ನಾಳೆ ಬೆಳಗಾವಿಯಲ್ಲಿ ಗಡಿನಾಡು ಕನ್ನಡ ಸಂಭ್ರಮ

KannadaprabhaNewsNetwork |  
Published : Oct 17, 2025, 01:01 AM IST
16ಡಿಡಬ್ಲೂಡಿ3 | Kannada Prabha

ಸಾರಾಂಶ

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಳಗಾವಿ ನಾಗನೂರು ರುದ್ರಾಕ್ಷಿಮಠದ ಸಹಕಾರದಲ್ಲಿ ನಡೆಯಲಿರುವ ಗಡಿನಾಡು ಕನ್ನಡ ಸಂಭ್ರಮವನ್ನು ಕಾನೂನು ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸುವರು.

ಧಾರವಾಡ:

ಕರ್ನಾಟಕ ವಿದ್ಯಾವರ್ಧಕ ಸಂಘವು ಗಡಿನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮವನ್ನು ಅ. 18ರಂದು ಬೆಳಗಾವಿಯ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಶಿವಕುಮಾರ ಸಂಬರಗಿಮಠ ಸಭಾಭವನದಲ್ಲಿ ಏರ್ಪಡಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಳಗಾವಿ ನಾಗನೂರು ರುದ್ರಾಕ್ಷಿಮಠದ ಸಹಕಾರದಲ್ಲಿ ನಡೆಯಲಿರುವ ಈ ಸಮಾರಂಭವನ್ನು ಕಾನೂನು ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸುವರು. ಗದಗ ಡಂಬಳದ ಡಾ. ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು ಸಚಿವ ಸತೀಶ್ ಜಾರಕಿಹೊಳಿ ಸಂಘದ ವಾರ್ಷಿಕ ವರದಿ ಬಿಡುಗಡೆ ಮಾಡುವರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಘದ ಪರಿಚಯದ ಕಿರುಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಸಂಸದ ಜಗದೀಶ ಶೆಟ್ಟರ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ. ಸರಜೂ ಕಾಟ್ಕರ್ ಭಾಗವಹಿಸಲಿದ್ದಾರೆ. ಶಾಸಕ ಆಶೀಫ್ ಸೇಠ್ ಅಧ್ಯಕ್ಷತೆ ವಹಿಸಲಿದ್ದು ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್. ಚೆನ್ನೂರ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಅಶೋಕ ಚಂದರಗಿ ಭಾಗವಹಿಸಲಿದ್ದಾರೆ. ಅದರಂತೆ ಗಡಿನಾಡ ಕನ್ನಡಿಗರ ಸಮಸ್ಯೆಗಳು ಮತ್ತು ಸವಾಲುಗಳು ಒಂದು ಅವಲೋಕನ ವಿಚಾರ ಸಂಕಿರಣವನ್ನು ಮಧ್ಯಾಹ್ನ 12ಕ್ಕೆ ನಡೆಯಲಿದೆ. ಮಧ್ಯಾಹ್ನ 2ಕ್ಕೆ ಕವಿಗೋಷ್ಠಿ, ಸಂಜೆ 4ಕ್ಕೆ ಸಾಧಕರಿಗೆ ಸನ್ಮಾನ ಹಾಗೂ ಸಮಾರೋಪ ನಡೆಯಲಿದೆ. ಸಮಾರೋಪದ ಸಾನ್ನಿಧ್ಯವನ್ನು ಬೆಳಗಾವಿಯ ಡಾ. ಅಲ್ಲಮಪ್ರಭು ಸ್ವಾಮೀಜಿ ವಹಿಸಲಿದ್ದು ಸಾಹಿತಿ ಡಾ. ಬಸವರಾಜ ಜಗಜಂಪಿ, ಡಾ. ಬಸವರಾಜ ಕಟ್ಟೀಮನಿ ಟ್ರಸ್ಟ್ ಅಧ್ಯಕ್ಷ ಡಾ. ವೈ.ಬಿ. ಹಿಮ್ಮಡಿ, ಡಾ. ಬೆಟಗೇರಿ ಕೃಷ್ಣಶರ್ಮಾ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾದ ಡಾ. ವಿನಯಾ ಒಕ್ಕುಂದ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಕೆಶಿ ಸಿಎಂ ಆದರೆ ನನಗೆ ಸಚಿವ ಸ್ಥಾನವೇ ಬೇಡ : ರಾಜಣ್ಣ
ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌