ಗದಗ ಮಹಾತ್ಮರು ಹುಟ್ಟಿದ ನಾಡು

KannadaprabhaNewsNetwork |  
Published : Nov 23, 2024, 12:30 AM IST
ಕಾರ್ಯಕ್ರಮದಲ್ಲಿ ವಿಪ ಸದಸ್ಯ ಎಸ್‌.ವಿ.ಸಂಕನೂರ ಅವರನ್ನ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಗದಗ ಜಿಲ್ಲೆಯಿಂದ ವಿವಿಧ ಸ್ಪರ್ಧೆಗಳಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳು ಬರಿ ವಿಶ್ವವಿದ್ಯಾಲಯಕ್ಕೆ ಮಾತ್ರ ಸೀಮಿತವಾಗಬಾರದು ಅಂತರ ವಿಶ್ವವಿದ್ಯಾಲಯ ಮಟ್ಟದಲ್ಲಿ ಗದುಗಿನ ಕೀರ್ತಿ ಪತಾಕೆ ಹಾರಿಸಬೇಕು

ಗದಗ: ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಜಿಲ್ಲೆಯ ಮಣ್ಣಿನ ಗುಣ ವಿಶೇಷವಾಗಿದೆ. ಪುಟ್ಟರಾಜ ಕವಿ ಗವಾಯಿ, ಭೀಮಸೇನ್ ಜೋಶಿಯರಂತಹ ಮಹಾತ್ಮರು ಹುಟ್ಟಿದ ನಾಡು ನಮ್ಮ ಗದಗ ಎಂದು ವಿಪ ಸದಸ್ಯ ಎಸ್‌.ವಿ. ಸಂಕನೂರ ಹೇಳಿದರು.

ನಗರದ ಆದರ್ಶ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಭವನದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಆದರ್ಶ ಶಿಕ್ಷಣ ಸಂಸ್ಥೆಯ ವಿ.ಆರ್.ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ಸಹಯೋಗದಲ್ಲಿ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವದ ಸಮಾರೋಪ ಸಮಾರಂಭ ಹಾಗೂ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇಂತಹ ಗದಗ ಜಿಲ್ಲೆಯಿಂದ ವಿವಿಧ ಸ್ಪರ್ಧೆಗಳಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳು ಬರಿ ವಿಶ್ವವಿದ್ಯಾಲಯಕ್ಕೆ ಮಾತ್ರ ಸೀಮಿತವಾಗಬಾರದು ಅಂತರ ವಿಶ್ವವಿದ್ಯಾಲಯ ಮಟ್ಟದಲ್ಲಿ ಗದುಗಿನ ಕೀರ್ತಿ ಪತಾಕೆ ಹಾರಿಸಬೇಕು. ಹುಟ್ಟಿದ ಪ್ರತಿಯೊಂದು ಮಕ್ಕಳಲ್ಲಿ ಒಂದಲ್ಲ ಒಂದು ಪ್ರತಿಭೆ ಪಡೆದುಕೊಂಡು ಬಂದಿರುತ್ತದೆ. ಅದನ್ನು ಗುರುತಿಸಿ ಬೆಳಕು ಚೆಲ್ಲುವ ಕೆಲಸ ಶಿಕ್ಷಕರು ಮಾಡಬೇಕು. ದೇಶದ ಸಂಸ್ಕೃತಿ, ಕಲೆ, ಸಂಸ್ಕಾರ ಬೇರೆ ದೇಶಗಳಿಗೆ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಬೆಳೆಸಿಕೊಂಡು ಹೋಗುವ ಮೂಲಕ ಜಗತ್ತು ನಮ್ಮ ಕಡೆ ನೋಡುವಂತಾಗಬೇಕು ಎಂದರು.

ಸಂಸ್ಥೆಯ ಉಪಾಧ್ಯಕ್ಷ ಪಿ.ಆರ್. ಅಡವಿ ಮಾತನಾಡಿ, ಜಿಲ್ಲೆಯ ವಿವಿಧ ಮಹಾವಿದ್ಯಾಲಯಗಳಿಂದ ಸುಮಾರು 700ಕ್ಕೂ ಹೆಚ್ಚು ಸ್ಪರ್ಧಾಳಗಳು ಈ ಒಂದು ಯುವಜನೋತ್ಸವದಲ್ಲಿ ಭಾಗವಹಿಸಿದ್ದೀರಿ ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ ಇಂದಿನ ಸೋಲು ಮುಂದಿನ ಗೆಲುವಿನ ಮೆಟ್ಟಿಲಾಗಬೇಕು. ಅದರೊಂದಿಗೆ ಪರಿಶ್ರಮವು ಕೂಡ ಬಹಳಷ್ಟು ಮುಖ್ಯವಾಗಿದೆ. ಇಂದಿನ ದಿನಗಳಲ್ಲಿ ಮಕ್ಕಳ ಪ್ರತಿಭೆ ನಗದೀಕರಿಸಿಕೊಂಡು ಬೆಳೆಯುವ ಕುಡಿ ಚಿವುಟಿ ಹಾಕುವಂತಹ ಸನ್ನಿವೇಶಗಳನ್ನು ಸಾಕಷ್ಟಿವೆ. ಆದರೆ, ನಿಮ್ಮ ಮಗುವಿನ ಯಶಸ್ಸು ಅದರ ಖುಷಿಯ ಮೇಲೆ ನಿಂತಿದೆ ಎಂದು ಅರಿತುಕೊಳ್ಳುವುದು ಸೂಕ್ತ. ವಿದ್ಯಾರ್ಥಿಗಳಿಗೆ ಆಯ್ಕೆಗೆ ಬೆಂಬಲ ನೀಡಿ, ಆಸಕ್ತಿಯನ್ನು ಬೆಳೆಸಿ ತರಗತಿಗಳು ಮುಗಿದ ನಂತರ ಅಂತಹ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಿ ಎಂದು ತಿಳಿಸಿದರು.

ಈ ವೇಳೆ ಗದಗ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ ಸತತ 5ನೇ ವರ್ಷ ಸಮಗ್ರ ವಿರಗ್ರಾಣಿ ಪ್ರಶಸ್ತಿ ಪಡೆದಕ್ಕಾಗಿ ಸಂಸ್ಥೆಯ ಅಧ್ಯಕ್ಷ ಕೆ.ವಿ. ಕುಷ್ಟಗಿ ಅಭಿನಂದನೆ ಸಲ್ಲಿಸಿದರು. ಸಂಸ್ಥೆಯ ಕಾರ್ಯದರ್ಶಿ ಎ.ಡಿ. ಗೋಡಕಿಂಡಿ ಸೇರಿದಂತೆ ವಿವಿಧ ಮಹಾವಿದ್ಯಾಲಯಗಳ ಆಡಳಿತ ಮಂಡಳಿ ಪ್ರಾಚಾರ್ಯರು, ತಂಡದ ನಿರ್ದೇಶಕರು ಇದ್ದರು. ಪ್ರಾ.ಕೆ.ಗಿರಿರಾಜಕುಮಾರ್ ಸ್ವಾಗತಿಸಿದರು. ಸಾಂಸ್ಕೃತಿಕ ವಿಭಾಗದ ಚೇರ್ಮನ್ ಪ್ರೊ. ಬಿ.ಪಿ. ಜೈನರ್ ನಿರೂಪಿಸಿದರು. ಉಪ ಪ್ರಾ. ಡಾ.ವಿ.ಟಿ. ನಾಯಕ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ