ಪಿಡಿಒಗಳ ಸಂಘದ ಅಧ್ಯಕ್ಷರಾಗಿ ಗಿರೀಶ ಲಕ್ಷ್ಮಣ ಕಡಕೋಳ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ,ಜಿಲ್ಲಾ ಅಧ್ಯಕ್ಷರ ನೇತೃತ್ವದಲ್ಲಿ ನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಗಿರೀಶ ಕಡಕೋಳ ಹಾಗೂ ಖಜಾಂಚಿ ಮಹೇಶ ದೇವರವರ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಮಾಡಲಾಯಿತು.
ಕನ್ನಡಪ್ರಭ ವಾರ್ತೆ ಜಮಖಂಡಿ
ಪಿಡಿಒಗಳ ಸಂಘದ ಅಧ್ಯಕ್ಷರಾಗಿ ಗಿರೀಶ ಲಕ್ಷ್ಮಣ ಕಡಕೋಳ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ,ಜಿಲ್ಲಾ ಅಧ್ಯಕ್ಷರ ನೇತೃತ್ವದಲ್ಲಿ ನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಗಿರೀಶ ಕಡಕೋಳ ಹಾಗೂ ಖಜಾಂಚಿ ಮಹೇಶ ದೇವರವರ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಮಾಡಲಾಯಿತು. ಪಿಡಿಓಗಳ ಸಂಘದ ಸರ್ವ ಸದಸ್ಯರು ಸರ್ವಾನು ಮತ ದಿಂದ ಆಯ್ಕೆ ಮಾಡಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷರು ತಿಳಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿ, ಸಾವಳಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಗಿರೀಶ ಕಡಕೋಳ ಸಂಘದ ಎಲ್ಲ ಸದಸ್ಯರು ಸರ್ವಾನುಮತದಿಂದ ತಮಗೆ ಮತ್ತೊಮ್ಮೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಎಂದಿನಂತೆ ಎಲ್ಲರನ್ನು ಒಗ್ಗೂಡಿಸಿಕೊಂಡು ಕಾರ್ಯ ನಿರ್ವಹಿಸುತ್ತೇನೆ. ಸಂಘದ ಸದಸ್ಯರ ವಿಶ್ವಾಸಕ್ಕೆ ಚುತಿ ಬರದಂತೆ ಕೆಲಸ ಮಾಡುತ್ತೇನೆ. ಯಾವುದೇ ಸಮಸ್ಯೆಗಳು ಬಂದಾಗ ಜತೆಗಿರುತ್ತೇನೆ ಎಂದು ತಿಳಿಸಿದರು. ಸಂಘದ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.