋಮೇಶ್ವರನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಜಿಎಸ್ಎಸ್ ಸಮೂಹ ಸಂಸ್ಥೆಯ ಮುಖ್ಯಸ್ಥ ಶ್ರೀಹರಿ, ಸಂಘದ ಅಧ್ಯಕ್ಷ ಕೆ. ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ ಮೊದಲಾದವರು ಇದ್ದರು.ಪತ್ರಕರ್ತರು ಸುದ್ದಿಮನೆಗೆ ಸೀಮಿತವಾಗದೇ ಮಕ್ಕಳ ಭವಿಷ್ಯದ ಕಡೆಗೂ ಗಮನ ನೀಡಬೇಕು. ಮಕ್ಕಳ ಓದು, ಹವ್ಯಾಸದ ಕಡೆ ಗಮನ ನೀಡಿ ಪ್ರೋತ್ಸಾಹ ನೀಡುವ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು.

- ಜಿ.ಡಿ.ಹರೀಶ್ ಗೌಡ, ಶಾಸಕರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿ ಗಾದಿ: ಹರಕೆ ತೀರಿಸಿದ ಅಭಿಮಾನಿ
ನಾಳೆಯಿಂದ ಶಾಲೆ ಆರಂಭ