ಗದಗ: ಅಂಗಾಂಗ ಕಸಿ ಮಾಡಿಸಿಕೊಂಡವರು ಹಾಗೂ ಅಂಗಾಂಗ ದಾನಿಗಳಲ್ಲಿ ಆತ್ಮವಿಶ್ವಾಸ ಮೂಡಿಸುವುದು, ಅಂಗಾಂಗ ದಾನದ ಕುರಿತು ಸಮಾಜದಲ್ಲಿರುವ ಭಯ ಮತ್ತು ತಪ್ಪು ಕಲ್ಪನೆಗಳನ್ನು ನಿವಾರಿಸಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆ. 16ರಂದು ಗದಗದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ "ಗದಗ್ ಟ್ರಾನ್ಸ್‌ಪ್ಲಾಂಟ್ ಗೇಮ್ಸ್- 2026 " ಆಯೋಜಿಸಲಾಗಿದೆ.
ಸಂಕಲ್ಪ ಸಂಸ್ಥೆಯ ಡಾ. ಅವಿನಾಶ ಓದುಗೌಡ್ರ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಅಂಗಾಂಗ ಕಸಿ ಮಾಡಿಸಿಕೊಂಡವರು ಹಾಗೂ ದಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನಿಂದ ಹೃದಯ ಕಸಿ ಮಾಡಿಸಿಕೊಂಡ ವ್ಯಕ್ತಿಯೊಬ್ಬರು ಕೂಡ ಪಾಲ್ಗೊಳ್ಳಲಿದ್ದಾರೆ. ಸದ್ಯ ಸುಮಾರು 75 ಮಂದಿ ನೋಂದಣಿ ಮಾಡಿಕೊಂಡಿದ್ದು, 100 ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದ ಅವರು, ಸಂಕಲ್ಪ ಕಿಡ್ನಿ ಕೇರ್ ಫೌಂಡೇಶನ್ ಆರಂಭವಾಗಿ ಸುಮಾರು ಎರಡು ವರ್ಷಗಳಾಗಿದ್ದು, ಕಿಡ್ನಿ ದಾನ ಮತ್ತು ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸುವುದರ ಜತೆಗೆ ಬಡವರಿಗೆ ಕಡಿಮೆ ವೆಚ್ಚದಲ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ದೊರಕುವಂತೆ ಸಹಾಯ ಮಾಡುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಶೋಕ ಮಂದಾಲಿ, ಡಾ. ಪವನ್ ಕುರಹಟ್ಟಿ, ಸಂಕಲ್ಪ ಕಿಡ್ನಿ ಕೇರ್ ಫೌಂಡೇಶನ್ ಹಾಗೂ ಕೆ.ಎಚ್. ಪಾಟೀಲ ಆಸ್ಪತ್ರೆಯ ವೈದ್ಯರು, ಪದಾಧಿಕಾರಿಗಳು ಇದ್ದರು. ಪಿಎಂ ಕಿಸಾನ್ ಯೋಜನೆಗೆ ಇ- ಕೆವೈಸಿ ಕಡ್ಡಾಯಗದಗ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನನಿಧಿ ಯೋಜನೆಯ ಪ್ರಯೋಜನ ಪಡೆಯಲು ಇ- ಕೆವೈಸಿ ಕಡ್ಡಾಯವಾಗಿದೆ.ಪ್ರತಿ 4 ತಿಂಗಳಿಗೊಮ್ಮೆ ₹2000ರಂತೆ 3 ಕಂತುಗಳಲ್ಲಿ ವಾರ್ಷಿಕವಾಗಿ ₹6000 ರೈತರ ಖಾತೆಗೆ ನೇರವಾಗಿ ಕೇಂದ್ರ ಸರ್ಕಾರ ನೀಡುತ್ತದೆ.ಯೋಜನೆಯಡಿ ಸಹಾಯಧನ ಪಡೆಯಲು ಪ್ರತಿ ವರ್ಷವೂ ಬಯೋಮೆಟ್ರಿಕ ಇ-ಕೆವೈಸಿ ಮಾಡಿಸಿಕೊಳ್ಳವುದು ಕಡ್ಡಾಯವಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳಲು ಪ್ರಮುಖವಾಗಿ ಎರಡು ವಿಧಾನಗಳಿವೆ. ಬಯೋಮೆಟ್ರಿಕ್ ಆಧಾರಿತ ಇ- ಕೆವೈಸಿ, ಮುಖ ಗುರುತಿಸುವಿಕೆ ಆಧರಿತ ಇ- ಕೆವೈಸಿ, ಬಯೋಮೆಟ್ರಿಕ್ ಆಧರಿತ ಇ- ಕೆವೈಸಿ ಮಾಡಿಸಿಕೊಳ್ಳಲು ಹತ್ತಿರದ ಗ್ರಾಹಕ ಸೇವಾ ಕೇಂದ್ರ, ಕರ್ನಾಟಕ ಒನ್, ಗ್ರಾಮ ಒನ್‌ಗೆ ತೆರಳಿ ಆಧಾರ ಕಾರ್ಡ್ ಅಥವಾ ಆಧಾರ್ ಸಂಖ್ಯೆ ನೀಡಬೇಕು.