ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ವಹಿಸಲು ಜಿ.ಪಂ ಸಿಇಒ ಸೂಚನೆ

KannadaprabhaNewsNetwork |  
Published : Mar 25, 2025, 12:49 AM IST
ಸಭೆಯಲ್ಲಿ ಮಾತನಾಡುತ್ತಿರುವ ಜಿಪಂ ಸಿಇಒ ಡಾ.ಆನಂದ್‌. | Kannada Prabha

ಸಾರಾಂಶ

ಸೋಮವಾರ ಮಂಗಳೂರಿನಲ್ಲಿ ದ.ಕ. ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆನಂದ್ ಕೆ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗ್ರಾಮ ಪಂಚಾಯ್ತಿಗಳು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆನಂದ್ ಕೆ ಸೂಚಿಸಿದ್ದಾರೆ.

ಸೋಮವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೀರಿನ ಪೂರೈಕೆ ಸದಾ ಇರುವಂತೆ ಗಮನ ಹರಿಸಬೇಕು. ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ನೀರು ಸರಬರಾಜು ಪೈಪ್‍ಲೈನ್ ಅಳವಡಿಸಲು ಲೋಕೋಪಯೋಗಿ ರಸ್ತೆಗಳನ್ನು ಕತ್ತರಿಸುವ ಅಗತ್ಯವಿದ್ದರೆ ಸಂಬಂಧಪಟ್ಟ ಇಲಾಖೆಯು ಸಮನ್ವಯದೊಂದಿಗೆ ತ್ವರಿತವಾಗಿ ಕಾಮಗಾರಿ ನಡೆಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರು ಕಾಮಗಾರಿಯಲ್ಲಿ ವಿಳಂಬ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಿಇಒ ಹೇಳಿದರು.

ಗ್ರಾಮ ಪಂಚಾಯ್ತಿಗಳು ಹೊಸ ಬೋರ್‌ವೆಲ್‍ಗಳು ಅಗತ್ಯವಿದ್ದರೆ ತಮ್ಮ ಸ್ವಂತ ನಿಧಿಯಿಂದ ಕೊರೆಯಬಹುದು. ಹಾಲಿ ಬೋರ್‌ವೆಲ್‍ಗಳ ಪುನಶ್ಚೇತನವನ್ನು ಜಿಲ್ಲಾ ಪಂಚಾಯ್ತಿಯಿಂದ ಮಾಡಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭ ಅವರು ಜಲಜೀವನ್ ಮಿಷನ್ ಸೇರಿದಂತೆ ವಿವಿಧ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.

ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಜಯಲಕ್ಷ್ಮಿ, ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಎಂಜಿನಿಯರಿಂಗ್ ಇಲಾಖೆ ಇ.ಇ. ರಘುನಾಥ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಇ.ಇ. ವೇಣುಗೋಪಾಲ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾಲಹಳ್ಳಿ ಕೆಳಸೇತುವೆ ನಿರ್ಮಾಣ ಸಂಬಂಧ ಶಾಸಕರ ಸಭೆ-ಮಿ. ಮುನಿ ಪ್ರಶ್ನೆಗೆ ಉತ್ತರಿಸಲ್ಲ: ಡಿಸಿಎಂ
ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!