ಏ. 2ರಂದು ಸಂಜೆ 4ಕ್ಕೆ ಎಸ್.ಎಸ್. ಕಳಸಾಪುರ ಶೆಟ್ಟರ ಅವರ ಮನೆಯಿಂದ ಮೆರವಣಿಗೆ ಮೂಲಕ ಶ್ರೀಮಠಕ್ಕೆ ಶ್ರೀಗಳು ಆಗಮಿಸುವರು. ಸಂಜೆ 6.30ಕ್ಕೆ ಮಹಾ ರಥೋತ್ಸವ ಜರುಗುವುದು.
ಗದಗ: ಗದುಗಿನ ಐತಿಹಾಸಿಕ ಪ್ರಸಿದ್ಧ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವ ಏ. 1ರಿಂದ 4ರ ವರೆಗೆ ಜರುಗಲಿದೆ ಎಂದು ಜಾತ್ರಾ ಮಹೋತ್ಸವದ ಅಧ್ಯಕ್ಷ ವಿನಾಯಕ ಮಾನ್ವಿ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಏ. 1ರಂದು ಸಂಜೆ 6.30ಕ್ಕೆ ಜಾತ್ರಾ ಮಹೋತ್ಸವ ಪ್ರಾರಂಭೋತ್ಸವ ಜರುಗುವುದು. ಕಾರ್ಯಕ್ರಮದಲ್ಲಿ ಶಿವಮೊಗ್ಗದ ಮುರುಘಾಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು ಸಾನ್ನಿಧ್ಯ ವಹಿಸುವರು. ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಗ್ರಂಥ ಲೋಕಾರ್ಪಣೆ ಮಾಡುವರು. ಏ. 2ರಂದು ಸಂಜೆ 4ಕ್ಕೆ ಎಸ್.ಎಸ್. ಕಳಸಾಪುರ ಶೆಟ್ಟರ ಅವರ ಮನೆಯಿಂದ ಮೆರವಣಿಗೆ ಮೂಲಕ ಶ್ರೀಮಠಕ್ಕೆ ಶ್ರೀಗಳು ಆಗಮಿಸುವರು. ಸಂಜೆ 6.30ಕ್ಕೆ ಮಹಾ ರಥೋತ್ಸವ ಜರುಗುವುದು. ರಾತ್ರಿ 7.30ಕ್ಕೆ ಜರುಗುವ ಕಾರ್ಯಕ್ರಮದಲ್ಲಿ ಡಾ. ತೋಂಟದ ಸಿದ್ದರಾಮ ಶ್ರೀಗಳು ಹಾಗೂ ಗದುಗಿನ ವೀರೇಶ್ವರ ಪುಣ್ಯಾಶ್ರಮದ ಡಾ. ಕಲ್ಲಯ್ಯಜ್ಜನವರು ಸಾನ್ನಿಧ್ಯ ವಹಿಸುವರು. ಏ. 3ರಂದು ಸಂಜೆ 4ಕ್ಕೆ ಬಸವೇಶ್ವರ ನಗರದ ಕುಬಸದ ಬಂಧುಗಳ ಮನೆಯಿಂದ ಮೆರವಣಿಗೆ ಮೂಲಕ ಶ್ರೀಮಠಕ್ಕೆ ಶ್ರೀಗಳ ಆಗಮನ ಸಂಜೆ 6.30ಕ್ಕೆ ಲಘು ರಥೋತ್ಸವ, ನಂತರದ ಕಾರ್ಯಕ್ರಮದಲ್ಲಿ ಡಾ. ತೋಂಟದ ಸಿದ್ದರಾಮ ಶ್ರೀಗಳು ಸಾನ್ನಿಧ್ಯ ವಹಿಸುವರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಗೌರವ ಸನ್ಮಾನ ಜರುಗಲಿದೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಸಿ.ಸಿ. ಪಾಟೀಲ ಉಪಸ್ಥಿತರಿರುವರು. ಏ. 4ರಂದು ಸಂಜೆ 6.30ಕ್ಕೆ ಮಂಗಲೋತ್ಸವ ಜರಗಲಿದ್ದು. ಡಾ. ತೋಂಟದ ಸಿದ್ದರಾಮ ಶ್ರೀಗಳು ಸಾನಿಧ್ಯ ವಹಿಸುವರು. ಮುಳ್ಳಹಳ್ಳಿಯ ಶಿವಯೋಗಿ ಶ್ರೀಗಳು, ಬೆಳಗಾವಿ ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಶ್ರೀಗಳು, ಅಳಂದದ ಕೊರಣೇಶ್ವರ ಶ್ರೀಗಳು, ಶೇಗುಣಿಸಿಯ ಡಾ. ಮಹಾಂತ ಪ್ರಭು ಶ್ರೀಗಳು, ಬಸವಬೆಳವಿಯ ಶರಣಬಸವ ದೇವರು ಸಾನಿಧ್ಯ ವಹಿಸುವರು. ಜಾತ್ರಾ ಮಹೋತ್ಸವದ ಕಾರ್ಯದರ್ಶಿ ಚೇತನ ಅಂಗಡಿ ಮಾತನಾಡಿ, ಮಾ. 26ರಂದು ಬೆಳಗ್ಗೆ 10ಕ್ಕೆ ತೋಂಟದಾರ್ಯ ಮಠದ ಪಕ್ಕದ ಬಯಲು ಆವರಣದಲ್ಲಿ ಪುರುಷರ ಕಬಡ್ಡಿ ಪಂದ್ಯಾವಳಿ ಜರುಗಲಿದೆ. ಮಾ. 26ರಂದು ಬೆಳಗ್ಗೆ 7ಕ್ಕೆ ನಗರದ ಒಕ್ಕಲಗೇರಿ ರಾಚೋಟೇಶ್ವರ ದೇವಸ್ಥಾನದಿಂದ ಹಾಗೂ ಮಾ. 27ರಂದು ಬೆಳಗ್ಗೆ 7ಕ್ಕೆ ಎಸ್.ಎಂ. ಕೃಷ್ಣ ನಗರದಲ್ಲಿ ವ್ಯಸನಮುಕ್ತ ಸಮಾಜ ಜಾಗೃತಿಗಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಮಾ. 29ರಂದು ಬೆಳಗ್ಗೆ 10ರಿಂದ ಸಂಜೆ 4 ರವರೆಗೆ ತೋಂಟದ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಮಾ. 30ರಂದು ಬೆಳಗ್ಗೆ 10.30ಕ್ಕೆ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗಾಗಿ ವಚನ ಕಂಠಪಾಠ ಸ್ಪರ್ಧೆ, ವಚನ ನೃತ್ಯ ಮತ್ತು ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಸಂಜೆ 4ಕ್ಕೆ ಮಹಿಳೆಯರಿಂದ ವಚನ ಸಾಹಿತ್ಯದ ಪುಸ್ತಕ ಪರಿಚಯ ಕಾರ್ಯಕ್ರಮ ಜರುಗುವುದು. ಮಾ. 31ರಂದು ಬೆಳಗ್ಗೆ 10.30ಕ್ಕೆ ವಚನ ಗಾಯನ ಸ್ಪರ್ಧೆ ಹಾಗೂ ವಚನಕಾರ್ತಿಯವರ ವೇಷಭೂಷಣ ಸ್ಪರ್ಧೆ ಜರುಗಲಿದೆ. ಏ. 1ರಂದು ಮಧ್ಯಾಹ್ನ 12ಕ್ಕೆ ಬಸವೇಶ್ವರ ನಗರದ ಭಕ್ತರಿಂದ ಶ್ರೀಮಠಕ್ಕೆ ಬಸವಬುತ್ತಿ ಆಗಮಿಸಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಹಲವು ಮುಖಂಡರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.